Home ಸುದ್ದಿ ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳ 7, 8 & 9ನೇ ತರಗತಿ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನ.
ಸುದ್ದಿ

ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳ 7, 8 & 9ನೇ ತರಗತಿ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನ.

Share
Share

ಮರ್ಚೆಡ್ ಡೇಸ್ ಸುದ್ದಿ.

ಕೊಪ್ಪಳ ಜೂನ್ 11(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕೆ.ಆರ್.ಇ.ಐ.ಸ್) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ .ಜಿಲ್ಲೆಯ

ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಯ ಸೀಟುಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆ ಹಾಗೂ ಪ್ರವೇಶಾತಿಗೆ ಸಂಬಧಿಸಿದ ಸಂಪೂರ್ಣ ಮಾಹಿತಿಯನ್ನು ಕೊಪ್ಪಳ ಜಿಲ್ಲಾ ಆಡಳಿತದ ಅಧಿಕೃತ ವೆಬ್‌ಸೈಟ್ www.Koppal.nic.in ನಲ್ಲಿ ಪ್ರಕಟಿಸಲಾಗಿದೆ. ವೆಬ್‌ಸೈಟ್‌ನ ಮುಖಪುಟದಲ್ಲಿ “2026-27ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಯ ಸೀಟುಗಳನ್ನು ಭರ್ತಿ ಮಾಡಿಕೊಳ್ಳುವ ಬಗ್ಗೆ” ಎಂಬ ಶೀರ್ಷಿಕೆಯಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿ ನಿಯಮಾವಳಿಗಳನ್ನು ಪರಿಶೀಲಿಸಿ ಜೂನ್ 30 ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೂಗಲದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...