Home ಸುದ್ದಿ ಶಿಥಿಲಗೊಂಡ ಸೇತುವೆ: ದುರಸ್ತಿಗೆ ಕಾಯುತ್ತಿರುವ ಗ್ರಾಮಸ್ಥರು.
ಸುದ್ದಿ

ಶಿಥಿಲಗೊಂಡ ಸೇತುವೆ: ದುರಸ್ತಿಗೆ ಕಾಯುತ್ತಿರುವ ಗ್ರಾಮಸ್ಥರು.

Share
Share

ಅಧಿಕಾರಿಗಳ ಆದೇಶ ಪಾತ್ರ

ಮರ್ಚೆಡ್ ಡೇಸ್ ಸುದ್ದಿ.

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಹಾಳ ಗ್ರಾಮದ ಬಳಿ ಇರುವ ಮುಖ್ಯ ಕಾಲುವೆಯ ಮೈಲ್ 42, ಸರಪಳಿ ಸಂಖ್ಯೆ 2161.33ರಲ್ಲಿರುವ ಸ್ಟೀಲ್ ಫೂಟ್ ಬ್ರಿಡ್ಜ್ (ಕಾಲು ಸೇತುವೆ) ತೀವ್ರವಾಗಿ ಶಿಥಿಲಗೊಂಡಿದೆ. ಈ ಸೇತುವೆಯು ಅತ್ಯಂತ ಹಳೆಯದಾಗಿದ್ದು, ಅದರ ಮೇಲೆ ನಿತ್ಯವೂ ವಿದ್ಯಾರ್ಥಿಗಳು, ರೈತರು ಹಾಗೂ ಹಿರಿಯ ನಾಗರಿಕರು ಅಪಾಯದ ಅಂಚಿನಲ್ಲಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ.

ಕಳೆದ ಬೇಸಿಗೆಯಿಂದಲೂ ಸ್ಥಳೀಯರು ಈ ಸೇತುವೆಯನ್ನು ದುರಸ್ತಿಗೊಳಿಸುವಂತೆ ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಪದೇ ಪದೆ ಮನವಿ ಪತ್ರಗಳನ್ನು ಸಲ್ಲಿಸುತ್ತಾ ಬಂದಿದ್ದಾರೆ. ಆದರೆ, ಅಧಿಕಾರಿಗಳು ಮಾತ್ರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಳೆಗಾಲ ಆರಂಭವಾದರೂ ಈವರೆಗೆ ಯಾವುದೇ ದುರಸ್ತಿ ಕಾರ್ಯಗಳು ಕೈಗೊಳ್ಳದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಸ್ಥಳೀಯ ಸಂಘಟನೆಗಳು ಮತ್ತು ಸಾರ್ವಜನಿಕರು ಫೋನ್ ಕರೆಗಳ ಮೂಲಕವೂ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಸಮಸ್ಯೆಯನ್ನು ವಿವರಿಸಿದ್ದಾರೆ. ಮುಖ್ಯ ಕಾಲುವೆಯ ಸಮರ್ಪಕ ನಿರ್ವಹಣೆಗಾಗಿ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಈ ಸೇತುವೆಯನ್ನು ತುರ್ತಾಗಿ ದುರಸ್ತಿಪಡಿಸುವುದು ಅತ್ಯಗತ್ಯವಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಕುರಿತು ಎಚ್ಚೆತ್ತುಕೊಂಡಿರುವ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಮುಖ್ಯ ಕಾಲುವೆಯ ಈ ಸೇತುವೆಯನ್ನು ದುರಸ್ತಿಪಡಿಸಲು 5.00 ಲಕ್ಷ ರೂಪಾಯಿಗಳ ಅನುದಾನ ನೀಡುವಂತೆ ಕೋರಿ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ, ಈ ಪ್ರಸ್ತಾವನೆ ಕೇವಲ ಕಾಗದದ ಮೇಲೆಯೇ ಉಳಿಯುತ್ತದೋ ಅಥವಾ ಶೀಘ್ರವೇ ಕಾಮಗಾರಿ ಆರಂಭವಾಗುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

ಸಾರ್ವಜನಿಕರ ಜೀವದ ಹಿತದೃಷ್ಟಿಯಿಂದ ಕೂಡಲೇ ಎಚ್ಚೆತ್ತುಕೊಂಡು, ಶಿಥಿಲಗೊಂಡಿರುವ ಸೇತುವೆಯನ್ನು ದುರಸ್ತಿಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನಿರ್ಲಕ್ಷ್ಯ ಮುಂದುವರಿದರೆ ಮುಂದಾಗುವ ಅವಘಡಗಳಿಗೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ಮಾದಿಗ ದಂಡೋರ MRPS ಕಾರಟಗಿ ತಾಲೂಕು ಕಾರ್ಯ ಅಧ್ಯಕ್ಷರು ಶರಣಪ್ಪ ವಣಿಗೇರಿ ಮತ್ತು ಗ್ರಾಮಸ್ಥರು ಎಚ್ಚರಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...