ಮರ್ಚೆಡ್ ಡೇಸ್ ಸುದ್ದಿ.
ಬೆಂಗಳೂರು: ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಶ್ರೀಮತಿ ಇಂದಿರಾ ಲಂಕೇಶ್ ಅವರು ಇಂದು ನಿಧನರಾಗಿದ್ದಾರೆ.
ಅವರ ನಿಧನದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದಿರಾ ಲಂಕೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಲಂಕೇಶ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ, ತೀವ್ರ ಕಣ್ಣೀರು ಮತ್ತು ದುಃಖದಲ್ಲಿದ್ದ ಅವರಿಗೆ ಸಾಂತ್ವನ ತಿಳಿಸಿದರು.
ಇದೇ ವೇಳೆ ಸಚಿವರು, ಅಗಲಿದ ಇಂದಿರಾ ಲಂಕೇಶ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.