Home ಸುದ್ದಿ ವಿದ್ಯುತ್ ಬಾಕಿ ಉಳಿಸಿಕೊಂಡವರಿಗೆ ವಿದ್ಯುತ್ ಸಂಪರ್ಕ ಕಡಿತ ಫಿಕ್ಸ್.
ಸುದ್ದಿ

ವಿದ್ಯುತ್ ಬಾಕಿ ಉಳಿಸಿಕೊಂಡವರಿಗೆ ವಿದ್ಯುತ್ ಸಂಪರ್ಕ ಕಡಿತ ಫಿಕ್ಸ್.

Share
Share

ಮರ್ಚೆಡ್ ಡೇಸ್ ಸುದ್ದಿ.

ಕನಕಗಿರಿ : ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿರುದ್ಧ ವಿದ್ಯುತ್ ಸರಬರಾಜು ಸಂಸ್ಥೆಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಬಾಕಿ ಪಾವತಿಸದವರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ.

ವಿದ್ಯುತ್ ವಿತರಣಾ ಸಂಸ್ಥೆಗಳ ಅಧಿಕಾರಿಗಳ ಮಾಹಿತಿ ಪ್ರಕಾರ, ನವಲಿಯ ಶಾಖಾ ವ್ಯಾಪ್ತಿಯ ಗ್ರಾಮಗಳಲ್ಲಿ ಹಲವು ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಗ್ರಹಕರು ನಿಗದಿತ ಅವಧಿಯೊಳಗೆ ಬಾಕಿ ಮೊತ್ತವನ್ನು ಪಾವತಿಸದಿದ್ದರೆ ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ವಿದ್ಯುತ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿದಿರುವ ಹಿನ್ನೆಲೆ ಬಾಕಿ ಹಣ ವಸೂಲಿ ಆಗದ ಕಾರಣ ವಿದ್ಯುತ್ ಸರಬರಾಜು ಸಂಸ್ಥೆಗಳ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತಿದೆ

ಗ್ರಾಹಕರು ತಮ್ಮ ಬಾಕಿ ಮೊತ್ತವನ್ನು ಸಮೀಪದ ವಿದ್ಯುತ್ ಕಚೇರಿ, ಅಧಿಕೃತ ಆನ್‌ಲೈನ್ ಪೋರ್ಟಲ್ ಅಥವಾ ಮೊಬೈಲ್ ಆ್ಯಪ್ ಮೂಲಕ ಪಾವತಿಸಬಹುದು. ಬಿಲ್ ಪಾವತಿಸಿದ ನಂತರ ರಸೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ.

ವಿದ್ಯುತ್ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಜಿ ಇ ಮಾತನಾಡಿ, “ಗ್ರಾಹಕರಿಗೆ ಸಾಕಷ್ಟು ಸಮಯ ನೀಡಲಾಗಿದೆ. ಹಲವು ಬಾರಿ ನೆನಪಿನ ಸೂಚನೆಗಳನ್ನೂ ಕಳುಹಿಸಲಾಗಿದೆ. ಆದರೂ ಬಾಕಿ ಪಾವತಿಸದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಸಂಪರ್ಕ ಕಡಿತವಾದ ನಂತರ ಮರುಸಂಪರ್ಕಕ್ಕಾಗಿ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗಬಹುದು” ಎಂದು ತಿಳಿಸಿದ್ದಾರೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...