Home ಸುದ್ದಿ ಗಂಗಾವತಿಯ ಬೇತಲ್ ಕಾಲೇಜಿನಲ್ಲಿ ಮಾದಕ ವ್ಯಸನ ಹಾಗೂ ಅಪರಾಧಗಳ ವಿರುದ್ಧ ಜಾಗೃತಿ: ವಿದ್ಯಾರ್ಥಿಗಳಿಗೆ ದಾರಿ ದೀಪವಾದ ಕಾರ್ಯಕ್ರಮ.
ಸುದ್ದಿ

ಗಂಗಾವತಿಯ ಬೇತಲ್ ಕಾಲೇಜಿನಲ್ಲಿ ಮಾದಕ ವ್ಯಸನ ಹಾಗೂ ಅಪರಾಧಗಳ ವಿರುದ್ಧ ಜಾಗೃತಿ: ವಿದ್ಯಾರ್ಥಿಗಳಿಗೆ ದಾರಿ ದೀಪವಾದ ಕಾರ್ಯಕ್ರಮ.

Share
Share

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ, : “ಮಾದಕ ವಸ್ತುಗಳಿಗೆ ‘ಬೇಡ’ ಎಂದು ಹೇಳಿ, ಜೀವನಕ್ಕೆ ‘ಹೌದು’ ಎಂದು ಹೇಳಿ” ಎಂಬ ಪ್ರೇರಣಾದಾಯಕ ಘೋಷವಾಕ್ಯದೊಂದಿಗೆ, ಗಂಗಾವತಿಯ ಬೇತಲ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧ ದಿನದ ಅಂಗವಾಗಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಕರ್ನಾಟಕ ಸರ್ಕಾರ, ಸ್ಥಳೀಯ ನಗರ ಪೊಲೀಸ್ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (NSS) ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವು ಯುವಜನರಲ್ಲಿ ಹೊಸ ಚೈತನ್ಯವನ್ನು ತುಂಬಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಗರ ಠಾಣೆಯ ಪಿ.ಎಸ್.ಐ ನಾಗರಾಜ್ ಅವರು ಮಾತನಾಡಿ, ಮಾದಕ ವ್ಯಸನವು ಯುವಪೀಳಿಗೆಯ ಭವಿಷ್ಯವನ್ನು ಹೇಗೆ ಅಂಧಕಾರದತ್ತ ತಳ್ಳುತ್ತದೆ ಎಂಬುದನ್ನು ಎಳೆಎಳೆಯಾಗಿ ವಿವರಿಸಿದರು. ಮಾದಕ ವಸ್ತುಗಳ ಸೆಳೆತವು ಯುವಕರನ್ನು ಅಪರಾಧ ಲೋಕದತ್ತ ಕೊಂಡೊಯ್ಯುವ ಸಾಧ್ಯತೆಗಳ ಬಗ್ಗೆ ಎಚ್ಚರಿಸಿದ ಅವರು, ವಿದ್ಯಾರ್ಥಿಗಳು ತಮ್ಮ ಸ್ನೇಹ ಬಳಗವನ್ನು ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳುವಂತೆ ಮತ್ತು ಜೀವನದಲ್ಲಿ ಉನ್ನತ ಗುರಿಗಳನ್ನು ಇಟ್ಟುಕೊಳ್ಳುವಂತೆ ಕಿವಿಮಾತು ಹೇಳಿದರು.

ಎ.ಎಸ್.ಐ ವಿರೇಶ್ ಅವರು ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ಭೀಕರ ದೈಹಿಕ ಮತ್ತು ಮಾನಸಿಕ ಅಡ್ಡಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಈ ದುಷ್ಪ್ರಭಾವಗಳಿಂದ ಯುವಜನತೆ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ದೇಶದ ಹಿತದೃಷ್ಟಿಯಿಂದ ಎಷ್ಟು ಮುಖ್ಯ ಎಂಬುದನ್ನು ಒತ್ತಿ ಹೇಳಿದರು. ಜಾಗೃತಿ ಕಾರ್ಯಕ್ರಮದ ಭಾಗವಾಗಿ ಏರ್ಪಡಿಸಲಾಗಿದ್ದ ಪೋಸ್ಟರ್ ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಮಾರಕ ಪರಿಣಾಮಗಳ ಕುರಿತು ಗಂಭೀರ ಚಿಂತನೆಯನ್ನು ಮೂಡಿಸಿತು.

ಕಾಲೇಜಿನ ಪ್ರಾಚಾರ್ಯರಾದ ಬಸವರಾಜ್ ಕೆ ಅವರು  ಕ್ರೀಡೆ, ಯೋಗ ಮತ್ತು ಸೃಜನಾತ್ಮಕ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳುತ್ತಾ. ವಿಶೇಷವಾಗಿ, ಗ್ಲಾಮರ್ ಪ್ರಪಂಚದ ಮೋಹಕ್ಕೆ ಬಲಿಯಾಗಬೇಡಿ ಎಂದ ಅವರು, “ಕೆಲ ಚಿತ್ರನಟರು ಪ್ರಚಾರ ಮಾಡುವ ಮಾದಕ ವಸ್ತುಗಳು ಮತ್ತು ಗುಟಕಾ ಜಾಹೀರಾತುಗಳಿಂದ ಸಂಪೂರ್ಣ ದೂರವಿರಿ. ಇಂತಹ ಆಕರ್ಷಣೆಗಳು ನಿಮ್ಮ ಸುಂದರ ಭವಿಷ್ಯವನ್ನು ಬಲಿ ಪಡೆಯಬಹುದು,” ಎಂದು ಎಚ್ಚರಿಕೆಯ ಸಂದೇಶ ನೀಡಿದರು.

ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಬಿ.ಸಿ.ಎಫ್.ಎ ಅಧ್ಯಕ್ಷ ರಾಜು ಸುಧಾಕರ್, ಆಡಳಿತಾಧಿಕಾರಿ ಹೇಮಾ ಸುಧಾಕರ್, ಖಜಾಂಚಿ ಸುಜಾತ ರಾಜು, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ನೂರಾರು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಮಾದಕ ವಸ್ತು ಮುಕ್ತ ಸಮಾಜದ ನಿರ್ಮಾಣಕ್ಕೆ ಪ್ರತಿಜ್ಞೆ ಸ್ವೀಕರಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...