Home ಸುದ್ದಿ ​ನಗು ಅರಳಲಿ, ಜ್ಞಾನ ಬೆಳಗಲಿ: ಶಾಸಕರ ಶಿವರಾಜ್ ತಂಗಡಗಿ. ಹುಟ್ಟುಹಬ್ಬದ ಸಂಭ್ರಮ – ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಪೆನ್ ಉಡುಗೊರೆ.
ಸುದ್ದಿ

​ನಗು ಅರಳಲಿ, ಜ್ಞಾನ ಬೆಳಗಲಿ: ಶಾಸಕರ ಶಿವರಾಜ್ ತಂಗಡಗಿ. ಹುಟ್ಟುಹಬ್ಬದ ಸಂಭ್ರಮ – ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಪೆನ್ ಉಡುಗೊರೆ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಕನಕಗಿರಿ: ಶಿವರಾಜ್ ತಂಗಡಗಿ ರವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 400 ಪೆನ್ ಹಾಗೂ 400 ನೋಟ್‌ಬುಕ್‌ಗಳನ್ನು ನವಲಿ ಗ್ರಾಮದ ಕಾಂಗ್ರೆಸ್ ಮುಖಂಡರು ಮತ್ತು ಅಭಿಮಾನಿಗಳು,ವಿದ್ಯಾರ್ಥಿಗಳಿಗೆ  ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿ ಶಿಕ್ಷಣ ಸಾಮಗ್ರಿಗಳನ್ನು ಸ್ವೀಕರಿಸಿದರು.

ಸಚಿವ ಶಿವರಾಜ್ ತಂಗಡಗಿ ಅವರು ತಮ್ಮ ಜನ್ಮದಿನವನ್ನು ಸರಳವಾಗಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದರು. ಗಿಡ ನೆಡುವುದು, ರಕ್ತದಾನ ಮಾಡುವುದು ಹಾಗೂ ಪುಸ್ತಕ, ಪೆನ್, ನೋಟ್‌ಬುಕ್‌ಗಳನ್ನು ನೀಡುವಂತೆ ಮನವಿ ಮಾಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಶಿಕ್ಷಣಕ್ಕೆ ನೆರವಾಗುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಓದಿನ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುತ್ತವೆ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಸಹ ಸಂತಸ ವ್ಯಕ್ತಪಡಿಸಿ ಶಾಸಕರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಹೇಮಪ್ಪ ಹರಿಜನ, ನಾಗರಾಜ್ ತಳವಾರ್, ಪೀರ್ ಸಾಬ್, ಜಂಬಣ್ಣ ಆದಾಪುರ್,ವೀರೇಶ್, ಶಾಹಿದ್,ಪ್ರಮೋದ್ ಆದಾಪುರ, ಭಾಷಾ ಸಾಬ್, ಸದ್ದಾಮ್, ಜಡಿಯಪ್ಪ ಗಾಳಿ, ಅಯ್ಯಣ್ಣ, ನಿರುಪಾದಿ ಬೋವಿ, ಮಹಾದೇವ್, ಕಾಳಪ್ಪ ಆಚಾರಿ ಶಾಲಾ SDMC ಅಧ್ಯಕ್ಷ ಲಚ್ಚಪ್ಪ ನಾಯಕ್, ಹಾಗೂ ಸರ್ವ ಸದಸ್ಯರು ಮತ್ತು ಸಹ ಶಿಕ್ಷಕರು ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಇದ್ದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...