Home ಸುದ್ದಿ ಕ್ಯಾಂಪಸ್ ಸಂದರ್ಶನ: ಟಿಸಿಎಸ್ ಹಾಗೂ ಹೆಚ್‌ಪಿಇ ಕಂಪನಿಗಳಿಗೆ ಗಂಗಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ.
ಸುದ್ದಿ

ಕ್ಯಾಂಪಸ್ ಸಂದರ್ಶನ: ಟಿಸಿಎಸ್ ಹಾಗೂ ಹೆಚ್‌ಪಿಇ ಕಂಪನಿಗಳಿಗೆ ಗಂಗಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಸ್ಥಳೀಯ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಗಳ ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ವಿದ್ಯಾನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಈ ಉದ್ಯೋಗ ಮೇಳದಲ್ಲಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಬಹಳ ಪೈಪೋಟಿಯಿಂದ ಕೂಡಿದ್ದ ಈ ಸಂದರ್ಶನದಲ್ಲಿ ಕಾಲೇಜಿನ ಬಿಬಿಎ  ವಿಭಾಗದ ಮೂವರು ವಿದ್ಯಾರ್ಥಿಗಳು ದೇಶದ ಮುಂಚೂಣಿಯ ಐಟಿ ಸಂಸ್ಥೆಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಬಿಬಿಎ ವಿಭಾಗದ ಕುಮಾರಿ ಪಾವನಿ, ಕುಮಾರಿ ಕವನ ಹಾಗೂ ಕುಮಾರ ವಿಜಯ್ ಈ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಾಗಿದ್ದಾರೆ.

ಇದರೊಂದಿಗೆ, ಬಿಬಿಎ ವಿಭಾಗದ ಕುಮಾರಿ ಪಾವನಿ ಅವರು ಜಾಗತಿಕ ಮಟ್ಟದ ಮತ್ತೊಂದು ಪ್ರಸಿದ್ಧ ತಂತ್ರಜ್ಞಾನ ಸಂಸ್ಥೆಯಾದ ಹೆಚ್‌ಪಿಇ ಕಂಪನಿಯಲ್ಲೂ ಉದ್ಯೋಗಾವಕಾಶ ಪಡೆಯುವ ಮೂಲಕ  ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಅತ್ಯುತ್ತಮ ಯಶಸ್ಸು ಕಾಲೇಜಿನ ಬಿಬಿಎ ವಿಭಾಗದ ಅಧ್ಯಾಪಕರು ಹಾಗೂ ಸಹಪಾಠಿಗಳಲ್ಲಿ ಅಪಾರ ಹರ್ಷವನ್ನು ತಂದಿದೆ.

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು, ಸ್ಥಾನೀಕರಣ (ಪ್ಲೇಸ್‌ಮೆಂಟ್) ಘಟಕ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು  ಶುಭ ಕೋರಿದ್ದಾರೆ. ಇದೇ ಸಂದರ್ಭದಲ್ಲಿ, ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಿಕೊಟ್ಟ ವಿದ್ಯಾನಿಕೇತನ ಪದವಿ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿಗೆ ಕಾಲೇಜಿನ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಯಿತು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...