Home ಸುದ್ದಿ ಕನಕಗಿರಿ: ಅಕ್ರಮ ಮರಳು ದಂಧೆಯ ಮೇಲೆ ಲೋಕಾಯುಕ್ತರ ಮಿಂಚಿನ ದಾಳಿ; ನಾಲ್ಕು ಹಿಟಾಚಿ ವಶ.
ಸುದ್ದಿ

ಕನಕಗಿರಿ: ಅಕ್ರಮ ಮರಳು ದಂಧೆಯ ಮೇಲೆ ಲೋಕಾಯುಕ್ತರ ಮಿಂಚಿನ ದಾಳಿ; ನಾಲ್ಕು ಹಿಟಾಚಿ ವಶ.

Share
Share

ಮರ್ಚೆಡ್ ಡೇಸ್ ಸುದ್ದಿ.

ಕೊಪ್ಪಳ:ಕನಕಗಿರಿ ತಾಲೂಕಿನ ನವಲಿ ಗ್ರಾಮದ ಸುತ್ತಮುತ್ತಲಿನಲ್ಲಿ ನಡೆಯುತ್ತಿದ್ದ ಬೃಹತ್ ಅಕ್ರಮ ಮರಳು ಗಣಿಗಾರಿಕೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ ನಾಲ್ಕು ಹಿಟಾಚಿ ಯಂತ್ರಗಳು ಸೇರಿದಂತೆ ಅಪಾರ ಪ್ರಮಾಣದ ಮರಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪ್ರದೇಶದಲ್ಲಿ ಸುಮಾರು 20ಕ್ಕೂ ಹೆಚ್ಚು ಅಕ್ರಮ ಮರಳು ಅಡ್ಡೆಗಳು ತಲೆ ಎತ್ತಿರುವ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಗಳ ತಂಡ ಸ್ಥಳಕ್ಕೆ ದಾಳಿ ಮಾಡುತ್ತಿದ್ದಂತೆ ದಂಧೆಯಲ್ಲಿ ತೊಡಗಿದ್ದ ಕೆಲವರು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯ ವೇಳೆ 20 ಟಿಪ್ಪರ್‌ಗೂ ಅಧಿಕ ಮರಳು, 4 ಹಿಟಾಚಿ ಯಂತ್ರಗಳು, ಒಂದು ಆಯಿಲ್ ಇಂಜಿನ್ ಮತ್ತು ಒಂದು ಟಿಪ್ಪರನ್ನು ವಶಕ್ಕೆ ಪಡೆದು, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ದಂಧೆ ನಡೆಯುತ್ತಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಗಣಿಗಾರಿಕೆಯಿಂದ ಪರಿಸರಕ್ಕೆ ಆಗಿರುವ ಹಾನಿ ಮತ್ತು ಕಳೆದುಕೊಂಡ ಸಂಪನ್ಮೂಲಗಳ ಕುರಿತು ವರದಿಯನ್ನು ಸಿದ್ಧಪಡಿಸುತ್ತಿದ್ದಾರೆ.

ಅಕ್ರಮ ಗಣಿಗಾರಿಕೆಯಿಂದಾಗಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಸುತ್ತಮುತ್ತಲಿನ ಕೃಷಿ ಭೂಮಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸರದ ಮೇಲೆ ಆಗುತ್ತಿರುವ ಈ ಹಾನಿಯನ್ನು ತಡೆಯಲು ಮತ್ತು ಅಕ್ರಮ ದಂಧೆಗೆ ಕಡಿವಾಣ ಹಾಕಲು ಲೋಕಾಯುಕ್ತರು ಬದ್ಧರಾಗಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳು  ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್ ಮತ್ತು ಚಂದ್ರು ಈಟಿ ತಂಡ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು. ಸದ್ಯ ಪ್ರಕರಣವನ್ನು ದಾಖಲಿಸಿಕೊಂಡಿರುವ ಅಧಿಕಾರಿಗಳು, ಅಕ್ರಮ ದಂಧೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...