ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು: ಸುಲ್ತಾನಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮುರಾನೂರು ಉಪಕೇಂದ್ರದ ಸುಲ್ತಾನಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ’ಯನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಆರೋಗ್ಯದ ಕುರಿತು ಅರಿವು ಮೂಡಿಸಿದರು.
ಮಲೇರಿಯಾ ತಡೆಗಟ್ಟುವ ಕ್ರಮಗಳ ಕುರಿತು ಮಾಹಿತಿ ನೀಡಲಾಗಿದ್ದು, ಇದರೊಂದಿಗೆ 100 ದಿನಗಳ ಟಿಬಿ (ಕ್ಷಯರೋಗ) ಕಾರ್ಯಕ್ರಮ, ಪಲ್ಸ್ ಪೋಲಿಯೋ ಅಭಿಯಾನ, ಹಾಗೂ ಸೊಳ್ಳೆಗಳಿಂದ ಹರಡುವ ರೋಗಗಳು ಮತ್ತು ಅವುಗಳಿಂದ ರಕ್ಷಣೆ ಪಡೆಯುವ ಬಗೆಯ ಕುರಿತು ಆರೋಗ್ಯ ಶಿಕ್ಷಣವನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅರುಣಾಬಾಯಿ, ಶಾಲೆಯ ಮುಖ್ಯ ಶಿಕ್ಷಕಿ ರಾಜೇಶ್ವರಿ, ಸಹ ಶಿಕ್ಷಕರಾದ ಉಮೇಶ್, ಸಿದ್ದಾರೂಢ, ಗೌರಮ್ಮ, ಗಂಗಾಧರ್ ಹಾಗೂ ಆಶಾ ಕಾರ್ಯಕರ್ತೆ ಇಂದಿರಮ್ಮ ಅವರು ಉಪಸ್ಥಿತರಿದ್ದರು.
ಈ ಜಾಗೃತಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಅರಿವು ಮೂಡಿಸುವ ಪ್ರಯತ್ನವನ್ನು ನಡೆಸಲಾಯಿತು.