ಮರ್ಚೆಡ್ ಡೇಸ್ ಸುದ್ದಿ.
ಗಂಗಾವತಿ: ಕೊಪ್ಪಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಮಂಡಳಿಗೆ ಇಬ್ಬರು ಗಣ್ಯ ಶಿಕ್ಷಣ ತಜ್ಞರನ್ನು ನಾಮನಿರ್ದೇಶನ ಮಾಡಿ ವಿಶ್ವವಿದ್ಯಾಲಯದ ಕುಲಸಚಿವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000ರ ಪ್ರಕರಣ 28(1)(ಎಫ್) ರನ್ವಯ, ದಿನಾಂಕ 20 ಜೂನ್ 2026 ರಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ಈ ಮಹತ್ವದ ನಾಮನಿರ್ದೇಶನವನ್ನು ಮಾಡಲಾಗಿದೆ.
ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರದ .ಡಾ. ಶಿವರಾಜ್ ಗುರಿಕಾರ್. ಮತ್ತು
ಡಾ. ಬಿ. ವೆಂಕಟೇಶ್: ತಾವರಗೇರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು.
ವಿಶ್ವವಿದ್ಯಾಲಯದ ಪ್ರಕಟಣೆಯ ಪ್ರಕಾರ, ಈ ನಾಮನಿರ್ದೇಶನವು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000ರ ಪ್ರಕರಣ 39(1) ರನ್ವಯ ಸರ್ಕಾರದ ಮುಂದಿನ ಆದೇಶದವರೆಗೆ ಅಥವಾ ಇವರ ಅಧಿಕಾರಾವಧಿ ಮುಕ್ತಾಯವಾಗುವವರೆಗೆ ಜಾರಿಯಲ್ಲಿರಲಿದೆ.
ನಾಮನಿರ್ದೇಶನಗೊಂಡ ಸದಸ್ಯರು ಸರ್ಕಾರದ ನಿಯಮಾವಳಿಗಳಿಗೆ ಬದ್ಧರಾಗಿ, ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಅಭಿವೃದ್ಧಿಗೆ ಸಹಕಾರ ನೀಡುವ ಮೂಲಕ ಸಂಸ್ಥೆಯ ಸರ್ವತೋಮುಖ ಪ್ರಗತಿಗೆ ಶ್ರಮಿಸಬೇಕಿದೆ ಎಂದು ಪ್ರಕಟಣೆಯಲ್ಲಿ ಆಶಯ ವ್ಯಕ್ತಪಡಿಸಲಾಗಿದೆ.
ಈ ಮಹತ್ವದ ಆದೇಶದ ಪ್ರತಿಗಳನ್ನು ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಕೊಪ್ಪಳ ವಿಶ್ವವಿದ್ಯಾಲಯದ ಸಂಬಂಧಿತ ಸಿಂಡಿಕೇಟ್ ಸದಸ್ಯರಿಗೆ ಮಾಹಿತಿ ಹಾಗೂ ಅಗತ್ಯ ಮುಂದಿನ ಕ್ರಮಕ್ಕಾಗಿ ರವಾನಿಸಲಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಡಾ. ಶಿವರಾಜ ಗುರಿಕಾರ್. ಅವರನ್ನು ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ಉಪನ್ಯಾಸ ಮಿತ್ರರು ಸನ್ಮಾನಿಸಿ ಅಭಿನಂದಿಸಿದರು.