Home ಸುದ್ದಿ ರಾಯಚೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಭರ್ಜರಿ ಯಶಸ್ಸು: ಶೇ.100ರಷ್ಟು ಗುರಿ ಸಾಧನೆ.
ಸುದ್ದಿ

ರಾಯಚೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಭರ್ಜರಿ ಯಶಸ್ಸು: ಶೇ.100ರಷ್ಟು ಗುರಿ ಸಾಧನೆ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು, ಜುಲೈ 02: ದೇಶದಲ್ಲಿ ಪೋಲಿಯೋ ಮುಕ್ತ ಸ್ಥಿತಿಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ನಿಗದಿತ ಗುರಿಯನ್ನು ಶೇ.100ರಷ್ಟು ಸಾಧಿಸುವ ಮೂಲಕ ಜಿಲ್ಲೆಯು ಮತ್ತೊಮ್ಮೆ ಆರೋಗ್ಯ ಸೇವೆಯಲ್ಲಿ ಮಾದರಿಯಾಗಿದೆ ಎಂದು ಕಲಬುರಗಿ ಆರೋಗ್ಯ ಸೇವೆಗಳ ನಿರ್ದೇಶನಾಲಯದ ಉಪ ನಿರ್ದೇಶಕರು ಹಾಗೂ ಪೋಲಿಯೋ ರಾಜ್ಯ ನೋಡಲ್ ಅಧಿಕಾರಿಯಾದ ಡಾ. ಎ.ಎಸ್. ರುದ್ರವಾಡಿ ತಿಳಿಸಿದ್ದಾರೆ.

ಕಳೆದ ಜೂನ್ 28ರಂದು ಜಿಲ್ಲೆಯಾದ್ಯಂತ ಒಂದೇ ದಿನದ ಲಸಿಕಾ ಅಭಿಯಾನ ಮತ್ತು ನಂತರ ಮನೆ ಮನೆ ಭೇಟಿಯ ಮೂಲಕ ಐದು ವರ್ಷದೊಳಗಿನ ಎಲ್ಲಾ ಮಕ್ಕಳನ್ನು ತಲುಪುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿತ್ತು. ಈ ಕಾರ್ಯಾಚರಣೆಯು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಂಡಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಅರ್ಹ ಮಕ್ಕಳಿಗೆ ಲಸಿಕೆ ನೀಡಲಾಗಿದೆ.

ರಾಷ್ಟ್ರೀಯ ವೈದ್ಯರ ದಿನದ ಶುಭ ಸಂದರ್ಭದಲ್ಲಿ ಮಾತನಾಡಿದ ಡಾ. ರುದ್ರವಾಡಿ ಅವರು, ಅಭಿಯಾನದ ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದರು. “ಮಕ್ಕಳ ಅಂಗವಿಕಲತೆ ತಡೆಗಟ್ಟುವ ಈ ಮಹತ್ಕಾರ್ಯದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವೈದ್ಯಕೀಯ ಸಿಬ್ಬಂದಿ, ರೈಲ್ವೆ ಹಾಗೂ ಸಾರಿಗೆ ಇಲಾಖೆ, ಮಾಧ್ಯಮ ಮಿತ್ರರು ಮತ್ತು ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದೆ,” ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುರೇಂದ್ರ ಬಾಬು, ಪೋಲಿಯೋ ಅನುಷ್ಠಾನ ಅಧಿಕಾರಿ ಡಾ. ನಂದಿತಾ ಎಮ್.ಎನ್, ಡಾ. ಗಣೇಶ್, ಡಾ. ಶಿವಕುಮಾರ ನಾರಾ, ಡಾ. ಮಹಮ್ಮದ್ ಶಾಕೀರ್ ಹಾಗೂ ಡಾ. ಚಂದ್ರಶೇಖರಯ್ಯ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...