Home ಸುದ್ದಿ ಎಂ.ಪಿ. ಪ್ರಕಾಶ್ ಅವರದ್ದು ಸಜ್ಜನಿಕೆಯ ರಾಜಕಾರಣ; ಸ್ಮರಣೀಯ ಕಾರ್ಯಕ್ರಮದಲ್ಲಿ ಗಣ್ಯರ ಗುಣಗಾನ.
ಸುದ್ದಿ

ಎಂ.ಪಿ. ಪ್ರಕಾಶ್ ಅವರದ್ದು ಸಜ್ಜನಿಕೆಯ ರಾಜಕಾರಣ; ಸ್ಮರಣೀಯ ಕಾರ್ಯಕ್ರಮದಲ್ಲಿ ಗಣ್ಯರ ಗುಣಗಾನ.

Share
Share

ಮರ್ಚೇಡ್ ಡೇಸ್ ಸುದ್ದಿ.

ಹೂವಿನಹಡಗಲಿ: ಹೂವಿನಹಡಗಲಿಯ ಎಂ.ಪಿ. ಪ್ರಕಾಶ್ ಪ್ರತಿಷ್ಠಾನ ಹಾಗೂ ರಂಗಭಾರತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರಿಯ ಮುತ್ಸದ್ದಿ ಎಂ.ಪಿ. ಪ್ರಕಾಶ್ ಅವರ ಜನ್ಮದಿನದ ಅಂಗವಾಗಿ ಅವರ ಪುತ್ಥಳಿ ಅನಾವರಣ ಸಮಾರಂಭವು ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುತ್ಥಳಿ ಅನಾವರಣಗೊಳಿಸಿದ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರಕಾಶ್ ಅವರನ್ನು ಸಜ್ಜನ ಹಾಗೂ ಅಜಾತಶತ್ರು ರಾಜಕಾರಣಿ ಎಂದು ಬಣ್ಣಿಸಿ, ಅವರ ಅಗಲುವಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಎಂ.ಪಿ. ಪ್ರಕಾಶ್ ಅವರು ಎಂದಿಗೂ ಜಾತಿವಾದಿಯಾಗಿರಲಿಲ್ಲ, ಮಠಾಧೀಶರ ದುರ್ಬಳಕೆ ಮಾಡಿಕೊಂಡವರಲ್ಲ. ರಾಜಕಾರಣದಲ್ಲಿ ಓದುವ ಹವ್ಯಾಸವಿರುವ ಅಪರೂಪದ ವ್ಯಕ್ತಿತ್ವ ಅವರದು. ನಾನು ಅವರನ್ನು ನನ್ನ ಮಾರ್ಗದರ್ಶಕ ಎಂದು ಭಾವಿಸುತ್ತೇನೆ,” ಎಂದರು. ಇದೇ ಸಂದರ್ಭದಲ್ಲಿ ಹಡಗಲಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಎಂ.ಪಿ. ಪ್ರಕಾಶ್ ಅವರ ಹೆಸರಿಡಬೇಕೆಂಬ ಸ್ಥಳೀಯರ ಒತ್ತಾಯಕ್ಕೆ ಸ್ಪಂದಿಸಿದ ಅವರು, ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿವಿಧ ಕ್ಷೇತ್ರಗಳ ಗಣ್ಯರು ಪ್ರಕಾಶ್ ಅವರ ವ್ಯಕ್ತಿತ್ವವನ್ನು ಸ್ಮರಿಸಿದರು. ಖ್ಯಾತ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರು ಪ್ರಕಾಶ್ ಅವರಲ್ಲಿದ್ದ ಸಾಂಸ್ಕೃತಿಕ ಹೃದಯವನ್ನು ಶ್ಲಾಘಿಸಿದರೆ, ಸಂಸದ ತುಕಾರಾಮ್ ಹಾಗೂ ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಅವರು ಪ್ರಕಾಶ್ ಅವರ ಜನಪರ ಹೋರಾಟ ಮತ್ತು ಸಮಾಜವಾದಿ ಚಿಂತನೆಗಳನ್ನು ನೆನಪಿಸಿಕೊಂಡರು. ಶಾಸಕ ಕೃಷ್ಣನಾಯ್ಕ, ಅಮರೇಗೌಡ ಬಯ್ಯಾಪುರ, ಶಾಸಕಿ ಲತಾ ಮಲ್ಲಿಕಾರ್ಜುನ ಹಾಗೂ ಪಿ.ಟಿ. ಪರಮೇಶ್ವರನಾಯ್ಕ ಸೇರಿದಂತೆ ಹಲವು ಗಣ್ಯರು ಪ್ರಕಾಶ್ ಅವರ ಅಭಿವೃದ್ಧಿಪರ ದೂರದೃಷ್ಟಿ ಮತ್ತು ಸಾಂಸ್ಕೃತಿಕ ಕೊಡುಗೆಗಳನ್ನು ಕೊಂಡಾಡಿದರು.

ಈ ಕಾರ್ಯಕ್ರಮಕ್ಕೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಲಿಂಗನಾಯ್ಕನಹಳ್ಳಿ ಜಂಗಮ ಕ್ಷೇತ್ರದ ಚನ್ನವೀರ ಶಿವಯೋಗಿಗಳು, ಹಡಗಲಿ ಗವಿಮಠದ ಡಾ. ಹಿರಿಶಾಂತ ವೀರ ಮಹಾಸ್ವಾಮಿಗಳು ಹಾಗೂ ಹಿರೇಮಲ್ಲನಕೇರಿ ಮಠದ ಚನ್ನಬಸವ ಮಹಾಸ್ವಾಮಿಗಳು ನೇತೃತ್ವ ವಹಿಸಿದ್ದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಪ್ರೊ. ಶಾಂತಮೂರ್ತಿ ಬಿ. ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸ್ಮರಣೀಯ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎಸ್. ಪಾಟೀಲ್, ಅನ್ನಪೂರ್ಣ ತುಕಾರಾಮ್, ರಾಘವೇಂದ್ರ ಹಿಟ್ನಾಳ್, ಗಣೇಶ್ ಪ್ರಸಾದ್, ಮಾಜಿ ಶಾಸಕ ಬಿ. ಚಂದ್ರನಾಯ್ಕ, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ್, ರಂಗಕರ್ಮಿ ಶ್ರೀನಿವಾಸ ಕಪ್ಪಣ್ಣ, ಪ್ರತಿಷ್ಠಾನದ ಕಾರ್ಯಾಧ್ಯಕ್ಷೆ ಸುಮಾ ವಿಜಯ್ ಹಾಗೂ ಮುರುಗೇಶ್ ತುರುಕಾಣಿ ಸೇರಿದಂತೆ ಅನೇಕ ಗಣ್ಯರು, ಕಲಾಭಿಮಾನಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...