Home ಸುದ್ದಿ ಲಂಚದ ಹಣ ಫೋನ್‌ಪೇ ಮಾಡಿಸಿಕೊಂಡಿದ್ದ ಪಿಡಿಒ ಲೋಕಾಯುಕ್ತ ಬಲೆಗೆ: ರಾಯಚೂರಿನಲ್ಲಿ ಹೈಟೆಕ್ ಭ್ರಷ್ಟಾಚಾರ ಬಯಲು.
ಸುದ್ದಿ

ಲಂಚದ ಹಣ ಫೋನ್‌ಪೇ ಮಾಡಿಸಿಕೊಂಡಿದ್ದ ಪಿಡಿಒ ಲೋಕಾಯುಕ್ತ ಬಲೆಗೆ: ರಾಯಚೂರಿನಲ್ಲಿ ಹೈಟೆಕ್ ಭ್ರಷ್ಟಾಚಾರ ಬಯಲು.

Share
Share

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು: ಜಮೀನಿನ ಖಾತಾ ಉತಾರ ನೀಡಲು ಬರೋಬ್ಬರಿ ₹1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ರಾಯಚೂರು ಜಿಲ್ಲೆಯ ಬಿಜನಗೇರಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲಕ್ಷ್ಮೀ ಪ್ಯಾಟಿ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಡಿಜಿಟಲ್ ಪೇಮೆಂಟ್ ಮೂಲಕ ಲಂಚ ಪಡೆದು ಸಿಕ್ಕಿಬಿದ್ದಿರುವ ಈ ಘಟನೆ ಜಿಲ್ಲಾದ್ಯಂತ ಭಾರಿ ಸಂಚಲನ ಮೂಡಿಸಿದೆ.

ಬಿಜನಗೇರಾ ಗ್ರಾಮದ ನಿವಾಸಿಯಾದ ಮೆಹಬೂಬ್ ಅಲಿ ಎಂಬುವವರು ಲೇಔಟ್ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ತಮ್ಮ ಎರಡು ಎಕರೆ ಜಮೀನಿನ ಖಾತಾ ಉತಾರ ಪಡೆಯಲು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ಪಿಡಿಒ ಲಕ್ಷ್ಮೀ ಪ್ಯಾಟಿ ಅವರು ₹2 ಲಕ್ಷ ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ಅಧಿಕಾರಿಗಳ ಭ್ರಷ್ಟಾಚಾರದಿಂದ ಬೇಸತ್ತ ಮೆಹಬೂಬ್ ಅಲಿ ಈ ಬಗ್ಗೆ ಲೋಕಾಯುಕ್ತ ಕಚೇರಿಗೆ ಅಧಿಕೃತವಾಗಿ ದೂರು ದಾಖಲಿಸಿದ್ದರು.

ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಹದ್ದಿನ ಕಣ್ಣಿಟ್ಟು ದಾಳಿಗೆ ಸ್ಕೆಚ್ ಹಾಕಿದ್ದರು. ಈ ವೇಳೆ ಪಿಡಿಒ ಲಕ್ಷ್ಮೀ ಪ್ಯಾಟಿ ಅವರು ಲಂಚದ ಮೊತ್ತದಲ್ಲಿ ₹1.50 ಲಕ್ಷ ಹಣವನ್ನು ತಮ್ಮ ಪತಿಯ ಬ್ಯಾಂಕ್ ಖಾತೆಗೆ ‘ಫೋನ್‌ಪೇ’  ಆಪ್ ಮೂಲಕ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹಣ ವರ್ಗಾವಣೆಯಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪಿಡಿಒ ಲಕ್ಷ್ಮೀ ಪ್ಯಾಟಿ ಅವರನ್ನು  ಸ್ಥಳದಲ್ಲಿಯೇ ವಶಕ್ಕೆ ಪಡೆದಿದ್ದಾರೆ.

