Home ಸುದ್ದಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜೂ.20 ರಂದು ಮಾಹಿತಿ ಹಕ್ಕು ಕಾಯ್ದೆ ಕಾರ್ಯಾಗಾರ: ಡಿಸಿ ಪೂವಿತಾ ಎಸ್
ಸುದ್ದಿ

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜೂ.20 ರಂದು ಮಾಹಿತಿ ಹಕ್ಕು ಕಾಯ್ದೆ ಕಾರ್ಯಾಗಾರ: ಡಿಸಿ ಪೂವಿತಾ ಎಸ್

Share
Share

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು ಜೂನ್ 18 (ಕರ್ನಾಟಕ ವಾರ್ತೆ): ಮಾಹಿತಿ ಹಕ್ಕು ಕಾಯ್ದೆ-2005ರ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಕರ್ತವ್ಯಗಳ ಕುರಿತು ಜೂನ್ 20ರಂದು ಬೆಳಿಗ್ಗೆ 10 ಗಂಟೆಗೆ ರಾಯಚೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಪ್ರತಿಯೊಂದು ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಈ ಪ್ರಮುಖ ತರಬೇತಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ರಾಯಚೂರು ಜಿಲ್ಲಾಧಿಕಾರಿ ಪೂವಿತಾ ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮಹತ್ವದ ಕಾರ್ಯಾಗಾರದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ. ವೆಂಕಟ ಸಿಂಗ್, ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತರುಗಳಾದ ರಾಮನ್ ಕೆ. ಮತ್ತು ಡಾ.ರಿಚರ್ಡ್ ವಿನ್ಸೆಂಟ್ ಡೊಸೋಜ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲೆಗೆ ಆಗಮಿಸಲಿದ್ದಾರೆ. ಕಾಯ್ದೆಯ ಸೂಕ್ತ ಬಳಕೆ, ಸಾರ್ವಜನಿಕರಿಗೆ ನಿಖರ ಮಾಹಿತಿ ಒದಗಿಸುವಲ್ಲಿ ಅಧಿಕಾರಿಗಳ ಜವಾಬ್ದಾರಿ ಹಾಗೂ ಕಾಯ್ದೆ ಅನುಷ್ಠಾನದ ವೇಳೆ ಎದುರಾಗುವ ಸವಾಲುಗಳ ಕುರಿತು ಆಯುಕ್ತರು ಅಧಿಕಾರಿಗಳೊಂದಿಗೆ ನೇರ ಸಂವಾದ ನಡೆಸಿ ಮಾರ್ಗದರ್ಶನ ನೀಡಲಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯ ಯಶಸ್ಸು ಕೇವಲ ನಿಯಮಗಳ ಪಾಲನೆಯಲ್ಲಿಲ್ಲ, ಬದಲಿಗೆ ಇಲಾಖೆಗಳ ಪಾರದರ್ಶಕತೆಯಲ್ಲಿದೆ. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಕಂದಾಯ, ಪೊಲೀಸ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮತ್ತು ಕಾರ್ಯದರ್ಶಿಗಳು ಯಾವುದೇ ಗೈರುಹಾಜರಿಯಿಲ್ಲದೆ ನಿಗದಿತ ಸಮಯಕ್ಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಬೇಕು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...