Home ಸುದ್ದಿ ರಾಯಚೂರು: ಬಸ್ ನಿಲ್ದಾಣದಲ್ಲಿ ಮಹಿಳೆಗೆ ಅನುಚಿತ ವರ್ತನೆ; ವ್ಯಕ್ತಿಗೆ ಖಾರದ ಪುಡಿ ಎರಚಿ ಪಾಠ ಕಲಿಸಿದ ಧೀರ ಮಹಿಳೆ!
ಸುದ್ದಿ

ರಾಯಚೂರು: ಬಸ್ ನಿಲ್ದಾಣದಲ್ಲಿ ಮಹಿಳೆಗೆ ಅನುಚಿತ ವರ್ತನೆ; ವ್ಯಕ್ತಿಗೆ ಖಾರದ ಪುಡಿ ಎರಚಿ ಪಾಠ ಕಲಿಸಿದ ಧೀರ ಮಹಿಳೆ!

Share
Share

 

ಮರ್ಚಡ್ ಡೇಸ್ ಸುದ್ದಿ.

ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಓರ್ವ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ, ಅದೇ ಮಹಿಳೆ ಖಾರದ ಪುಡಿ ಎರಚಿ ತಕ್ಕ ಪಾಠ ಕಲಿಸಿರುವ ಘಟನೆ ನಡೆದಿದೆ.

ಬಸ್ ನಿಲ್ದಾಣದ ಆವರಣದಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ಕಿರುಕುಳ ನೀಡುವ ಮೂಲಕ ಅನುಚಿತವಾಗಿ ವರ್ತಿಸಿದ್ದಾನೆ. ಇದರಿಂದ ಕೆರಳಿದ ಆ ಮಹಿಳೆ, ತಕ್ಷಣವೇ ಪಕ್ಕದ  ಹೋಟೆಲ್‌ಗೆ ತೆರಳಿ ಖಾರದ ಪುಡಿಯನ್ನು ತಂದಿದ್ದಾಳೆ. ಬಳಿಕ ಆ ವ್ಯಕ್ತಿಯ ಕಣ್ಣಿಗೆ ಖಾರದ ಪುಡಿಯನ್ನು ಎರಚಿ, ಆತನ ದುರ್ವರ್ತನೆಗೆ ತಕ್ಕ ಉತ್ತರ ನೀಡಿದ್ದಾಳೆ.

ಮಹಿಳೆಯ ಈ ದಿಟ್ಟತನವನ್ನು ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರು ಮತ್ತು ಪ್ರಯಾಣಿಕರು ಮೆಚ್ಚಿಕೊಂಡಿದ್ದಾರೆ. ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ವಿರುದ್ಧ ಇಂತಹ ದಿಟ್ಟ ಪ್ರತಿಭಟನೆಗಳು ನಡೆಯಬೇಕೆಂದು ಸ್ಥಳದಲ್ಲಿದ್ದ  ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...