Home ಸುದ್ದಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ‘ಬಂಪರ್ ಗಿಫ್ಟ್’ – ಇಂದಿನಿಂದಲೇ ಉಚಿತ ಬಸ್ ಪಾಸ್ ವಿತರಣೆ ಆರಂಭ.
ಸುದ್ದಿ

ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ‘ಬಂಪರ್ ಗಿಫ್ಟ್’ – ಇಂದಿನಿಂದಲೇ ಉಚಿತ ಬಸ್ ಪಾಸ್ ವಿತರಣೆ ಆರಂಭ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಬೆಂಗಳೂರು: ರಾಜ್ಯದ ಲಕ್ಷಾಂತರ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಶೈಕ್ಷಣಿಕ ವರ್ಷದ ಆರಂಭದಲ್ಲೇ ಭರ್ಜರಿ ಸಿಹಿ ಸುದ್ದಿ ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಜೂನ್ 12ರಿಂದಲೇ (ಶುಕ್ರವಾರ) ಅಧಿಕೃತವಾಗಿ ಉಚಿತ ಬಸ್ ಪಾಸ್‌ಗಳ ವಿತರಣೆ ಆರಂಭವಾಗಿದೆ ಎಂದು ಸಂಸ್ಥೆ ಪ್ರಕಟಿಸಿದೆ.

ರಾಜ್ಯ ಸರ್ಕಾರದ ಸೇವಾಸಿಂಧು ಪೋರ್ಟಲ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಇಂದಿನಿಂದಲೇ ಅರ್ಹ ವಿದ್ಯಾರ್ಥಿಗಳ ಕೈಗೆ ಉಚಿತ ಬಸ್ ಪಾಸ್‌ಗಳು ಸಿಗಲಿವೆ.

ನಾಲ್ಕೂ ಸಾರಿಗೆ ನಿಗಮಗಳಲ್ಲೂ ಉಚಿತ ಪ್ರಯಾಣದ ಬಂಪರ್ ಆಫರ್!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿ, ಕರ್ನಾಟಕದಾದ್ಯಂತ ವಿವಿಧ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಈ ಉಚಿತ ಬಸ್ ಪಾಸ್ ಸೌಲಭ್ಯ ಸಿಗಲಿದೆ. ವಿದ್ಯಾರ್ಥಿಗಳು ರಾಜ್ಯದ ಪ್ರಮುಖ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದಾಗಿದೆ:

KSRTC (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ)

BMTC (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ)

NWKRTC (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ)

KKRTC (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ)

ಗಡಿಭಾಗದ ವಿದ್ಯಾರ್ಥಿಗಳಿಗೂ ಸಿಕ್ತು ‘ಉಚಿತ’ ಭಾಗ್ಯ!

ಈ ಬಾರಿಯ ಯೋಜನೆಯಲ್ಲಿ ಸರ್ಕಾರ ದೊಡ್ಡ ಮನಸ್ಸು ಮಾಡಿದ್ದು, ಗಡಿಭಾಗದ ವಿದ್ಯಾರ್ಥಿಗಳಿಗೂ ಯೋಜನೆಯನ್ನು ವಿಸ್ತರಿಸಲಾಗಿದೆ.

ಕರ್ನಾಟಕದಲ್ಲಿ ವಾಸವಿದ್ದು, ನೆರೆರಾಜ್ಯಗಳ ಗಡಿಭಾಗದ ಶೈಕ್ಷಣಿಕ ಸಂಸ್ಥೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುತ್ತದೆ.

ನೆರೆರಾಜ್ಯಗಳಲ್ಲಿ ವಾಸವಿದ್ದು, ಕರ್ನಾಟಕದ ಗಡಿಭಾಗದ ಶಾಲೆ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳೂ ಸಹ ಈ ಉಚಿತ ಸೌಲಭ್ಯವನ್ನು ಪಡೆದುಕೊಳ್ಳಬಹುದು.

