Home ಸುದ್ದಿ  ಕಾಗಿನೆಲೆ ಮಹಾಸಂಸ್ಥಾನದ ಶಾಖಾಮಠದ ಪ್ರಥಮ ವಾರ್ಷಿಕೋತ್ಸವ ಮತ್ತು ಬ್ರಹ್ಮಲೀನ ಜಗದ್ಗುರುಗಳ ಪುಣ್ಯರಾಧನೆ ಕಾರ್ಯಕ್ರಮ..
ಸುದ್ದಿ

 ಕಾಗಿನೆಲೆ ಮಹಾಸಂಸ್ಥಾನದ ಶಾಖಾಮಠದ ಪ್ರಥಮ ವಾರ್ಷಿಕೋತ್ಸವ ಮತ್ತು ಬ್ರಹ್ಮಲೀನ ಜಗದ್ಗುರುಗಳ ಪುಣ್ಯರಾಧನೆ ಕಾರ್ಯಕ್ರಮ..

Share
Share

 

ಮರ್ಚೆಡ್ ಡೇಸ್ ಸುದ್ದಿ.

ಬೆಂಗಳೂರಿನ :ಕೇತೋಹಳ್ಳಿಯಲ್ಲಿರುವ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾ ಮಠದಲ್ಲಿಂದು ಶಾಖಾಮಠದ ಪ್ರಥಮ ವಾರ್ಷಿಕೋತ್ಸವ ಮತ್ತು ಪರಮ ಪೂಜ್ಯ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮೀಜಿಯವರ 20ನೇ ಪುಣ್ಯರಾಧನಾ ಮಹೋತ್ಸವ ಅತ್ಯಂತ ಭಕ್ತಿಪೂರ್ವಕವಾಗಿ ನಡೆಯಿತು. ಈ ವಿಶೇಷ ಸಮಾರಂಭದಲ್ಲಿ ಪಾಲ್ಗೊಂಡ ಭಕ್ತಾದಿಗಳು ಹಾಗೂ ಗಣ್ಯರು, ದಿವಂಗತ ಜಗದ್ಗುರುಗಳ ಸ್ಮರಣೆಯನ್ನು ಮಾಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರುಗಳಾದ ಡಾ. ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಹೊಸದುರ್ಗ ಶಾಖಾಮಠದ ಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ವಹಿಸಿದ್ದರು. ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಪಾಲ್ಗೊಂಡು ಆಶೀರ್ವಾದ ಪಡೆದರು.

ಈ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ  ಹೆಚ್.ಎಂ. ರೇವಣ್ಣ, ನೂತನ ವಿಧಾನ ಪರಿಷತ್ ಸದಸ್ಯರಾದ  ಮಳವಳ್ಳಿ ಶಿವಣ್ಣ, ರಾಜ್ಯಸಭಾ ಸದಸ್ಯರಾದ ಪ್ರೊ. ಎಂ. ನಾಗರಾಜ್ ಹಾಗೂ ಖ್ಯಾತ ಚಲನಚಿತ್ರ ನಟ  ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತ ಸಮೂಹದೊಂದಿಗೆ ಈ ಕಾರ್ಯಕ್ರಮವು ಸಾರ್ಥಕವಾಗಿ ನೆರವೇರಿತು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...