ಮರ್ಚೆಡ್ ಡೇಸ್ ಸುದ್ಧಿ.
ಬೆಂಗಳೂರು: ಗ್ರಾಮೀಣ ಭಾಗದ ಸಾರ್ವಜನಿಕರ ಆಸ್ತಿ ದಾಖಲಾತಿಗಳ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ಕರ್ನಾಟಕ ಸರ್ಕಾರವು ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗೆ “ಖಾತಾ ದೃಢೀಕರಣ ಪತ್ರ” ವನ್ನು ನೀಡುವ ಕುರಿತು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 20 ಜೂನ್ 2026 ರಂದು ಈ ಕುರಿತು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದ್ದು, ಸಾರ್ವಜನಿಕರಿಗೆ ಅನಾವಶ್ಯಕ ವಿಳಂಬವಿಲ್ಲದೆ ಈ ಪತ್ರ ಸಿಗುವಂತೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ “ಖಾತಾ ದೃಢೀಕರಣ ಪತ್ರ”ವನ್ನು ನೀಡುವ ಕುರಿತು.
ಸರ್ಕಾರಿ ಆದೇಶ ಸಂಖ್ಯೆ: RDPR 599 GPA 2026
ದಿನಾಂಕ: 20.06.2026
ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತು ಕಾರ್ಯದರ್ಶಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದ ನಿಯಮ
ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೆ ತಮ್ಮ ಆಸ್ತಿಗಳ ಹಕ್ಕು ಮತ್ತು ದಾಖಲಾತಿಗಳಿಗೆ ಸಂಬಂಧಿಸಿದಂತೆ ಸೂಕ್ತ ದೃಢೀಕರಣ ಸಿಗುವಂತಾಗಲು ಈ ಕ್ರಮ ಕೈಗೊಳ್ಳಲಾಗಿದೆ.
ಪಂಚಾಯಿತಿ ವ್ಯಾಪ್ತಿಯ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿಯ ಖಾತಾಗಳ ಅಧಿಕೃತ “ಖಾತಾ ದೃಢೀಕರಣ ಪತ್ರ”ವನ್ನು ನಿಯಮಾನುಸಾರ ಪಡೆದುಕೊಳ್ಳಬಹುದು.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ: ಅರ್ಹ ಸಾರ್ವಜನಿಕರು ಅರ್ಜಿ ಸಲ್ಲಿಸಿದಾಗ ನಿಯಮಾವಳಿಗಳ ಪ್ರಕಾರ ಯಾವುದೇ ವಿಳಂಬವಿಲ್ಲದೆ ಇಲಾಖೆಯ ತಂತ್ರಾಂಶದ ಮೂಲಕ ಅಥವಾ ನಿಗದಿತ ಕ್ರಮದಲ್ಲಿ ಈ ಪತ್ರವನ್ನು ವಿತರಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (PDO) ನಿರ್ದೇಶನ ನೀಡಲಾಗಿದೆ.
ಗಮನಿಸಿ: ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (CEO), ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (EO) ಹಾಗೂ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸೂಕ್ತ ಕ್ರಮಕ್ಕಾಗಿ ರವಾನಿಸಲಾಗಿದೆ.
ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ತಮ್ಮ ಆಸ್ತಿಯ ದೃಢೀಕರಣ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ಸುಲಭಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಈ ನಿರ್ಧಾರ ಅತ್ಯಂತ ಶ್ಲಾಘನೀಯವಾಗಿದೆ.