Home ಸುದ್ದಿ ಹೊಸಪೇಟೆ: ಪೊಲೀಸ್ ಇಲಾಖೆಯಲ್ಲಿ 33 ವರ್ಷಗಳ ದಕ್ಷ ಸೇವೆ; ಎಎಸ್‌ಐ ಕೆ. ಕರಿವೀರಪ್ಪಗೆ ಭಾವುಕ ಬೀಳ್ಕೊಡುಗೆ.
ಸುದ್ದಿ

ಹೊಸಪೇಟೆ: ಪೊಲೀಸ್ ಇಲಾಖೆಯಲ್ಲಿ 33 ವರ್ಷಗಳ ದಕ್ಷ ಸೇವೆ; ಎಎಸ್‌ಐ ಕೆ. ಕರಿವೀರಪ್ಪಗೆ ಭಾವುಕ ಬೀಳ್ಕೊಡುಗೆ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಹೊಸಪೇಟೆ: ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಗಲಿರುಳು ಶ್ರಮಿಸಿ, ಪೊಲೀಸ್ ಇಲಾಖೆಯಲ್ಲಿ 33 ವರ್ಷಗಳ ಸುದೀರ್ಘ ಹಾಗೂ ನಿಷ್ಕಳಂಕ ಸೇವೆ ಸಲ್ಲಿಸಿದ ಹೊಸಪೇಟೆ ಟೌನ್ ಪೊಲೀಸ್ ಠಾಣೆಯ ಎಎಸ್‌ಐ ಕೆ. ಕರಿವೀರಪ್ಪ ಅವರು ಇಂದು ಸೇವೆಯಿಂದ ನಿವೃತ್ತಿ ಹೊಂದಿದರು.

ನಗರದ ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವಿಜಯನಗರ ಡಿವೈಎಸ್‌ಪಿ ಮುರಳಿಧರ್ ಅವರು ಮಾತನಾಡಿ, “ಕಾನ್ಸ್‌ಟೇಬಲ್‌ನಿಂದ ಎಎಸ್‌ಐ ಹುದ್ದೆಯವರೆಗೆ ಕರಿವೀರಪ್ಪ ಅವರ ಸೇವಾ ಪಯಣ ಅತ್ಯಂತ ಪ್ರಶಂಸನೀಯ. ಅವರ ದೈಹಿಕ ಸದೃಢತೆ ಇಲಾಖೆಯ ಇತರೆ ಸಿಬ್ಬಂದಿಗಳಿಗೆ ಮಾದರಿಯಾಗಿದೆ” ಎಂದು ಬಣ್ಣಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈಎಸ್‌ಪಿ ಮುರಳಿಧರ್ ಅವರು, ಕರಿವೀರಪ್ಪ ಅವರ ಬದ್ಧತೆಯನ್ನು ಶ್ಲಾಘಿಸಿದರು. ಸಮಾರಂಭದಲ್ಲಿ ಮಾತನಾಡಿದ ಟೌನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಫೈಜುಲ್ಲಾ, “ಕರಿವೀರಪ್ಪ ಅವರು ಕೇವಲ ಕರ್ತವ್ಯನಿಷ್ಠ ಅಧಿಕಾರಿಯಲ್ಲ, ಅವರು ಅತ್ಯುತ್ತಮ ಕಬಡ್ಡಿ ಆಟಗಾರರೂ ಹೌದು. ಇಲಾಖೆಗೆ ಹಲವು ಪ್ರಶಸ್ತಿಗಳನ್ನು ತಂದುಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ. ಇಂದಿಗೂ ಅವರು ನವ ಯುವಕರಂತೆ ಉತ್ಸಾಹದಿಂದ ಇರುವುದು ಅವರ ಶಿಸ್ತುಬದ್ಧ ಜೀವನಕ್ಕೆ ಸಾಕ್ಷಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಪಾಲ್ಗೊಂಡಿದ್ದ ಗಂಗಾವತಿಯ ರಾಮುಲು ಕಾಲೇಜಿನ ಹಳೆ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ ನಬಿ ಸಾಬ್ ಲಾಟಿ ಅವರು, ವಿದ್ಯಾರ್ಥಿ ದೆಸೆಯಲ್ಲಿ ಕರಿವೀರಪ್ಪ ಅವರು ತೋರುತ್ತಿದ್ದ ನಿಸ್ವಾರ್ಥ ಸೇವಾ ಮನೋಭಾವ ಹಾಗೂ ಸ್ನೇಹಿತರಿಗಾಗಿ ಸ್ಪಂದಿಸುತ್ತಿದ್ದ ಗುಣವನ್ನು ಸ್ಮರಿಸಿ ಭಾವುಕರಾದರು.

ಈ ಸಂದರ್ಭದಲ್ಲಿ ನಿವೃತ್ತ ನೌಕರರಾದ ಕುಮಾರಸ್ವಾಮಿ, ಶರಣಪ್ಪ ಮೇಟಿ, ಅಂಜನಪ್ಪ, ಪಿಎಸ್‌ಐ ಪರಮೇಶ್ವರಪ್ಪ ಸೇರಿದಂತೆ ಟಿ.ಬಿ. ಡ್ಯಾಮ್, ಬಳ್ಳಾರಿ, ಕಂಪ್ಲಿ ಮತ್ತು ಗಂಗಾವತಿಯಿಂದ ಆಗಮಿಸಿದ್ದ ಅವರ ಆಪ್ತ ಗೆಳೆಯರು, ಪೊಲೀಸ್ ಸಿಬ್ಬಂದಿ ವರ್ಗದವರು ಪಾಲ್ಗೊಂಡು ಕರಿವೀರಪ್ಪ ಅವರನ್ನು ಸನ್ಮಾನಿಸಿ, ಅವರ ಮುಂದಿನ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದು ಹಾರೈಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...