ಮರ್ಚೆಡ್ ಡೇಸ್ ಸುದ್ದಿ.
ಗಂಗಾವತಿ: ತಾಲ್ಲೂಕಿನ ಪ್ರಸಿದ್ಧ ಇತಿಹಾಸ ಪ್ರಸಿದ್ಧ ಆನೆಗುಂದಿ ಸಮೀಪದ ಕಡೆ ಬಾಗಿಲಿನ ತಿರುವಿನಲ್ಲಿರುವ ಹಳೆಯ, ಬೃಹತ್ ಆಲದ ಮರಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಹಾಗೂ ತುರ್ತು ಕಾರ್ಯಾಚರಣೆಯಿಂದಾಗಿ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ.
ಆನೆಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಸ್ಥಳದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಅಲ್ಲಿನ ಹಳೆಯ ದೊಡ್ಡ ಆಲದ ಮರಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಒಣಗಿದ ಎಲೆಗಳು ಹಾಗೂ ಮರದ ಕೊಂಬೆಗಳಿಗೆ ಬೆಂಕಿ ಶರವೇಗದಲ್ಲಿ ವ್ಯಾಪಿಸತೊಡಗಿದ್ದರಿಂದ ಸ್ಥಳೀಯರು ಹಾಗೂ ದಾರಿಹೋಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಉದ್ಯೋಗ ಖಾತ್ರಿ ಕೆಲಸದಲ್ಲಿದ್ದ ಜನರೇ ಇದಕ್ಕೆ ಕಾರಣ ಇರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಗಂಗಾವತಿಯ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಅತ್ಯಂತ ಜಾಗರೂಕತೆಯಿಂದ, ತುರ್ತಾಗಿ ಸ್ಥಳಕ್ಕೆ ಧಾವಿಸಿದರು. ಹರಡುತ್ತಿದ್ದ ಬೆಂಕಿಯ ಕೆನ್ನಾಲಿಗೆಯನ್ನು ತಡೆಯಲು ತಕ್ಷಣವೇ ಕಾರ್ಯಾಚರಣೆಗಿಳಿದ ಸಿಬ್ಬಂದಿ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಗ್ನಿಶಾಮಕ ದಳದವರ ಈ ಸಮಯಪ್ರಜ್ಞೆ ಹಾಗೂ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ರಸ್ತೆ ಬದಿಯಲ್ಲಿದ್ದ ಬೃಹತ್ ಆಲದ ಮರವು ಸಂಪೂರ್ಣವಾಗಿ ಭಸ್ಮವಾಗುವುದು ತಪ್ಪಿದೆ. ಅಷ್ಟೇ ಅಲ್ಲದೆ, ಪ್ರಮುಖ ತಿರುವಿನಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ಹಾಗೂ ಅನಾಹುತವನ್ನು ಯಶಸ್ವಿಯಾಗಿ ತಡೆಯಲಾಗಿದೆ. ಅಗ್ನಿಶಾಮಕ ಸಿಬ್ಬಂದಿಯ ಈ ಮಾನವ ಶಕ್ತಿ ಹಾಗೂ ತಕ್ಷಣದ ಸ್ಪಂದನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.