Home ಸುದ್ದಿ ಮೊಬೈಲ್ ಗೇಮ್ ಹುಚ್ಚು: ಬುದ್ಧಿ ಹೇಳಿದ್ದಕ್ಕೆ ಅಕ್ಕ-ಅಪ್ಪನನ್ನೇ ಬರ್ಬರವಾಗಿ ಚಾಕುವಿನಿಂದ ಇರಿದು ಕೊಂದ ತಮ್ಮ!
ಸುದ್ದಿ

ಮೊಬೈಲ್ ಗೇಮ್ ಹುಚ್ಚು: ಬುದ್ಧಿ ಹೇಳಿದ್ದಕ್ಕೆ ಅಕ್ಕ-ಅಪ್ಪನನ್ನೇ ಬರ್ಬರವಾಗಿ ಚಾಕುವಿನಿಂದ ಇರಿದು ಕೊಂದ ತಮ್ಮ!

Share
Share

 

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಮೊಬೈಲ್ ಆನ್‌ಲೈನ್ ಗೇಮ್‌ಗೆ ದಾಸನಾಗಿದ್ದ ಯುವಕನೊಬ್ಬ, ತನಗೆ ಬುದ್ಧಿ ಮಾತು ಹೇಳಿದ ಅಕ್ಕ ಮತ್ತು ತಂದೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯೆ ಗ್ರಾಮದಲ್ಲಿ ನಡೆದಿದೆ.

ಹೊಸ ಅಯೋಧ್ಯೆ ಗ್ರಾಮದ ನಿವಾಸಿ ಸಾಯಿ ನಾಯ್ಡು (18) ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಈತ ಗಂಗಾವತಿಯ ವಿದ್ಯಾನಿಕೇತನ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಸಾಯಿ ನಾಯ್ಡು ನಿರಂತರವಾಗಿ ಮೊಬೈಲ್‌ನಲ್ಲಿ ಆನ್‌ಲೈನ್ ಗೇಮ್ ಆಡುವುದರಲ್ಲಿ ಮಗ್ನನಾಗಿರುತ್ತಿದ್ದನು. ಈ ಅಭ್ಯಾಸವನ್ನು ಬಿಟ್ಟು ಓದಿನ ಕಡೆ ಗಮನ ಹರಿಸುವಂತೆ ಶನಿವಾರ ರಾತ್ರಿ ಅಕ್ಕ ಪ್ರಗತಿ (20) ಆತನಿಗೆ ಬುದ್ಧಿ ಮಾತು ಹೇಳಿದ್ದಾಳೆ. ಸಂಕಲ್ಪ ಕಾಲೇಜಿನಲ್ಲಿ ಬಿ.ಎ. ಓದುತ್ತಿದ್ದ ಪ್ರಗತಿಯ ಮಾತು ಸಾಯಿ ನಾಯ್ಡುಗೆ ಸಿಟ್ಟು ತರಿಸಿದೆ.

ಸಹೋದರಿಯ ಬುದ್ಧಿ ಮಾತಿನಿಂದ ಆಕ್ರೋಶಗೊಂಡ ಸಾಯಿ ನಾಯ್ಡು, ಏಕಾಏಕಿ ಚಾಕುವಿನಿಂದ ಅಕ್ಕ ಪ್ರಗತಿಯ ಮೇಲೆ ದಾಳಿ ನಡೆಸಿದ್ದಾನೆ. ಅಕ್ಕನ ಕೂಗು ಕೇಳಿ ಜಗಳ ಬಿಡಿಸಲು ಬಂದ ತಂದೆ ಯಂಕಣ್ಣ ನಾಯ್ಡು (48) ಮತ್ತು ತಾಯಿ ಸೌಜನ್ಯ (40) ಅವರ ಮೇಲೂ ಆರೋಪಿ ಅಮಾನವೀಯವಾಗಿ ಚಾಕುವಿನಿಂದ ಇರಿದಿದ್ದಾನೆ.

ತೀವ್ರವಾಗಿ ಗಾಯಗೊಂಡಿದ್ದ ಪ್ರಗತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ತಂದೆ-ತಾಯಿಯನ್ನು ತಕ್ಷಣವೇ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ (VIMS) ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಂದೆ ಯಂಕಣ್ಣ ನಾಯ್ಡು ಕೂಡ ಕೊನೆಯುಸಿರೆಳೆದಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ತಾಯಿ ಸೌಜನ್ಯ ಮತ್ತು ಆರೋಪಿ ಮಗ ಸಾಯಿ ನಾಯ್ಡುಗೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

“ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯಕ್ಕೆ ಶವಪರೀಕ್ಷೆಯ ಪ್ರಕ್ರಿಯೆಗಳು ನಡೆಯುತ್ತಿವೆ. ಗಾಯಗೊಂಡವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ತನಿಖೆಯ ನಂತರ ಹೆಚ್ಚಿನ ಮಾಹಿತಿ ನೀಡಲಾಗುವುದು.”

— ಡಾ. ರಾಮ್ ಎಲ್. ಅರಸಿದ್ದಿ, ಎಸ್‌ಪಿ, ಕೊಪ್ಪಳ.

ಒಂದೇ ಕುಟುಂಬದ ಇಬ್ಬರನ್ನು ಬಲಿ ಪಡೆದ ಈ ಘಟನೆಯು ಅಯೋಧ್ಯೆ ಗ್ರಾಮದಲ್ಲಿ ತೀವ್ರ ಆಘಾತ ಮತ್ತು ಶೋಕವನ್ನು ಉಂಟುಮಾಡಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...