Home ಸುದ್ದಿ  ನಗರಸಭೆಯ ನಿರ್ಲಕ್ಷ್ಯಕ್ಕೆ ಆಕ್ರೋಶ: ಸಾಹಿತಿ ಎಸ್.ವಿ. ಪಾಟೀಲ್ ಗುಂಡೂರ್ ಮನೆ ಮುಂದೆಯೇ ಮಲಿನ ನೀರು.
ಸುದ್ದಿ

 ನಗರಸಭೆಯ ನಿರ್ಲಕ್ಷ್ಯಕ್ಕೆ ಆಕ್ರೋಶ: ಸಾಹಿತಿ ಎಸ್.ವಿ. ಪಾಟೀಲ್ ಗುಂಡೂರ್ ಮನೆ ಮುಂದೆಯೇ ಮಲಿನ ನೀರು.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ನಗರದ 30ನೇ ವಾರ್ಡ್‌ನ ವಿರುಪಾಪುರ ಪ್ರದೇಶದಲ್ಲಿ ವಾಸವಾಗಿರುವ ಖ್ಯಾತ ಸಾಹಿತಿ ಎಸ್.ವಿ. ಪಾಟೀಲ್ ಗುಂಡೂರ್ ಅವರ ನಿವಾಸದ ಎದುರೇ ಒಳಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಚರಂಡಿ ತುಂಬಿ ಹರಿಯುತ್ತಿರುವ ಕಲುಷಿತ ನೀರು ರಸ್ತೆಯಲ್ಲೆಲ್ಲಾ ಹರಡಿದ್ದು, ಇಡೀ ಪ್ರದೇಶವೇ ಕೊಳಚೆ ಪ್ರದೇಶದಂತೆ ಮಾರ್ಪಟ್ಟಿದೆ. ಇದರಿಂದಾಗಿ ಸ್ಥಳೀಯರು ಮತ್ತು ಸುತ್ತ ಮುತ್ತಲ ನಿವಾಸಿಗಳು ಸಾಹಿತಿಗಳ ಕುಟುಂಬವು  ಸಹ ದುರ್ನಾತ ಹಾಗೂ ಕೊಳಚೆ ನೀರು ನಡುವೆ ನರಕಯಾತನೆ ಅನುಭವಿಸುವಂತಾಗಿದೆ.

ಈ ಗಂಭೀರ ಸಮಸ್ಯೆಯ ಕುರಿತು ಸಾಹಿತಿ ಗುಂಡೂರ್ ಅವರು ಕಳೆದ ಎಂಟು ತಿಂಗಳಿಂದ ನಗರಸಭೆಗೆ ಪದೇ ಪದೇ ಮನವಿ ಸಲ್ಲಿಸಿದ್ದರೂ, ಅಧಿಕಾರಿಗಳು ಮಾತ್ರ ಕ್ಯಾರೇ ಎನ್ನದೆ ನಿರ್ಲಕ್ಷ್ಯ ವಹಿಸಿದ್ದಾರೆ. ನಗರದ ಸ್ವಚ್ಛತೆಗೆ ದೊಡ್ಡಮಟ್ಟದ ಭರವಸೆಗಳನ್ನು ನೀಡುವ ಆಡಳಿತ ಮಂಡಳಿ, ನಿವಾಸಿಗಳು ಮತ್ತು ಸಾಹಿತಿಯೊಬ್ಬರ ಮನೆಯ ಮುಂದೆಯೇ ಉದ್ಭವಿಸಿರುವ ಇಂತಹ ಅನಾರೋಗ್ಯ ಕಾರಕ ಸಮಸ್ಯೆ ಬಗೆಹರಿಸಲು ವಿಫಲವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕಲುಷಿತ ವಾತಾವರಣದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೂಡಲೇ ನಗರಸಭೆ ಎಚ್ಚೆತ್ತುಕೊಂಡು, ತಡೆಹಿಡಿಯಲಾದ ಒಳಚರಂಡಿ ದುರಸ್ತಿಯನ್ನು ತಕ್ಷಣವೇ ಕೈಗೊಳ್ಳಬೇಕು ಮತ್ತು ತ್ಯಾಜ್ಯ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಬೇಕೆಂದು ಪ್ರಜ್ಞಾವಂತ ನಾಗರಿಕರು ಮತ್ತು ಸಾಹಿತಿ ಅಭಿಮಾನಿಗಳು ತೀವ್ರವಾಗಿ ಒತ್ತಾಯಿಸಿದ್ದಾರೆ.