ಸದ್ಯ ಆರೋಪಿತ ಪಿಡಿಒ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ತಂತ್ರಜ್ಞಾನ ಬೆಳೆದಂತೆ ಲಂಚ ಪಡೆಯಲು ಡಿಜಿಟಲ್ ಮಾರ್ಗ ಅನುಸರಿಸಿದ ಅಧಿಕಾರಿಯ ನಡೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಲೋಕಾಯುಕ್ತರ ಈ ಭರ್ಜರಿ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.

Share
Related Articles
ಅಂಕಣಸುದ್ದಿ

ಜನರ ಜೀವ ಉಳಿಸಲು ಜಾಗತಿಕ ಔಷಧಿ ದೈತ್ಯರ ಎದರು ಸೆಟೆದು ನಿಂತ ಧೀರ ಅಧಿಕಾರಿ ಐಎಎಸ್ ಅಧಿಕಾರಿ ಪಿ.ಎಚ್. ಕುರಿಯನ್.

ಮರ್ಚೆಡ್ ಡೇಸ್ | ವಿಶೇಷ ಲೇಖನ: ಅಧಿಕಾರವೆಂದರೆ ಜನರ ಸೇವೆ ಎಂಬುದನ್ನು ಜಗತ್ತಿಗೆ ತೋರಿಸಿದ ಅಪರೂಪದ...

ಸುದ್ದಿ

ಡ್ರೋನ್ ಕಣ್ಣಲ್ಲಿ ಸೆರೆಯಾಯ್ತು ದೇವಿರಮ್ಮ ಬೆಟ್ಟದ ಅದ್ಭುತ ವೈಭವ: ಜನಸಾಗರದ ನಡುವೆ ರಕ್ಷಣಾ ಪಡೆಯ ಶ್ಲಾಘನೀಯ ಸೇವ.

ಮರ್ಚೆಡ್ ಡೇಸ್ ಸುದ್ದಿ|ಚಿಕ್ಕಮಂಗಳೂರು. ಚಿಕ್ಕಮಗಳೂರು :ತಾಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರುವ ಸುಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ಭಕ್ತಿಭಾವದ ಪರಾಕಾಷ್ಠೆ...

ಸುದ್ದಿ

ಆಕಾಶದಲ್ಲೇ ಬೆಳಕಿನ ಮಹಾಸಂಗ್ರಾಮ! ಶತಮಾನಗಳ ಸಂಪ್ರದಾಯಕ್ಕೆ ಸಾಕ್ಷಿಯಾದ ಕೇರಳದ ತ್ರಿಶೂರ್ ಪೂರಂನ ‘ವೆಡಿಕ್ಕೆಟ್ಟು’ ವೈಭವ.

  ಮರ್ಚೆಡ್ ಡೇಸ್ ಸುದ್ದಿ| ವಿಶೇಷ ವರದಿ ಭಕ್ತಿ, ಸಂಪ್ರದಾಯ ಮತ್ತು ಪಟಾಕಿಗಳ ಅಬ್ಬರದ ಅಪರೂಪದ...

ಸುದ್ದಿ

ಹಾಲುಮತದ ಪುಣ್ಯಕಾಶಿ ಹುಲಜಂತಿಯಲ್ಲಿ ಕಲಿಯುಗದ ಪವಾಡ: ಮಾಳಿಂಗರಾಯನ ಶಿಖರಕ್ಕೆ ಶಿವ-ಪಾರ್ವತಿಯರಿಂದ ರೇಷ್ಮೆ ಮುಂಡಾಸು ಸೇವೆ.

ಮರ್ಚೆಡ್ ಡೇಸ್ ಸುದ್ದಿ|ಹುಲಿಜಂತಿ. ಹುಲಿಜಂತಿ:ಹಾಲುಮತದ ಶ್ರದ್ಧಾ ಕೇಂದ್ರ ಹುಲಜಂತಿ ಕ್ಷೇತ ಸಮಸ್ತ ಹಾಲುಮತ ಸಂಸ್ಕೃತಿಯ ಆರಾಧ್ಯ...