Home ಸುದ್ದಿ ಸುಗಮ ಟ್ರಾವೆಲ್ಸ್ ಬಸ್‌ನಲ್ಲಿ ನಿಯಮ ಉಲ್ಲಂಘನೆ ಪ್ರಯಾಣಿಕರಿಗೆ ತೊಂದರೆ.  
ಸುದ್ದಿ

ಸುಗಮ ಟ್ರಾವೆಲ್ಸ್ ಬಸ್‌ನಲ್ಲಿ ನಿಯಮ ಉಲ್ಲಂಘನೆ ಪ್ರಯಾಣಿಕರಿಗೆ ತೊಂದರೆ.  

Share
Share

ಪ್ರಯಾಣಿಕರ ಪಯಣ ಆಸುಗಮ ಗೊಳಿಸಿದೆ ಎನ್ನುವ ಗಂಭೀರ ಆರೋಪ  ಕೇಳಿ ಬರುತಿದೆ.

ಮರ್ಚೇಡ್ ಡೇಸ್ ಸುದ್ದಿ.

ಗಂಗಾವತಿ: ಸುಗಮ ಟ್ರಾವೆಲ್ಸ್ ಸಂಸ್ಥೆ ಸುರಕ್ಷಿತ ಪ್ರಯಾಣದ ಭರವಸೆ ನೀಡುವ ಖಾಸಗಿ ಸಾರಿಗೆ ಸಂಸ್ಥೆ ವಿರುದ್ಧ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಿಂದ ಮುದುಗಲ್‌ಗೆ ತೆರಳುತ್ತಿದ್ದ ಬಸ್‌ನಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಿ, ಪ್ರಯಾಣಿಕರಿಗೆ ತೀವ್ರ ಅಸೌಕರ್ಯ ಉಂಟುಮಾಡಲಾಗಿದೆ ಎಂದು ಪ್ರಯಾಣಿಕ ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರು–ಮುದುಗಲ್ ಮಾರ್ಗದಲ್ಲಿ ಸಂಚರಿಸುತ್ತಿದ್ದ KA 01 AL 8917 ನೋಂದಣಿ ಸಂಖ್ಯೆಯ ಸುಗಮ ಟ್ರಾವೆಲ್ಸ್ ಬಸ್‌ನಲ್ಲಿ ನಿನ್ನೆ ಈ ಘಟನೆ ನಡೆದಿದೆ.

ಒಂದೇ ಸೀಟು, ಇಬ್ಬರು ಪ್ರಯಾಣಿಕರು, ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿದ್ದರೂ, ಒಂದು ಸೀಟಿನಲ್ಲಿ ಇಬ್ಬಿಬ್ಬರನ್ನು ಬಲವಂತವಾಗಿ ಹೊಂದಿಸಿ ಕೂರಿಸಲಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ.

ಹೆಚ್ಚುವರಿ ಹಣದ ವಸೂಲಿ: ಆನ್‌ಲೈನ್ ಅಥವಾ ಮುಂಗಡವಾಗಿ ಟಿಕೆಟ್ ಬುಕ್ ಮಾಡದ ಕೆಲವು ಪ್ರಯಾಣಿಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಹಣ ಪಡೆದು, ಬಸ್‌ನೊಳಗೆ ಕೆಲವು ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಳ್ಳಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ.

ಪ್ರಯಾಣಿಕರ ಮೂಲಭೂತ ಸೌಕರ್ಯಗಳನ್ನೂ ಕಡೆಗಣಿಸಿರುವ ಸಂಸ್ಥೆಯ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಸ್ ಸತತವಾಗಿ 7 ರಿಂದ 8 ಗಂಟೆಗಳ ಕಾಲ ಯಾವುದೇ ಸೂಕ್ತ ನಿಲುಗಡೆ ಅಥವಾ ವಿರಾಮ ನೀಡದೆ ನಿರಂತರವಾಗಿ ಸಂಚರಿಸಿದೆ. ಇದರಿಂದಾಗಿ ಬಸ್‌ನಲ್ಲಿದ್ದ ವೃದ್ಧರು, ಮಹಿಳೆಯರು ಮತ್ತು ಮಕ್ಕಳು ತೀವ್ರ ತೊಂದರೆ ಹಾಗೂ ಅಸೌಕರ್ಯವನ್ನು ಅನುಭವಿಸುವಂತಾಗಿದೆ.

“ಸುರಕ್ಷತೆ ಮತ್ತು ಆರಾಮದಾಯಕ ಪ್ರಯಾಣದ ಸೇವೆ ನೀಡುತ್ತೇವೆ ಎಂದು ಜಾಹೀರಾತು ನೀಡುವ ಸುಗಮ ಟ್ರಾವೆಲ್ಸ್, ವಾಸ್ತವದಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಹಣದ ಆಸೆಗೆ ಬಿದ್ದು ನಿಯಮಗಳನ್ನು ಉಲ್ಲಂಘಿಸುತ್ತಿದೆ.

ಕಳೆದ ಕೆಲವು ದಿನಗಳಿಂದ ಸುಗಮಾ ಬಸ್ ಸೇವೆ ಅತ್ಯಂತ ಕಳಪೆಯಾಗಿ ನಡೆಯುತ್ತಿದ್ದು, ವಿಶೇಷವಾಗಿ ಬೆಂಗಳೂರಿನಿಂದ ಗಂಗಾವತಿಗೆ ಪ್ರಯಾಣಿಸುವ ಪ್ರಯಾಣಿಕರು ಕೂಡ ಇದೇ ರೀತಿಯ ತೀವ್ರ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಪ್ರಯಾಣಿಕರ ಸುರಕ್ಷತೆ ಮತ್ತು ಹಕ್ಕುಗಳನ್ನು ಗಾಳಿಗೆ ತೂರಿ ಉದ್ಧಟತನ ಪ್ರದರ್ಶಿಸುತ್ತಿರುವ ಸುಗಮ ಟ್ರಾವೆಲ್ಸ್‌ನ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಸುಗಮ ಟ್ರಾವೆಲ್ಸ್‌ನ ಆಡಳಿತ ಮಂಡಳಿ ಈ ಬಗ್ಗೆ ತಕ್ಷಣ ಗಮನಹರಿಸಬೇಕು. ಬಸ್ ಸಿಬ್ಬಂದಿಯ ವಿರುದ್ಧ ಸಮಗ್ರ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...