Home ಸುದ್ದಿ ಬಾಲ ಕಾರ್ಮಿಕ ಪದ್ಧತಿ ನಿವಾರಣೆಗೆ ಜಾಗೃತಿ ಅತ್ಯವಶ್ಯಕ: ನ್ಯಾ. ಸಿದ್ದರಾಮಪ್ಪ ಕಲ್ಯಾಣರಾವ್.
ಸುದ್ದಿ

ಬಾಲ ಕಾರ್ಮಿಕ ಪದ್ಧತಿ ನಿವಾರಣೆಗೆ ಜಾಗೃತಿ ಅತ್ಯವಶ್ಯಕ: ನ್ಯಾ. ಸಿದ್ದರಾಮಪ್ಪ ಕಲ್ಯಾಣರಾವ್.

Share
Share

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು ಜೂನ್ 12 (ಕರ್ನಾಟಕ ವಾರ್ತೆ): ಸಮಾಜದಲ್ಲಿ ಬೇರು ಬಿಟ್ಟಿರುವ ಹಲವು ಸಾಮಾಜಿಕ ಪಿಡುಗುಗಳಿಗೆ ಶಿಕ್ಷಣವೇ ಅಸ್ತ್ರ. ಅದರಂತೆ ಬಾಲಕಾರ್ಮಿಕ ಪದ್ಧತಿ ನಿವಾರಣೆಯಾಗಬೇಕಾದರೆ ಎಲ್ಲರಿಗೂ ಶಿಕ್ಷಣ ಸಿಗುವಂತಾಗಬೇಕು. ಅರಿವಿನ ಕೊರತೆಯಿಂದಾಗಿಯೇ ಇಂತಹ ಪದ್ಧತಿಗಳು ಇಂದಿಗೂ ಜೀವಂತವಾಗಿವೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಸಿದ್ದರಾಮಪ್ಪ ಕಲ್ಯಾಣರಾವ್ ಅವರು ಹೇಳಿದರು.

ಜೂನ್ 12ರ ಶುಕ್ರವಾರ ದಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮAದಿರದಲ್ಲಿ

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೋಲಿಸ್ ಇಲಾಖೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಘಟಕ, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಬಾಲಕಾರ್ಮಿಕ ಯೊಜನೆ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2026ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕುರಿತು ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಣೆ ಮಾಡಬೇಕು. ವಿವಿಧ ಕಾರಣಗಳಿಗೆ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರುತಿಸಿ ಶಿಕ್ಷಣ ನೀಡಿದಾಗ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗುತ್ತದೆ ಎಂದರು.

ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಅವರ ಶಿಕ್ಷಣ ಹಕ್ಕಿನಿಂದ ವಂಚಿಸಿ, ದುಡಿಮೆಗೆ ಬಳಸುವುದು ಕಾನೂನು ಪ್ರಕಾರ ಅಪರಾಧ. ಇದಕ್ಕಾಗಿ, ಮಕ್ಕಳಿಂದ ದುಡಿಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನಿನಡಿ ಶಿಕ್ಷೆ ವಿಧಿಸಲು ಅವಕಾಶವಿದೆ. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ನಿಗಾ ಇಡಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ ಅವರು ಮಾತನಾಡಿ, ಬಾಲಕಾರ್ಮಿಕ ಪದ್ದತಿಯನ್ನ ಬೇರು ಸಮೇತ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದ ಈ ಪ್ರಯತ್ನಕ್ಕೆ ಸಂಘ–ಸAಸ್ಥೆ, ಸಂಘಟನೆಗಳು ಹಾಗೂ ಸಮುದಾಯಗಳು ಸಹ ಕೈ ಜೋಡಿಸಿದರೆ ಈ ಪದ್ಧತಿಗೆ ಸಂಪೂರ್ಣ ಕಡಿವಾಣ ಬೀಳಲಿದೆ ಎಂದು ಹೇಳಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ ಅವರು ಮಾತನಾಡಿ, ಬಾಲ ಕಾರ್ಮಿಕರನ್ನು ಪತ್ತೆಗೆ ಸಾರ್ವಜನಿಕರು ಸಹ ನೆರವಾಗಬೇಕು. ತಮ್ಮ ಸುತ್ತಮುತ್ತಲಿನ ಅಂಗಡಿ, ಹೋಟೆಲ್, ಕಾರ್ಖಾನೆ, ತೋಟ ಸೇರಿದಂತೆ ಎಲ್ಲಿಯಾದರೂ ಬಾಲ ಕಾರ್ಮಿಕರು ಕಂಡುಬAದಲ್ಲಿ ಕಾರ್ಮಿಕ ಇಲಾಖೆಯ 1098 ಸಹಾಯವಾಣಿಗೆ ಮಾಹಿತಿ ನೀಡಬೇಕು. ಆಗ ಅಧಿಕಾರಿಗಳು ಬಂದು ಮಕ್ಕಳನ್ನು ರಕ್ಷಿಸುತ್ತಾರೆ ಎಂದರು.

