Home ಸುದ್ದಿ ಗಂಗಾವತಿ ಬೇತೆಲ್ ಕಾಲೇಜಿನಲ್ಲಿ ಅರ್ಥಪೂರ್ಣ ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’: ‘ಜ್ಞಾನ ನಿಧಿ’ ತಂಡಕ್ಕೆ ಪ್ರಥಮ ಸ್ಥಾನ.
ಸುದ್ದಿ

ಗಂಗಾವತಿ ಬೇತೆಲ್ ಕಾಲೇಜಿನಲ್ಲಿ ಅರ್ಥಪೂರ್ಣ ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’: ‘ಜ್ಞಾನ ನಿಧಿ’ ತಂಡಕ್ಕೆ ಪ್ರಥಮ ಸ್ಥಾನ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ವಚನ ಶಾಸ್ತ್ರದ ಪಿತಾಮಹ ಫ.ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ, ನಗರದ ಬೇತೆಲ್ ಸ್ವತಂತ್ರ ಪದವಿ ಪೂರ್ವ ಕಾಲೇಜು ಮತ್ತು ಎನ್‌ಎಸ್‌ಎಸ್ ಘಟಕದ ವತಿಯಿಂದ “ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ”ಯನ್ನು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವಚನ ಸಾಹಿತ್ಯದ ಜಾಗೃತಿ ಮೂಡಿಸಲು ಮತ್ತು ನೈತಿಕ ಮೌಲ್ಯಗಳನ್ನು ಬಿತ್ತುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ‘ವಚನ ರಸಪ್ರಶ್ನೆ’ ಸ್ಪರ್ಧೆ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ನೇರ ಪ್ರಶ್ನೋತ್ತರ, ಅಂಕಿತನಾಮಗಳ ಗುರುತಿಸುವಿಕೆ, ಶರಣರ ಭಾವಚಿತ್ರಗಳ ಪರಿಚಯ ಮತ್ತು ವಚನಗಳ ಜೋಡಣೆ ಸೇರಿದಂತೆ ಐದು ವಿವಿಧ ಸುತ್ತುಗಳಲ್ಲಿ ಸ್ಪರ್ಧೆ ನಡೆಯಿತು.

ಪ್ರಥಮ ಸ್ಥಾನ: “ಜ್ಞಾನ ನಿಧಿ” ತಂಡ

ದ್ವಿತೀಯ ಸ್ಥಾನ: “ಭಕ್ತಿ ಭಂಡಾರಿ” ತಂಡ

ತೃತೀಯ ಸ್ಥಾನ: “ವಿಶ್ವಗುರು” ತಂಡ

ವಿದ್ಯಾರ್ಥಿಗಳು ಬಸವಣ್ಣ, ಅಕ್ಕಮಹಾದೇವಿ ಹಾಗೂ ಅಲ್ಲಮಪ್ರಭುಗಳ ವಚನಗಳನ್ನು ಮನೋಜ್ಞವಾಗಿ ಪಠಿಸುವ ಮೂಲಕ ಸಭಿಕರ ಮನಗೆದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿಜಲಿಂಗಪ್ಪ ಮೆಣಸಿಗಿ ಮಾತನಾಡಿ, “ವಚನ ಸಾಹಿತ್ಯ ಕೇವಲ ಪುಸ್ತಕಗಳಲ್ಲಿ ಉಳಿಯಬಾರದು, ಅದು ನಮ್ಮ ಜೀವನದ ದಾರಿದೀಪವಾಗಬೇಕು. ಸತ್ಯ ಮತ್ತು ನೈತಿಕತೆ ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ವಚನಗಳ ಮೌಲ್ಯಗಳು ಅತ್ಯಗತ್ಯ,” ಎಂದು ಕಿವಿಮಾತು ಹೇಳಿದರು.

ರಾಷ್ಟ್ರೀಯ ಬಸವದಳದ ತಾಲೂಕಾ ಘಟಕದ ಗೌರವ ಅಧ್ಯಕ್ಷ ಕೆ. ಪಂಪಣ್ಣ ಮಾತನಾಡಿ, “ವಚನ ಸಾಹಿತ್ಯದಿಂದ ಆತ್ಮಬಲ ಹೆಚ್ಚುತ್ತದೆ. ನಾವು ವ್ಯಕ್ತಿಗಳ ಗುಲಾಮರಾಗುವುದನ್ನು ಬಿಟ್ಟು, ಅರಿವಿನ ಗುಲಾಮರಾಗಬೇಕು. ಶರಣರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವುದು ನಿಜವಾದ ಪೂಜೆ,” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬಿ.ಸಿ.ಎಫ್.ಎ ಆಡಳಿತಾಧಿಕಾರಿ ಹೇಮಾ ಸುಧಾಕರ್, ಖಜಾಂಚಿ ಸುಜಾತ ರಾಜು, ಕಾಲೇಜಿನ ಪ್ರಾಚಾರ್ಯ ಬಸವರಾಜ್ ಕೆ., ಮಹಿಳಾ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಹನುಮಂತಪ್ಪ, ಎನ್‌ಎಸ್‌ಎಸ್ ಅಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...