Home ಸುದ್ದಿ ರಾಯಚೂರಿನಲ್ಲಿ ಜುಲೈ 2 ರಂದು ಸಡಗರದ ‘ವಚನ ಸಾಹಿತ್ಯ ದಿನ’ : ಡಾ. ಫ.ಗು.ಹಳಕಟ್ಟಿ ಜಯಂತಿಗೆ ಸಕಲ ಸಿದ್ಧತೆ.
ಸುದ್ದಿ

ರಾಯಚೂರಿನಲ್ಲಿ ಜುಲೈ 2 ರಂದು ಸಡಗರದ ‘ವಚನ ಸಾಹಿತ್ಯ ದಿನ’ : ಡಾ. ಫ.ಗು.ಹಳಕಟ್ಟಿ ಜಯಂತಿಗೆ ಸಕಲ ಸಿದ್ಧತೆ.

Share
Share

 

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು, ಜೂನ್ 25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಜುಲೈ 02ರಂದು ಬೆಳಿಗ್ಗೆ 11ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜಯಂತಿ ಹಾಗೂ ‘ವಚನ ಸಾಹಿತ್ಯ ದಿನಾಚರಣೆ’ಯನ್ನು ಅತ್ಯಂತ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ (ಎಡಿಸಿ) ಶಿವಾನಂದ ಅವರು ತಿಳಿಸಿದ್ದಾರೆ. ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಯಾವುದೇ ಲೋಪವಿಲ್ಲದೆ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ವಿತರಿಸುವುದು, ರಂಗಮಂದಿರದ ಆವರಣದಲ್ಲಿ ಕುಡಿಯುವ ನೀರು ಹಾಗೂ ಸ್ವಚ್ಛತೆಯೂ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಾರ್ಯಕ್ರಮದ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು. ಈ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಹಬ್ಬದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಕರೆ ನೀಡಲಾಗಿದೆ.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಪ್ರಮುಖ ಸಾಹಿತಿಗಳು ಹಾಗೂ ಗಣ್ಯರು, ವೇದಿಕೆ ಕಾರ್ಯಕ್ರಮದಲ್ಲಿ ಡಾ.ಫ.ಗು.ಹಳಕಟ್ಟಿ ಅವರ ವಿಚಾರಧಾರೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು. ಇದರೊಂದಿಗೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಮುಖಂಡರಾದ ಡಾ.ಬಿ.ವಿಜಯರಾಜೇಂದ್ರ, ನಾಗರಾಜ ವಕೀಲರು ಸೇರಿದಂತೆ ಹಲವು ಗಣ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share
Related Articles
ಸುದ್ದಿ

13 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ: ನಾಳೆ (ನ.19) ವಿಶ್ವದಾದ್ಯಂತ ‘GTA 6’ ಗ್ರ್ಯಾಂಡ್ ಎಂಟ್ರಿ!

  ಮರ್ಚೆಡ್ ಡೇಸ್ ಸುದ್ದಿ:ಬೆಂಗಳೂರು / ನವದೆಹಲಿ. ಮಧ್ಯರಾತ್ರಿ 12 ಗಂಟೆಯಿಂದಲೇ ಭಾರತದಲ್ಲಿ ಲಭ್ಯ; ₹12,600...

ಸುದ್ದಿ

ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ ಗಂಗಯ್ಯ ಪ್ರ. ದರ್ಜೆ ಕಾಲೇಜು ತಂಡಕ್ಕೆ ಪ್ರಥಮ ಸ್ಥಾನದ ಗೆಲುವು.

ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.  ಗವಿಸಿದ್ದೇಶ್ವರ ಕಾಲೇಜಿಗೆ ದ್ವಿತೀಯ ಸ್ಥಾನ.ಅಂತರಕಾಲೇಜು ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿಗೆ ಶ್ರೀರಾಮನಗರದ ಜನತೆಯ...

ಸುದ್ದಿ

ಹಿಮಾಲಯದ ತಪ್ಪಲಿನಿಂದ ತುಂಗಭದ್ರಾ ತೀರಕ್ಕೆ ಮಾದಕ ನಶೆ! ಸಾಣಾಪುರದಲ್ಲಿ 16 ಲಕ್ಷದ ಚರಸ್ ವಶ, ಮೂವರು ಅಂದರ್.

        ಮರ್ಚೆಡ್ ಡೇಸ್ ಸುದ್ದಿ|ಕೊಪ್ಪಳ. ಕೊಪ್ಪಳ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ...

ಸಂಪಾದಕೀಯಸುದ್ದಿ

ಮಕ್ಕಳ ಹಿತದ ಜೊತೆಗೆ ಬಿಸಿಯೂಟ ನೌಕರರ ಬದುಕೂ ಉಳಿಯಲಿ: ಏಕಾಏಕಿ ಕ್ಲಸ್ಟರ್ ಕಿಚನ್ ಬೇಡ, ಮೊದಲು ಪರೀಕ್ಷೆಯಾಗಲಿ…

ಮರ್ಚೆಡ್ ಡೇಸ್ | ಸಂಪಾದಕೀಯ. ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದು ಸರ್ಕಾರದ ಸಾಮಾಜಿಕ ಹೊಣೆಗಾರಿಕೆ. ಸರ್ಕಾರಿ...