Share
Related Articles
ಅಂಕಣಸುದ್ದಿ

ಜನರ ಜೀವ ಉಳಿಸಲು ಜಾಗತಿಕ ಔಷಧಿ ದೈತ್ಯರ ಎದರು ಸೆಟೆದು ನಿಂತ ಧೀರ ಅಧಿಕಾರಿ ಐಎಎಸ್ ಅಧಿಕಾರಿ ಪಿ.ಎಚ್. ಕುರಿಯನ್.

ಮರ್ಚೆಡ್ ಡೇಸ್ | ವಿಶೇಷ ಲೇಖನ: ಅಧಿಕಾರವೆಂದರೆ ಜನರ ಸೇವೆ ಎಂಬುದನ್ನು ಜಗತ್ತಿಗೆ ತೋರಿಸಿದ ಅಪರೂಪದ...

ಸುದ್ದಿ

ಡ್ರೋನ್ ಕಣ್ಣಲ್ಲಿ ಸೆರೆಯಾಯ್ತು ದೇವಿರಮ್ಮ ಬೆಟ್ಟದ ಅದ್ಭುತ ವೈಭವ: ಜನಸಾಗರದ ನಡುವೆ ರಕ್ಷಣಾ ಪಡೆಯ ಶ್ಲಾಘನೀಯ ಸೇವ.

ಮರ್ಚೆಡ್ ಡೇಸ್ ಸುದ್ದಿ|ಚಿಕ್ಕಮಂಗಳೂರು. ಚಿಕ್ಕಮಗಳೂರು :ತಾಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರುವ ಸುಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ಭಕ್ತಿಭಾವದ ಪರಾಕಾಷ್ಠೆ...

ಸುದ್ದಿ

ಆಕಾಶದಲ್ಲೇ ಬೆಳಕಿನ ಮಹಾಸಂಗ್ರಾಮ! ಶತಮಾನಗಳ ಸಂಪ್ರದಾಯಕ್ಕೆ ಸಾಕ್ಷಿಯಾದ ಕೇರಳದ ತ್ರಿಶೂರ್ ಪೂರಂನ ‘ವೆಡಿಕ್ಕೆಟ್ಟು’ ವೈಭವ.

  ಮರ್ಚೆಡ್ ಡೇಸ್ ಸುದ್ದಿ| ವಿಶೇಷ ವರದಿ ಭಕ್ತಿ, ಸಂಪ್ರದಾಯ ಮತ್ತು ಪಟಾಕಿಗಳ ಅಬ್ಬರದ ಅಪರೂಪದ...

ಸುದ್ದಿ

ಹಾಲುಮತದ ಪುಣ್ಯಕಾಶಿ ಹುಲಜಂತಿಯಲ್ಲಿ ಕಲಿಯುಗದ ಪವಾಡ: ಮಾಳಿಂಗರಾಯನ ಶಿಖರಕ್ಕೆ ಶಿವ-ಪಾರ್ವತಿಯರಿಂದ ರೇಷ್ಮೆ ಮುಂಡಾಸು ಸೇವೆ.

ಮರ್ಚೆಡ್ ಡೇಸ್ ಸುದ್ದಿ|ಹುಲಿಜಂತಿ. ಹುಲಿಜಂತಿ:ಹಾಲುಮತದ ಶ್ರದ್ಧಾ ಕೇಂದ್ರ ಹುಲಜಂತಿ ಕ್ಷೇತ ಸಮಸ್ತ ಹಾಲುಮತ ಸಂಸ್ಕೃತಿಯ ಆರಾಧ್ಯ...