14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. 14 ವರ್ಷ ಮೇಲ್ಪಟ್ಟು 18 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಅಪಾಯಕಾರಿ ವೃತ್ತಿ ಮತ್ತು ಪ್ರಕ್ರಿಯೆಗಳಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಕೆಲಸಕ್ಕೆ ನೇಮಿಸಿಕೊಂಡಲ್ಲಿ ತಪ್ಪಿತಸ್ಥ ಮಾಲೀಕರ ವಿರುದ್ಧ ಸಂಬಧ ಪಟ್ಟ ಪೊಲೀಸ್ ಠಾಣೆಯಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ಹಾಗೂ ತಿದ್ದುಪಡಿ ಕಾಯ್ದೆ-2016ರಡಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ದುಡಿಯುವ ಮಕ್ಕಳು ಎಲ್ಲಿಯಾದರೂ ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098/112 ಗೆ ಉಚಿತವಾಗಿ ಕರೆ ಮಾಡಿ ಮಾಹಿತಿ ನೀಡುವುದರ ಮೂಲಕ ಸಮಾಜದಲ್ಲಿರುವ ಬಾಲಕಾರ್ಮಿಕ ಪದ್ಧತಿ ಎಂಬ ಪಿಡುಗನ್ನು ಹೋಗಲಾಡಿಸಲು ಎಲ್ಲಾರು ಸಹಕಾರ ನೀಡಬೇಕೆಂದರು.

ಪ್ರಮಾಣ ವಚನ: ನಾನು ಸತ್ಯವಾಗಿ, ಪ್ರಾಮಾಣಿಕವಾಗಿ ಹಾಗೂ ಆತ್ಮಸಾಕ್ಷಿಯಾಗಿ ಪ್ರಮಾಣ ಮಾಡುವುದೇನೆಂದರೆ, ನಾನು ವಾಸಿಸುವ ಸುತ್ತ ಮುತ್ತಲಿನ ಪ್ರದೇಶ ಹಾಗೂ ನಾನು ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲಕಾರ್ಮಿಕರು ಕಂಡುಬAದಲ್ಲಿ ನೇಮಿಸಿಕೊಂಡ ಮಾಲೀಕರು ಹಾಗೂ ಪೋಷಕರಿಗೆ ತಿಳುವಳಿಕೆ ಹೇಳಿ ಮಗುವನ್ನು ಶಾಲೆಗೆ ಸೇರಿಸುತ್ತೇನೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತೊಡಗಿಸಿಕೊಂಡು ತಯಾರಿಸಲ್ಪಟ್ಟ ಯಾವುದೇ ವಸ್ತುವನ್ನು ಉಪಯೋಗಿಸುವುದಿಲ್ಲ ಮತ್ತು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸೇವೆಯನ್ನು ಪಡೆಯುವುದಿಲ್ಲವೆಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವಾದ ಇಂದು ಪ್ರಮಾಣ ಮಾಡುತ್ತೇನೆ ಎಂದು ರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಸಿದ್ದರಾಮಪ್ಪ ಕಲ್ಯಾಣರಾವ್ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2026ರ ಕಾರ್ಯಕ್ರಮದ ಅಂಗವಾಗಿ ಪ್ರಮಾಣ ವಚನ ಭೋದಿಸಿದರು.

ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ: ಬೆಳಿಗ್ಗೆ 09.20ರ ನಂತರ ನಗರದ ತಹಶಿಲ್ದಾರ್ ಕಾರ್ಯಾಲಯದಿಂದ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮAದಿರದವರೆಗೆ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2026ರ ಕಾರ್ಯಕ್ರಮದ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ಜಾಥಾದಲ್ಲಿ ಪ್ರತಿಯೊಬ್ಬ ಮಗುವಿನ ಹಕ್ಕು ಶಿಕ್ಷಣ, ದುಡಿಮೆಯಲ್ಲ. ಕೈಯಲ್ಲಿ ಕೆಲಸದ ಆಯುಧ ಬೇಡ, ಜ್ಞಾನದ ಪುಸ್ತಕವಿರಲಿ. ಬಾಲಕಾರ್ಮಿಕ ಪದ್ಧತಿ ದೇಶಕ್ಕೆ ಕಳಂಕ.! ಬಾಲ್ಯದಲ್ಲಿ ದುಡಿಮೆ ಮಕ್ಕಳ ಹಕ್ಕುಗಳ ಕಸಿತ, ಶಿಕ್ಷಣವೇ ಅವರ ನಿಜವಾದ ಭವಿಷ್ಯ ಎಂಬ ಘೋಷಣೆಗಳ ಸಾರ್ವಜನಿಕರ ಗಮನ ಸೆಳೆಯಿತು.

ಜಾಥಾದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ಇತರರು ವಿದ್ಯಾರ್ಥಿಗಳಿಗೆ ಸಾಥ್ ನೀಡಿದರು.

ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತ ಶರಣಪ್ಪ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಸುದರ್ಶನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ರಾಯಚೂರು ವೃತ್ತ ಕಾರ್ಮಿಕ ನಿರೀಕ್ಷಕಿ ಕುಮಾರಿ ಪ್ರಿಯಾಂಕ ಸೇರಿದಂತೆ ಕಾರ್ಮಿಕ ಇಲಾಖೆಯ ವಿವಿಧ ಅಧಿಕಾರಿಗಳು, ವಿವಿಧ ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...