Home ಸುದ್ದಿ ಹನುಮನಹಳ್ಳಿಯಲ್ಲಿ ಹಂಪಿ ಪ್ರಾಧಿಕಾರದ ನಿಯಮ ಗಾಳಿಗೆ, ಅಕ್ರಮ ರೆಸಾರ್ಟ್(ಎನ್ ಓ ಸಿ) ಪರವಾನಿಗೆ ರದ್ದಿಗೆ ಒತ್ತಾಯ.
ಸುದ್ದಿ

ಹನುಮನಹಳ್ಳಿಯಲ್ಲಿ ಹಂಪಿ ಪ್ರಾಧಿಕಾರದ ನಿಯಮ ಗಾಳಿಗೆ, ಅಕ್ರಮ ರೆಸಾರ್ಟ್(ಎನ್ ಓ ಸಿ) ಪರವಾನಿಗೆ ರದ್ದಿಗೆ ಒತ್ತಾಯ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಸಂಪರ್ಕ ರಸ್ತೆಯೇ ಇಲ್ಲದ ಕೃಷಿ ಭೂಮಿಯಲ್ಲಿ ನಿಯಮಬಾಹಿರವಾಗಿ ಬೃಹತ್ ರೆಸಾರ್ಟ್ ನಿರ್ಮಾಣ ಮಾಡಲಾಗಿದ್ದು, ಹಂಪಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಸ್ಥಳೀಯ ಪಂಚಾಯಿತಿ ಅಧಿಕಾರಿಗಳ ಶಾಮೀಲಾಗಿ ನೀಡಿರುವ ಪರವಾನಗಿಯನ್ನು ಕೂಡಲೇ ರದ್ದುಪಡಿಸುವಂತೆ ಭೂ ಮಾಲೀಕರು ಆಗ್ರಹಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹನುಮನಹಳ್ಳಿ ಸರ್ವೆ ನಂ. 61ರ ಭೂ ಮಾಲೀಕರಾದ ಶಾಂತಮ್ಮ ಮತ್ತು ಅಣ್ಣಪ್ಪ ನಾಯಕ, “ಸರ್ವೆ ನಂ. 75 ಮತ್ತು 84ರಲ್ಲಿ ರೆಸಾರ್ಟ್ ನಿರ್ಮಿಸುತ್ತಿರುವ ದೀಪಶ್ರೀ ರಾಜಪ್ಪ ಹಾಗೂ ಇತರರು, ನಕಲಿ ದಾಖಲೆ ಸೃಷ್ಟಿಸಿ ಪ್ರಾಧಿಕಾರದಿಂದ ಎನ್.ಒ.ಸಿ ಪಡೆದಿದ್ದಾರೆ. ಹಂಪಿ ಪ್ರಾಧಿಕಾರದ ನಿಯಮದಂತೆ ರೆಸಾರ್ಟ್ ನಿರ್ಮಾಣಕ್ಕೆ 12 ಮೀಟರ್ ಅಗಲದ ರಸ್ತೆ ಕಡ್ಡಾಯವಾಗಿದ್ದು, ಇಲ್ಲಿ ಅಂತಹ ಯಾವುದೇ ಸೌಕರ್ಯವಿಲ್ಲ,” ಎಂದು ಆರೋಪಿಸಿದರು.

ರೆಸಾರ್ಟ್ ಮಾಲೀಕರು ಸಾಣಾಪುರ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಭೂಮಾಪನ ಇಲಾಖೆ ಅಧಿಕಾರಿಗಳೊಂದಿಗೆ ಸೇರಿ ಅಕ್ರಮವಾಗಿ ರಸ್ತೆಯ ನಕ್ಷೆಯನ್ನು ರೂಪಿಸಿದ್ದಾರೆ ಎಂದು ಅವರು ದೂರಿದ್ದಾರೆ. “ನಮ್ಮ ಸ್ವಂತ ಜಮೀನಿನ ಮೂಲಕ ಅಕ್ರಮವಾಗಿ ರಸ್ತೆ ತೋರಿಸಲಾಗಿದೆ. ರೆಸಾರ್ಟ್ ನಿರ್ಮಾಣದಿಂದಾಗಿ ದಿನನಿತ್ಯ ಬೃಹತ್ ವಾಹನಗಳ ಸಂಚಾರ ಹೆಚ್ಚಾಗಿದ್ದು, ನಮ್ಮ ದೈನಂದಿನ ಜೀವನಕ್ಕೆ ತೀವ್ರ ತೊಂದರೆಯಾಗಿದೆ,” ಎಂದು ಅಳಲು ತೋಡಿಕೊಂಡಿದ್ದಾರೆ.

ಅಲ್ಲದೆ, ರೆಸಾರ್ಟ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ತಡೆದಿದ್ದರೂ, ಪೊಲೀಸ್ ಭದ್ರತೆಯನ್ನು ಬಳಸಿಕೊಂಡು ಬಲವಂತವಾಗಿ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಪದೇ ಪದೇ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಕ್ರಮ ರೆಸಾರ್ಟ್ ಪರವಾನಗಿಯನ್ನು ಸರ್ಕಾರ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರ ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿರುವ ಅವರು, ಒಂದು ವೇಳೆ ಜಿಲ್ಲಾಡಳಿತ ಈ ಕೂಡಲೇ ಕ್ರಮ ಕೈಗೊಳ್ಳದಿದ್ದರೆ, ತಮಗೆ ಅನ್ಯಾಯವಾಗಿದೆ ಎಂದು ಭಾವಿಸಿ ಇಡೀ ಕುಟುಂಬವು ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಮುಂದೆ ಉಗ್ರ ಧರಣಿ ಸತ್ಯಾಗ್ರಹ ಮಾಡುವದಾಗಿ ಎಚ್ಚರಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...