Home ಸುದ್ದಿ ಕಿಷ್ಕಿಂದೆ, ಹುಲಿಗಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ನಿಷೇಧಿಸಿ, ಸ್ವಚ್ಛತೆ ಕಾಪಾಡಿ: ಜಿಲ್ಲಾಧಿಕಾರಿಗಳಿಗೆ 10ನೇ ತರಗತಿ (ಕೆವಿ) ವಿದ್ಯಾರ್ಥಿನಿ ಮನವಿ.
ಸುದ್ದಿ

ಕಿಷ್ಕಿಂದೆ, ಹುಲಿಗಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ನಿಷೇಧಿಸಿ, ಸ್ವಚ್ಛತೆ ಕಾಪಾಡಿ: ಜಿಲ್ಲಾಧಿಕಾರಿಗಳಿಗೆ 10ನೇ ತರಗತಿ (ಕೆವಿ) ವಿದ್ಯಾರ್ಥಿನಿ ಮನವಿ.

Share
Share

 

.

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಇತಿಹಾಸ ಪ್ರಸಿದ್ಧ ಹಾಗೂ ಧಾರ್ಮಿಕ ಕೇಂದ್ರಗಳಾದ ಕಿಷ್ಕಿಂದಾ ಅಂಜನಾದ್ರಿ ಪ್ರದೇಶ ಮತ್ತು ಪ್ರಸಿದ್ಧ ಶಕ್ತಿಪೀಠ ಕೊಪ್ಪಳದ ಹುಲಿಗಿ ಪುಣ್ಯಕ್ಷೇತ್ರದಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಬೇಕು ಹಾಗೂ ಸ್ವಚ್ಛತೆಯನ್ನು ಕಾಪಾಡಬೇಕೆಂದು ಒತ್ತಾಯಿಸಿ ಗಂಗಾವತಿ ನಗರದ ಕೇಂದ್ರೀಯ ಮಹಾವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿನಿ ಜಿಲ್ಲಾಧಿಕಾರಿಗಳಿಗೆ ಲಿಖಿತ ರೂಪದ ಮನವಿ ಸಲ್ಲಿಸಿ ಜವಾಬ್ದಾರಿ ಮೆರೆದಿದ್ದಾಳೆ.

ರಾಜ್ಯ ಹಾಗೂ ದೇಶದ ನಾನಾ ಭಾಗಗಳಿಂದ ನಿತ್ಯವೂ ಸಾವಿರಾರು ಭಕ್ತಾದಿಗಳು ಹುಲಿಗಿ ಶ್ರೀ ಕ್ಷೇತ್ರ ಹಾಗೂ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಸದ್ಯ ಈ ಪವಿತ್ರ ಕ್ಷೇತ್ರಗಳಲ್ಲಿ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಸೇರಿದಂತೆ ಹಸಿ ಹಾಗೂ ಒಣ ಕಸದ ರಾಶಿಗಳು ಬಿದ್ದಿದ್ದು, ಗಬ್ಬು ನಾರುವ ತ್ಯಾಜ್ಯದಿಂದಾಗಿ ನದಿ ಪಾತ್ರಕ್ಕೆ ತೆರಳುವ ಸಾರ್ವಜನಿಕರು ಹಾಗೂ ಭಕ್ತರು ಮೂಗು ಮುಚ್ಚಿಕೊಂಡು ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿನಿ ಮನವಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾಳೆ.

ಹೊರರಾಜ್ಯ ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಪ್ರವಾಸಿಗರು ಮತ್ತು ಭಕ್ತರ ಮನಸ್ಸಿನಲ್ಲಿ ಕೊಪ್ಪಳ ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಅಸಡ್ಡೆ ಮೂಡದಂತೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಕಿಷ್ಕಿಂದಾ ಅಂಜನಾದ್ರಿ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಮಲಿನತೆ ಹೆಚ್ಚುತ್ತಿರುವುದಲ್ಲದೆ, ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಹದಗೆಟ್ಟ ವಾಹನ ಸಂಚಾರ ವ್ಯವಸ್ಥೆಯಿಂದಾಗಿ ನಿತ್ಯವೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ವಿದ್ಯಾರ್ಥಿನಿ ಆಡಳಿತದ ಗಮನಕ್ಕೆ ತಂದಿದ್ದಾಳೆ.

ಧಾರ್ಮಿಕ ಕ್ಷೇತ್ರಗಳ ಪವಿತ್ರತೆಯನ್ನು ಕಾಪಾಡಲು ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸುವುದು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ. ಪ್ರಕೃತಿ ಮತ್ತು ಧಾರ್ಮಿಕ ತಾಣಗಳ ರಕ್ಷಣೆಗೆ ಮುಂದಾಗಿರುವ ಈ ಶಾಲಾ ವಿದ್ಯಾರ್ಥಿನಿಯ ಅರ್ಥಪೂರ್ಣ ಮನವಿಗೆ ಕೊಪ್ಪಳ ಜಿಲ್ಲಾಡಳಿತವು ಯಾವ ರೀತಿಯ ತ್ವರಿತ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಈಗ ಕಾದು ನೋಡಬೇಕಾಗಿದೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...