ಮರ್ಚೆಡ್ ಡೇಸ್ ಸುದ್ದಿ.
ಕೊಪ್ಪಳ .25: ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್ಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ನಿಮಿತ್ತ, ಮುನಿರಬಾದ್ ರಿಸರ್ವ್ ಪೊಲೀಸ್ ಕವಯಾತು ಮೈದಾನದಲ್ಲಿ ಹೆಲಿಪ್ಯಾಡ್ಗೆ ಬಂದಿಳಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ವಿಧಾನ ಪರಿಷತ್ ಶಾಸಕರಾದ ಎನ್.ಎಸ್.ಬೋಸರಾಜು, ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್, ಜಿ.ಪಂ. ಸಿಇಓ, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರ್ವಣೀತ್ ನೇಗಿ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಡಾ.ರಾಮ್. ಎಲ್. ಅರಸಿದ್ದಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.