Home ಸುದ್ದಿ ಗಂಗಾವತಿ ತಾಲೂಕು ಉಪನ್ಯಾಸಕರ ಸಂಘಕ್ಕೆ ನೂತನ ಸಾರಥಿಗಳ ಆಯ್ಕೆ: ಅಧ್ಯಕ್ಷರಾಗಿ . ಅಜಗರ್ ಪಾಶಾ ನೇಮಕ.
ಸುದ್ದಿ

ಗಂಗಾವತಿ ತಾಲೂಕು ಉಪನ್ಯಾಸಕರ ಸಂಘಕ್ಕೆ ನೂತನ ಸಾರಥಿಗಳ ಆಯ್ಕೆ: ಅಧ್ಯಕ್ಷರಾಗಿ . ಅಜಗರ್ ಪಾಶಾ ನೇಮಕ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಇಲ್ಲಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜೂನ್ 13 ರ ಕೊಪ್ಪಳ ಜಿಲ್ಲಾಧ್ಯಕ್ಷರಾದ ಸೋಮಶೇಖರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಗಂಗಾವತಿ ತಾಲೂಕು ಉಪನ್ಯಾಸಕರ ಸಂಘದ ಪದಾಧಿಕಾರಿಗಳ ನಾಮನಿರ್ದೇಶನ ಸಭೆ ಯಶಸ್ವಿಯಾಗಿ ಜರುಗಿತು.

ಸಭೆಯಲ್ಲಿ ಸಂಘದ ಬಲವರ್ಧನೆ ಹಾಗೂ ಉಪನ್ಯಾಸಕರ ಹಿತರಕ್ಷಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ತಾಲೂಕು ಸಂಘದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಸರ್ವಾನುಮತದಿಂದ ನಾಮನಿರ್ದೇಶನ ಮಾಡಲಾಯಿತು.

ಅಧ್ಯಕ್ಷರು: ಅಜಗರ್ ಪಾಶ (ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಗಂಗಾವತಿ)

ಪ್ರಧಾನ ಕಾರ್ಯದರ್ಶಿ: ಕುಮಾರಸ್ವಾಮಿ ಜಿ. (SMNM ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಗಂಗಾವತಿ

ಕಾರ್ಯಧ್ಯಕ್ಷರು: ಕೆ. ಎಚ್. ಕೊಳ್ಳಣ್ಣನವರ್ (ಎಚ್. ಆರ್. ಸರೋಜಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು, ಗಂಗಾವತಿ.

ಉಪಾಧ್ಯಕ್ಷರು: ಶ್ರೀಮತಿ ಲಲಿತಾ ಕಂದಗಲ್  ಬಾಲಕಿಯರ ಸರ್ಕಾರಿ ಪದವಿಬ್ ಪೂರ್ವ ಕಾಲೇಜು, ಗಂಗಾವತಿ.

ಖಜಾಂಚಿ: ಆದಪ್ಪ  ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆಸರಹಟ್ಟಿ

ತಾಲೂಕು ಸಂಘದ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ಎಲ್ಲಾ ಉಪನ್ಯಾಸಕ ಮಿತ್ರರಿಗೆ ಕೊಪ್ಪಳ ಜಿಲ್ಲಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾದ ಸೋಮಶೇಖರ್ ಗೌಡ ಹಾಗೂ ಸಭೆಯಲ್ಲಿದ್ದ ಹಿರಿಯ ಉಪನ್ಯಾಸಕರು, ಗ್ರಂಥಪಾಲಕರು ಮತ್ತು ಸರ್ವ ಸದಸ್ಯರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...