Home ಸುದ್ದಿ ಉಜ್ವಲ ಕುಮಾರ್ ಘೋಷ್ ಅವರಿಂದ ಎರಡನೇ ದಿನವು ಮುಂದುವರಿದ ಭೇಟಿ, ಪರಿಶೀಲನೆ.
ಸುದ್ದಿ

ಉಜ್ವಲ ಕುಮಾರ್ ಘೋಷ್ ಅವರಿಂದ ಎರಡನೇ ದಿನವು ಮುಂದುವರಿದ ಭೇಟಿ, ಪರಿಶೀಲನೆ.

Share
Share

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು ಜೂನ್ 09 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಪ್ರವಾಸದಲ್ಲಿರುವ ಭಾರತ ಸರ್ಕಾರದ ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿಗಳು ಹಾಗೂ ಮಹತ್ವಾಕಾಂಕ್ಷಿ ಜಿಲ್ಲೆಯ ರಾಯಚೂರಿನ ಕೇಂದ್ರ ಪ್ರಭಾರ ಅಧಿಕಾರಿಗಳಾದ ಉಜ್ವಲ ಕುಮಾರ್ ಘೋಷ್ ಅವರು ಜೂನ್ 09ರ ಮಂಗಳವಾರ ದಂದು ರಾಯಚೂರಿನ ವಿವಿಧ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯರಮರಸ್ ಸಕ್ಯೂಟ್ ಹೌಸ್‌ನಿಂದ ಬೆಳಿಗ್ಗೆ 08ಗಂಟೆಗೆ ನೇರವಾಗಿ ಮೊದಲಿಗೆ ರಾಯಚೂರು ನಗರದ ಓಫೆಕ್ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಸೌಕರ್ಯಗಳ ಬಗ್ಗೆ ಖುದ್ದು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದದಿಂದ ಚಿಕಿತ್ಸೆ ನೀಡಬೇಕು. ಸರ್ಕಾರದ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಹಾಗೂ ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಚಿಕಿತ್ಸೆಗಳ ಮಾಹಿತಿಯನ್ನು ನಾಮಫಲಕದಲ್ಲಿ ಪ್ರದರ್ಶನ ಮಾಡಬೇಕು. ಅಲ್ಲದೆ ಆಸ್ಪತ್ರೆಗೆ ಒಳಗೆ ಹಾಗೂ ಹೊರಗಡೆ ಸ್ವಚ್ಛತೆಯನ್ನು ಕಾಪಾಡಬೇಕೆಂದು ಸಂಬಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಆಸ್ಪತ್ರೆಯ ವಿವಿಧ ವಿಭಾಗದ ವಾರ್ಡ್ಗಳಿಗೆ ಭೇಟಿ ನೀಡಿ, ರೋಗಿಗಳ ಅಹವಾಲು ಆಲಿಸಿದರು.

ನಂತರ ಓಫೆಕ್ ಆಸ್ಪತ್ರೆಯಲ್ಲಿ ನೀತಿ ಆಯೋಗದ ವತಿಯಿಂದ ಆರಂಭಿಸಿರುವ ಟ್ರಾಮಾ ಸೆಂಟರ್‌ಗೆ ಭೇಟಿ ನೀಡಿ, ಟ್ರಾಮಾ ಸೆಂಟರ್ ಜಿಲ್ಲೆಯಲ್ಲಿ ಹೇಗೆ ನಡೆಯುತ್ತಿದೆ ಎಂದು ಅಧಿಕಾರಿಗಳನ್ನು ಕೇಳಿದರು. ಜಿಲ್ಲೆಯಲ್ಲಿ ಟ್ರಾಮಾ ಸೆಂಟರ್ ಆರಂಭದಿದ ಜಿಲ್ಲೆಗೆ ಅನುಕೂಲವಾಗಿದೆ. ಜಿಲ್ಲೆಯ ಜನರು ಬೇರೆಕಡೆಗೆ ಹೋಗುವುದು ತಪ್ಪಿದೆ. ಜನರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತದೆ ಎಂದು ಓಫೆಕ್ ಆಸ್ಪತ್ರೆಯ ಅಧಿಕಾರಿಗಳು ಮಹತ್ವಾಕಾಂಕ್ಷಿ ಜಿಲ್ಲೆಯ ರಾಯಚೂರಿನ ಕೇಂದ್ರ ಪ್ರಭಾರ ಅಧಿಕಾರಿಗಳಾದ ಉಜ್ವಲ ಕುಮಾರ್ ಘೋಷ್ ಅವರಿಗೆ ಮಾಹಿತಿ ನೀಡಿದರು.

ನಂತರ ಮನ್ಸಲಾಪುರಿನ ಘನತ್ಯಾಜ ನಿರ್ವಹಣೆ ಘಟಕ್ಕೆ ಭೇಟಿ ನೀಡಿ, ಘನತ್ಯಾಜವನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಸುತ್ತಮುತ್ತಲಿನ ಜನರಿಗೆ ತೊಂದರೆಯಾಗದತೆ ನಿರ್ವಹಣೆ ಮಾಡಬೇಕೆಂದು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

 

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...