Home ಸುದ್ದಿ ಜಿಲ್ಲಾ ವಾಣಿಜ್ಯೋದ್ಯಮ ಸಂಘದ ವಿವಿಧ ಪದಾಧಿಕಾರಿಗಳೊಂದಿಗೆ
ಸುದ್ದಿ

ಜಿಲ್ಲಾ ವಾಣಿಜ್ಯೋದ್ಯಮ ಸಂಘದ ವಿವಿಧ ಪದಾಧಿಕಾರಿಗಳೊಂದಿಗೆ

Share
Share

 

ಕೇಂದ್ರ ಜಂಟಿ ಕಾರ್ಯದರ್ಶಿ ಉಜ್ವಲ ಕುಮಾರ್ ಘೋಷ್ ಸಭೆ

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು :ಜೂನ್ 08 (ಕರ್ನಾಟಕ ವಾರ್ತೆ) ಜಿಲ್ಲೆಯ ವೇಗವರ್ಧಿತ ಆರ್ಥಿಕ ಬೆಳವಣಿಗೆ, ಕೈಗಾರಿಕೀಕರಣ ಮತ್ತು ಸಾಮಾಜಿಕ ಅಭಿವೃದ್ಧಿಯ ಕುರಿತು ರಾಯಚೂರು ಜಿಲ್ಲಾ ವಾಣಿಜ್ಯೋದ್ಯಮ ಸಂಘದ ವಿವಿಧ ಪದಾಧಿಕಾರಿಗಳೊಂದಿಗೆ ಭಾರತ ಸರ್ಕಾರದ ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿಗಳು ಹಾಗೂ ಮಹತ್ವಕಾಂಕ್ಷಿ ಜಿಲ್ಲೆಯ ರಾಯಚೂರಿನ ಕೇಂದ್ರ ಪ್ರಭಾರಿ ಅಧಿಕಾರಿಗಳಾದ ಉಜ್ವಲ ಕುಮಾರ್ ಘೋಷ್ ಅವರು ಸಭೆ ನಡೆಸಿದರು.

ಈ ವೇಳೆ ಜಿಲ್ಲಾ ವಾಣಿಜ್ಯೋದ್ಯಮಿಗಳ ಸಂಘದ ಎಸ್. ಕಮಲ್ ಕುಮಾರ್ ಅವರು ಮಾತನಾಡಿ, ರಾಯಚೂರಿನ ಬಹುದಿನಗಳ ಬೇಡಿಕೆಯಾದ ಐಐಐಟಿ, ಜವಳಿ ಪಾರ್ಕ್ ಸ್ಥಾಪನೆ, ಕೌಶಲ್ಯ ಅಭಿವೃದ್ಧಿ ಮತ್ತು ಕೈಗಾರಿಕಾ ತರಬೇತಿ ಕೇಂದ್ರ, ರಾಯಚೂರು ಮಹತ್ವಾಕಾಂಕ್ಷೆಯ ಜಿಲ್ಲೆಗೆ ವಿಶೇಷ ಆರ್ಥಿಕ ಮತ್ತು ಹೂಡಿಕೆ ಪ್ಯಾಕೇಜ್ ಸೇರಿದಂತೆ ಸುಮಾರು 20 ಬೇಡಿಕೆಯ ಮನವಿ ಪತ್ರವನ್ನು ನೀಡಿ, ಇವುಗಳನ್ನು ಆದಷ್ಟು ಬೇಗನೆ ಈಡೇರಿಸುವ ಮೂಲಕ ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದರು.

ಈ ವೇಳೆ ಭಾರತ ಸರ್ಕಾರದ ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿಗಳು ಹಾಗೂ ಮಹತ್ವಕಾಂಕ್ಷಿ ಜಿಲ್ಲೆಯ ರಾಯಚೂರಿನ ಕೇಂದ್ರ ಪ್ರಭಾರಿ ಅಧಿಕಾರಿಗಳಾದ ಉಜ್ವಲ ಕುಮಾರ್ ಘೋಷ್ ಅವರು ಮಾತನಾಡಿ, ಸಂಬAಧಿಸಿದ ಇಲಾಖೆಗಳೊಂದಿಗೆ ಮಾತನಾಡಿ ಮನವಿಗೆ ಸ್ಪಂದಿಸುವುದಾಗಿ ಜಿಲ್ಲಾ ವಾಣಿಜ್ಯೋದ್ಯಮ ಸಂಘದ ವಿವಿಧ ಪದಾಧಿಕಾರಿಗಳಿಗೆ ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹೊಪಾತ್ರ, ಮುಖಂಡರಾದ ಬಸವರಾಜ ಕಳಸ, ತ್ರಿವಿಕ್ರಮ ಜೋಶಿ, ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ವಿ. ಲಕ್ಷ್ಮೀಕಾಂತರೆಡ್ಡಿ, ಭರತ್ ಚಂದ್, ಶಿಲ್ಪಾ ಮೆಡಿಕೇರ್ ಲಿಮಿಟೆಡ್ ಅಧ್ಯಕ್ಷರಾದ ವಿಷ್ಣುಕಾಂತ ಭುತಡ, ರಾಸಾಯನಿಕ ತಯಾರಿಕ ಸಂಘದ ಅಧ್ಯಕ್ಷರಾದ ಡಾ.ರಮೇಶ, ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ, ಅಶೋಕ ಕುಮಾರ್ ಜೈನ್ ಸೇರಿದಂತೆ ಇತರರು ಇದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...