(ಗಮನಿಸಿ: ಇನ್ನುಳಿದಂತೆ ವಿದ್ಯಾರ್ಥಿ ಪಾಸ್‌ಗೆ ಇರುವ ಹಳೆಯ ಅರ್ಹತೆ, ಶೈಕ್ಷಣಿಕ ನಿಯಮಗಳು ಹಾಗೂ ಕಿಲೋಮೀಟರ್ ದೂರದ ಮಿತಿಗಳು ಯಥಾವತ್ತಾಗಿ ಮುಂದುವರಿಯಲಿವೆ)

ವಿದ್ಯಾರ್ಥಿಗಳು ತಾವಿರುವ ಸ್ಥಳದಿಂದಲೇ, ಸೈಬರ್ ಸೆಂಟರ್‌ಗಳು ಅಥವಾ ತಮ್ಮ ಶಾಲೆ/ಕಾಲೇಜುಗಳ ಮೂಲಕ ಇ-ಆಡಳಿತ ನಿರ್ದೇಶನಾಲಯದ ಸೇವಾಸಿಂಧು ಅಧಿಕೃತ ವೆಬ್‌ಸೈಟ್ ಲಿಂಕ್ ಬಳಸಿ ಆನ್‌ಲೈನ್‌ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ ಸುಗಮವಾಗಿ ನಡೆಯಲು ಕೆಎಸ್‌ಆರ್‌ಟಿಸಿ ರಾಜ್ಯಾದ್ಯಂತ ಒಟ್ಟು 123 ವಿಶೇಷ ಪಾಸ್ ವಿತರಣಾ ಕೌಂಟರ್‌ಗಳನ್ನು ತೆರೆದಿದೆ. ಈ ಎಲ್ಲ ಕೇಂದ್ರಗಳ ಸಂಪೂರ್ಣ ವಿಳಾಸ ಮತ್ತು ಮಾಹಿತಿಯನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಕೆಎಸ್‌ಆರ್‌ಟಿಸಿ ಸ್ಟೂಡೆಂಟ್ ಪಾಸ್ ನಲ್ಲಿ ಪ್ರಕಟಿಸಲಾಗಿದೆ.

ಹಣ ಪಾವತಿಸಿದ್ದರೆ 15 ದಿನಗಳಲ್ಲೇ ‘ಫುಲ್ ರಿಫಂಡ್’.

ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆ ದೊಡ್ಡ ರಿಲೀಫ್ ನೀಡಿದೆ. ಸದ್ಯಕ್ಕೆ ಅವರು ಹೊಂದಿರುವ ಪಾಸ್‌ಗಳು ಮಾನ್ಯತೆ ಪಡೆದಿರುತ್ತವೆ. ಆದರೆ, ಆ ವಿದ್ಯಾರ್ಥಿಗಳು ಪಾಸ್‌ಗಾಗಿ ಪಾವತಿಸಿರುವ ಸಂಪೂರ್ಣ ಶುಲ್ಕವನ್ನು ಮುಂದಿನ 15 ದಿನಗಳ ಒಳಗಾಗಿ ಮರುಪಾವತಿ (Refund) ಮಾಡಲು ಸಾರಿಗೆ ನಿಗಮ ನಿರ್ಧರಿಸಿದೆ. ಈ ಹಣ ಮರುಪಾವತಿ ಪ್ರಕ್ರಿಯೆಗೆ ಸಂಬಂಧಿಸಿದ ಆನ್‌ಲೈನ್ ಅಥವಾ ಆಫ್‌ಲೈನ್ ಮಾರ್ಗಸೂಚಿಗಳನ್ನು ಕೆಎಸ್‌ಆರ್‌ಟಿಸಿ ಶೀಘ್ರದಲ್ಲೇ ಪ್ರತ್ಯೇಕವಾಗಿ ಬಿಡುಗಡೆ ಮಾಡಲಿದೆ.

ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಆರ್ಥಿಕವಾಗಿ ದೊಡ್ಡ ನೆರವು ಸಿಕ್ಕಂತಾಗಿದೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...