Home ಸುದ್ದಿ ​ 60 ವರ್ಷಗಳಿಂದ ನಿಸ್ವಾರ್ಥ ಸೇವೆ: ನಾಟಿ ವೈದ್ಯ ಅಶೋಕ್ ರಾವ್ ಕುಲಕರ್ಣಿಗೆ ‘ಪದ್ಮಶ್ರೀ’ ಹಾಗೂ ‘ರಾಜ್ಯೋತ್ಸವ’ ಪ್ರಶಸ್ತಿಗೆ ಗಿಣಿಗೇರಿ ನಾಗರಿಕ ಹೋರಾಟ ಸಮಿತಿ ಆಗ್ರಹ.
ಸುದ್ದಿ

​ 60 ವರ್ಷಗಳಿಂದ ನಿಸ್ವಾರ್ಥ ಸೇವೆ: ನಾಟಿ ವೈದ್ಯ ಅಶೋಕ್ ರಾವ್ ಕುಲಕರ್ಣಿಗೆ ‘ಪದ್ಮಶ್ರೀ’ ಹಾಗೂ ‘ರಾಜ್ಯೋತ್ಸವ’ ಪ್ರಶಸ್ತಿಗೆ ಗಿಣಿಗೇರಿ ನಾಗರಿಕ ಹೋರಾಟ ಸಮಿತಿ ಆಗ್ರಹ.

Share
Share

ಮರ್ಚೆಡ್ ಡೇಸ್ ಸುದ್ದಿ.

​ಕೊಪ್ಪಳ : ದಮ್ಮು, ಕೆಮ್ಮು (ಅಸ್ತಮ) ಸೇರಿದಂತೆ ಉಸಿರಾಟದ ತೊಂದರೆಗಳಿಗೆ ಕಳೆದ ಆರು ದಶಕಗಳಿಂದ ಯಾವುದೇ ಫಲಾಪೇಕ್ಷೆಯಿಲ್ಲದೆ ಉಚಿತ ನಾಟಿ ಔಷಧ ನೀಡುತ್ತಿರುವ ಕುಟಗನಹಳ್ಳಿ ಗ್ರಾಮದ ಅಶೋಕ್ ರಾವ್ ಕುಲಕರ್ಣಿ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅವರನ್ನು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸಬೇಕು ಎಂದು ಗಿಣಿಗೇರಿ ನಾಗರಿಕ ಹೋರಾಟ ಸಮಿತಿ ಬಲವಾಗಿ ಒತ್ತಾಯಿಸಿದೆ.

ಕಳೆದ ಸುಮಾರು 60 ವರ್ಷಗಳಿಂದ ಅಶೋಕ್ ರಾವ್ ಕುಲಕರ್ಣಿ ಅವರು ಉಸಿರಾಟ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆಶಾಕಿರಣವಾಗಿದ್ದಾರೆ. ಪ್ರತಿ ವರ್ಷ ಜೂನ್ 8ರಂದು ಬರುವ ‘ಮೃಗಶಿರ ಮಳೆ’ಯ (ಮೃಗಶಿರ ಕಾರ್ತಿ) ಸಂದರ್ಭದಲ್ಲಿ ಇವರು ನೀಡುವ ವಿಶೇಷ ನಾಟಿ ಔಷಧ ಪಡೆಯಲು ಕರ್ನಾಟಕದ ಮೂಲೆ ಮೂಲೆಗಳಿಂದಷ್ಟೇ ಅಲ್ಲದೆ, ನೆರೆಯ ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಿಂದಲೂ ಲಕ್ಷಾಂತರ ಜನರು ಆಗಮಿಸುತ್ತಾರೆ. ವರ್ಷದಿಂದ ವರ್ಷಕ್ಕೆ ಇವರ ಬಳಿ ಔಷಧ ಪಡೆಯಲು ಬರುವವರ ಸಂಖ್ಯೆ ಹೆಚ್ಚಾಗುತ್ತಲೇ ಇರುವುದು ಅವರ ಔಷಧದ ಪರಿಣಾಮಕಾರಿತ್ವ ಹಾಗೂ ಅವರ ಮೇಲಿರುವ ನಂಬಿಕೆಯನ್ನು ತೋರುತ್ತದೆ.

ಸರ್ಕಾರದ ಯಾವುದೇ ಸವಲತ್ತು, ಸಹಾಯ ಅಥವಾ ಯಾವುದೇ ರೀತಿಯ ಪ್ರತಿಫಲವನ್ನು ನಿರೀಕ್ಷಿಸದೆ, ಸಂಪೂರ್ಣವಾಗಿ ತಮ್ಮ ಸ್ವಂತ ಆಸಕ್ತಿಯಿಂದ ಅವರು ಈ ಸೇವೆ ಮಾಡುತ್ತಿದ್ದಾರೆ. ಯಾವುದೇ ಹಣದಾಸೆಯಿಲ್ಲದೆ ಅವರು ನಡೆಸುತ್ತಿರುವ ಈ ವೈದ್ಯಕೀಯ ಸೇವೆಯಿಂದಾಗಿ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳು ಗುಣಮುಖರಾಗ ಕೇಂದ್ರ ಸರ್ಕಾರವು ಇವರ ದೀರ್ಘಕಾಲದ ಜನಪರ ಸೇವೆಯನ್ನು ಪರಿಗಣಿಸಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೂಲಕ ‘ಪದ್ಮಶ್ರೀ’ ಯಂತಹ ಅತ್ಯುನ್ನತ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಬೇಕು. ಕರ್ನಾಟಕ ರಾಜ್ಯ ಸರ್ಕಾರವು ಅಶೋಕ್ ರಾವ್ ಕುಲಕರ್ಣಿ ಅವರ ಸೇವೆಯನ್ನು ಗುರ್ತಿಸಿ ಪ್ರದಾನ ಮಾಡಬೇಕುಒ ​ಆರೋಗ್ಯ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿರುವ ಇಂತಹ ಮಹನೀಯರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಸಮಿತಿ ನೆನಪಿಸಿದೆ.

ಅಶೋಕ್ ರಾವ್ ಕುಲಕರ್ಣಿ ಅವರ ಸೇವೆ ಸಮಾಜಕ್ಕೆ ಮಾದರಿಯಾಗಿದ್ದು, ಮುಂದಿನ ಪೀಳಿಗೆಗೆ ಅತ್ಯಂತ ಸ್ಫೂರ್ತಿದಾಯಕವಾಗಿದೆ. ಅವರ ಹೆಸರು ದೇಶದಲ್ಲಿ ಶಾಶ್ವತವಾಗಿ ಉಳಿಯುವಂತೆ ಮಾಡಲು ಅವರಿಗೆ ಸೂಕ್ತ ಗೌರವ ಸಿಗಲೇಬೇಕು. ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಇಂತಹ ಮಹಾನ್ ಸಾಧಕರ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರತಿಯೊಬ್ಬ ನಾಗರಿಕರು ಈ ಮಾಹಿತಿಯನ್ನು ಹೆಚ್ಚು ಹೆಚ್ಚು ಶೇರ್ (ಹಂಚಿಕೊಳ್ಳುವ) ಮಾಡುವ ಮೂಲಕ ಬೆಂಬಲ ಸೂಚಿಸಬೇಕು” ಎಂದು ಗಿಣಿಗೇರಿ ನಾಗರಿಕ ಹೋರಾಟ ಸಮಿತಿ ಮತ್ತು ಸಾರ್ವಜನಿಕರು ಮನವಿ ಮಾಡಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...