Home ಸುದ್ದಿ ರಾಯಚೂರಿನಲ್ಲಿ ನಾಳೆ ‘ಸದೃಢ ದೇಹ–ಬಲಿಷ್ಠ ಪ್ರಜಾಪ್ರಭುತ್ವ’ಕ್ಕಾಗಿ ಮ್ಯಾರಥಾನ್, ಸೈಕ್ಲೋಥಾನ್. 
ಸುದ್ದಿ

ರಾಯಚೂರಿನಲ್ಲಿ ನಾಳೆ ‘ಸದೃಢ ದೇಹ–ಬಲಿಷ್ಠ ಪ್ರಜಾಪ್ರಭುತ್ವ’ಕ್ಕಾಗಿ ಮ್ಯಾರಥಾನ್, ಸೈಕ್ಲೋಥಾನ್. 

Share
Share

 

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು: ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ವತಿಯಿಂದ ‘ಸದೃಢ ದೇಹ–ಸ್ವಚ್ಛ ಸಮಾಜ–ಬಲಿಷ್ಠ ಪ್ರಜಾಪ್ರಭುತ್ವ’ಕ್ಕಾಗಿ ನಾಳೆ (ಜುಲೈ 09) ಬೆಳಿಗ್ಗೆ 07 ಗಂಟೆಗೆ ವಿಶೇಷ ಮ್ಯಾರಥಾನ್ ಮತ್ತು ಸೈಕ್ಲೋಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ–2026 ಮತ್ತು ನಗರ ಸ್ವಚ್ಛತೆ ಹಾಗೂ ಘನತ್ಯಾಜ್ಯ ನಿರ್ವಹಣೆಯ ನಿಯಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾಗುವ ಈ ಜಾಗೃತಿ ಜಾಥಾವು ಅಂಬೇಡ್ಕರ್ ವೃತ್ತ, ತೀನ್ಕಂದಿಲ್, ಮಹಾವೀರ ವೃತ್ತ, ಚಂದ್ರಮೌಳೇಶ್ವರ ವೃತ್ತ ಹಾಗೂ ಬಸವೇಶ್ವರ ವೃತ್ತದ ಮಾರ್ಗವಾಗಿ ಸಾಗಿ, ಪುನಃ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಿ ಸಮಾರೋಪಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸುವ/ತಿದ್ದುಪಡಿ ಮಾಡುವಲ್ಲಿ ನಾಗರಿಕರ ಸಕ್ರಿಯ ಭಾಗವಹಿಸುವಿಕೆ ಹಾಗೂ ನಗರದ ಸ್ವಚ್ಛತೆ ಮತ್ತು ಮೂಲದಲ್ಲಿಯೇ ಕಸ ವಿಂಗಡಣೆಯ ಅಗತ್ಯತೆಯ ಬಗ್ಗೆ ಜನರಿಗೆ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಲು ಈ ವೇದಿಕೆಯನ್ನು ಬಳಸಿಕೊಳ್ಳಲಾಗುತ್ತಿದೆ. ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು https://docs.google.com/forms/d/e/1FAIpQLSe4VvhLgYXotDfx7BWOFfxGAQbfMVJKNyllrk2aEBcmDUB4hg/viewform?usp=publish-editor ಈ ಲಿಂಕ್‌ಗೆ ಭೇಟಿ ನೀಡಿ ನೋಂದಣಿಯನ್ನು ಮಾಡಿಕೊಳ್ಳಬಹುದಾಗಿದೆ.

ನಗರದ ಯುವಕರು, ವಿದ್ಯಾರ್ಥಿಗಳು, ಮಹಿಳೆಯರು, ವಿವಿಧ ಸಂಘ–ಸಂಸ್ಥೆಗಳು, ಸ್ವಯಂ ಸೇವಾ ಸಂಘಟನೆಗಳು, ಕ್ರೀಡಾಪಟುಗಳು ಹಾಗೂ ಸೈಕ್ಲಿಂಗ್ ಆಸಕ್ತರು ಈ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...