
ಮರ್ಚೆಡ್ ಡೇಸ್ ಸುದ್ದಿ.
ಮೈಸೂರು: ನಾಡಿನ ಹೆಮ್ಮೆಯ ಹಿರಿಯ ಸಾಹಿತಿಗಳು ಹಾಗೂ ಪ್ರಸಿದ್ಧ ಲೇಖಕರಾದ ದೇವನೂರು ಮಹಾದೇವ ಅವರ ಮೈಸೂರಿನ ನಿವಾಸಕ್ಕೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಸಾಹಿತಿಗಳ ಕುಶಲೋಪರಿಯನ್ನು ವಿಚಾರಿಸಿ, ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವರಾದ ಬಳಿಕ ಹಿರಿಯ ಸಾಹಿತಿ ದೇವನೂರು ಮಹಾದೇವ ಅವರೊಂದಿಗೆ ನಡೆಸಿದ ಪ್ರಥಮ ಅಧಿಕೃತ ಭೇಟಿ ಇದಾಗಿದ್ದು, ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ಮಾತುಕತೆ ಜರುಗಿತು. ಈ ಆತ್ಮೀಯ ಭೇಟಿಯ ಸಂದರ್ಭದಲ್ಲಿ ಇಬ್ಬರೂ ಮುಖಂಡರು ರಾಜ್ಯದ ಪ್ರಸ್ತುತ ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ವಿದ್ಯಮಾನಗಳ ಕುರಿತು ಸುದೀರ್ಘವಾಗಿ ವಿಚಾರ ವಿನಿಮಯ ಮಾಡಿಕೊಂಡರು.
ನಾಡಿನ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಿಂತನೆಗಳಿಗೆ ದೇವನೂರು ಮಹಾದೇವ ಅವರ ಕೊಡುಗೆ ಅಪಾರವಾಗಿದ್ದು, ಅವರ ಮಾರ್ಗದರ್ಶನ ಹಾಗೂ ಪ್ರಸ್ತುತ ವಿದ್ಯಮಾನಗಳ ಮೇಲಿನ ಅವರ ದೃಷ್ಟಿಕೋನ ಅತ್ಯಂತ ಅಮೂಲ್ಯವಾಗಿದೆ ಎಂದು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸ್ಮರಿಸಲಾಯಿತು. ಈ ಭೇಟಿಯು ಪ್ರಸ್ತುತ ರಾಜಕೀಯ ಹಾಗೂ ಸಾಂಸ್ಕೃತಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.