Home ಸುದ್ದಿ ರಾಯಚೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಭಿಯಾನಕ್ಕೆ ಚಾಲನೆ.
ಸುದ್ದಿ

ರಾಯಚೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಭಿಯಾನಕ್ಕೆ ಚಾಲನೆ.

Share
Share

 

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರಿನಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಭಿಯಾನಕ್ಕೆ ಚಾಲನೆ.ರಾಯಚೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಯಚೂರು ಜಿಲ್ಲೆಯಾದ್ಯಂತ ಎಸ್‌ಐಆರ್ ಎನ್ಯೂಮರೇಶನ್ ನಮೂನೆ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಮಾನ್ವಿ ಕ್ಷೇತ್ರದಲ್ಲಿ ವಿವಿಧ ಗಣ್ಯರಿಗೆ ನಮೂನೆಗಳನ್ನು ವಿತರಿಸುವ ಮೂಲಕ ಈ ಮಹತ್ವದ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಪ್ರಜಾಪ್ರಭುತ್ವದ ಬಲವರ್ಧನೆಗೆ ಪಾರದರ್ಶಕ ಮತದಾರರ ಪಟ್ಟಿ ಅತ್ಯಗತ್ಯ. ಅರ್ಹ ಮತದಾರರು ನಿಗದಿತ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವ ಮೂಲಕ ಸಹಕರಿಸಬೇಕು. ಸಮಾಜದ ಗಣ್ಯರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಭಿಯಾನದ ವೇಳಾಪಟ್ಟಿಯಂತೆ, ಜೂನ್ 30 ರಿಂದ ಜುಲೈ 29 ರವರೆಗೆ ಬಿ.ಎಲ್.ಒ (BLO) ಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಆಯೋಗದ ಮಾರ್ಗಸೂಚಿಯಂತೆ 2002 ರ ಮತದಾರರ ಪಟ್ಟಿಯನ್ನು ಮಾನದಂಡವಾಗಿಟ್ಟುಕೊಂಡು, ಪ್ರಸ್ತುತ 2025 ರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯ ನಂತರ ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ಜಿಲ್ಲೆಯಾದ್ಯಂತ ಜನಪ್ರತಿನಿಧಿಗಳಿಗೆ ಮತ್ತು ಗಣ್ಯರಿಗೆ ನಮೂನೆಗಳನ್ನು ವಿತರಿಸುವ ಕಾರ್ಯಕ್ರಮ ಜೋರಾಗಿ ನಡೆಯಿತು. ರಾಯಚೂರು ನಗರ ಶಾಸಕ ಡಾ. ಶಿವರಾಜ ಎಸ್. ಪಾಟೀಲ್ ಅವರಿಗೆ ತಹಶೀಲ್ದಾರ್ ಸುರೇಶ ವರ್ಮಾ, ಮಾನ್ವಿ ಶಾಸಕ ಹಂಪಯ್ಯ ನಾಯಕ ಅವರಿಗೆ ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್ ಹಾಗೂ ತಹಶೀಲ್ದಾರ್ ಅಶೋಕ ಪವಾರ್ ನಮೂನೆಗಳನ್ನು ಹಸ್ತಾಂತರಿಸಿದರು.

ಇದೇ ರೀತಿ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ, ದೇವದುರ್ಗ ಶಾಸಕ ಜಿ. ಕರಿಯಮ್ಮ ನಾಯಕ ಸೇರಿದಂತೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಜನಪ್ರತಿನಿಧಿಗಳು ಹಾಗೂ ಗಣ್ಯರಿಗೆ ಆಯಾ ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಅಧಿಕಾರಿಗಳು ನಮೂನೆಗಳನ್ನು ವಿತರಿಸಿ, ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕೋರಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...