Home ಸುದ್ದಿ ಗಾನಕೋಗಿಲೆ ಎಸ್. ಜಾನಕಮ್ಮ ಅವರ ಸ್ಮರಣಾರ್ಥ ಮೈಸೂರಿನಲ್ಲಿ ಸಂಗೀತ ಮೆಮೋರಿಯಲ್ ನಿರ್ಮಾಣ: ಹಂಸಲೇಖ ಘೋಷಣೆ.
ಸುದ್ದಿ

ಗಾನಕೋಗಿಲೆ ಎಸ್. ಜಾನಕಮ್ಮ ಅವರ ಸ್ಮರಣಾರ್ಥ ಮೈಸೂರಿನಲ್ಲಿ ಸಂಗೀತ ಮೆಮೋರಿಯಲ್ ನಿರ್ಮಾಣ: ಹಂಸಲೇಖ ಘೋಷಣೆ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು, ದಕ್ಷಿಣ ಭಾರತದ ಗಾನಕೋಗಿಲೆ ಎಸ್. ಜಾನಕಿ ಅವರ ಅಂತಿಮ ವಿಶ್ರಾಂತಿಯ ತಾಣವಾಗಬೇಕೆಂಬ ಅವರ ಅಪೇಕ್ಷೆಯನ್ನು ಸಾದರಪಡಿಸುತ್ತಿದೆ. ಹೈದರಾಬಾದ್‌ನ ಜೀವನವನ್ನು ತೊರೆದು, ತಮ್ಮ ಪ್ರೀತಿಯ ಮಗನ ನೆನಪಿನೊಂದಿಗೆ ಮೈಸೂರಿನಲ್ಲಿ ನೆಲೆಸಿದ್ದ ಅವರು, ತಮ್ಮ ಜೀವನದ ಕೊನೆಯ ಕ್ಷಣಗಳನ್ನು ಇಲ್ಲಿಯೇ ಕಳೆಯಲು ಮತ್ತು ಅಂತಿಮ ಉಸಿರನ್ನು ಇಲ್ಲೇ ಬಿಡಲು ಬಯಸಿದ್ದರು. ಇದಕ್ಕಾಗಿ ಅವರು ತಮ್ಮ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿಕೊಳ್ಳಲು ಮೈಸೂರಿನಲ್ಲಿ ಎರಡು ಎಕರೆ ಜಮೀನನ್ನು ಕೂಡ ಖರೀದಿಸಿದ್ದರು.

ಈ ದುಃಖದ ಸಂದರ್ಭದಲ್ಲಿ, ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಗಾನಕೋಗಿಲೆ ಅವರ ಸ್ಮರಣಾರ್ಥವಾಗಿ ಮೈಸೂರಿನಲ್ಲಿ ‘ಎಸ್ ಜಾನಕಮ್ಮ ಹೆಸರಿನಲ್ಲಿ ಸಂಗೀತ ಮೆಮೋರಿಯಲ್’ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ. ಅವರ ಈ ನಿರ್ಧಾರಕ್ಕೆ ಜಾನಕಿ ಅವರ ಶಿಷ್ಯ ವರ್ಗ ಸೇರಿದಂತೆ ಸಂಗೀತಾಸಕ್ತರು ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಮೆಮೋರಿಯಲ್ ನಿರ್ಮಾಣದ ಮೂಲಕ ಮೈಸೂರಿನಲ್ಲಿ ಎಸ್. ಜಾನಕಿ ಅವರ ಸಂಗೀತ ಪಯಣ ಮತ್ತು ಅವರ ನೆನಪುಗಳನ್ನು ಚಿರಸ್ಥಾಯಿಗೊಳಿಸಲು ಸಂಘ-ಸಂಸ್ಥೆಗಳು ಕೈಜೋಡಿಸಲಿವೆ. ಗಾನಗಂಧರ್ವಿಯ ಸಂಗೀತ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಈ ಸ್ಮಾರಕವು ಭವಿಷ್ಯದ ಪೀಳಿಗೆಗೆ ಪ್ರೇರಣೆಯಾಗಲಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...