Home ಸುದ್ದಿ ವಸತಿ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ವಿರೋಧ: ಕಾಮಗಾರಿ ತಕ್ಷಣ ಸ್ಥಗಿತಗೊಳಿಸಲು ಆಗ್ರಹ.
ಸುದ್ದಿ

ವಸತಿ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ವಿರೋಧ: ಕಾಮಗಾರಿ ತಕ್ಷಣ ಸ್ಥಗಿತಗೊಳಿಸಲು ಆಗ್ರಹ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ನಗರದ 28ನೇ ವಾರ್ಡಿನ ಹಿರೇಜಂತಕಲ್ ಬೈಪಾಸ್ ರಸ್ತೆಯ ಜನವಸತಿ ಪ್ರದೇಶದಲ್ಲಿ ಅಳವಡಿಸಲಾಗುತ್ತಿರುವ ಮೊಬೈಲ್ ಟವರ್ ನಿರ್ಮಾಣ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿ, ಮಾಜಿ ನಗರಸಭೆ ಸದಸ್ಯ ಎಫ್. ರಾಘವೇಂದ್ರ ಅವರ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ನಗರಸಭೆಗೆ ಮನವಿ ಸಲ್ಲಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಕಾರ್ಯವನ್ನು ಸ್ಥಗಿತಗೊಳಿಸುವಂತೆ ಅವರು ಪಟ್ಟು ಹಿಡಿದಿದ್ದಾರೆ.

ಟವರ್ ನಿರ್ಮಾಣವಾಗುತ್ತಿರುವ ಸ್ಥಳದ ಸುತ್ತಮುತ್ತ ಶಾಲೆ, ಚರ್ಚ್ ಮತ್ತು ವೃದ್ಧಾಶ್ರಮಗಳಿದ್ದು, ನಿತ್ಯ ನೂರಾರು ಜನರು ಓಡಾಡುವ ಪ್ರದೇಶವಾಗಿದೆ. ಇಲ್ಲಿ ಟವರ್ ಸ್ಥಾಪಿಸುವುದರಿಂದ ವಿಕಿರಣಗಳ ಭೀತಿ ಸೇರಿದಂತೆ ಅನೇಕ ಸಮಸ್ಯೆಗಳು ಉಂಟಾಗಲಿವೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಇಂತಹ ಕಾಮಗಾರಿ ಕೈಗೆತ್ತಿಕೊಂಡಿರುವುದು ನಿಯಮಬಾಹಿರ ಎಂದು ಅವರು ದೂರಿದ್ದಾರೆ.

ಈ ಮನವಿ ಸಲ್ಲಿಕೆ ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ. ರಾಮಕೃಷ್ಣ, ವಾರ್ಡಿನ ಪ್ರಮುಖರಾದ ಬಸವರಾಜ ಕುರಗೋಡು, ಚಂದ್ರಶೇಖರ್ ಕುರುಗೋಡು, ಬಂಡಿ ರಾಮಣ್ಣ, ನಾಗರಾಜ ಆಚಾರ್ಯ, ಯಲ್ಲಪ್ಪ ಆಗಲೂರು, ಸುರೇಶ್, ರಾಜು ಆಗಲೂರು ಸೇರಿದಂತೆ 28ನೇ ವಾರ್ಡಿನ ಅನೇಕ ನಿವಾಸಿಗಳು ಭಾಗವಹಿಸಿದ್ದರು. ಎಲ್ಲರೂ ಒಕ್ಕೊರಲಿನಿಂದ ಕೂಡಲೇ ಟವರ್ ನಿರ್ಮಾಣವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ನಗರಸಭೆ ಮ್ಯಾನೇಜರ್ ಷಣ್ಮುಖಪ್ಪ ಐಲಿ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು. ಜನರು ವಾಸಿಸುವ ಪ್ರದೇಶದಲ್ಲಿ ಟವರ್ ನಿರ್ಮಾಣಕ್ಕೆ ವಿರೋಧವಿರುವ ವಿಷಯವನ್ನು ಮಾನ್ಯ ಪೌರಾಯುಕ್ತರ ಗಮನಕ್ಕೆ ತಂದು, ತಕ್ಷಣವೇ ಅಗತ್ಯವಿರುವ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...