Home ಸುದ್ದಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ: ಅನುತ್ತೀರ್ಣ ವಿದ್ಯಾರ್ಥಿಗಳಿಗೆ ‘ಗೋಲ್ಡನ್ ಚಾನ್ಸ್’ ಪರೀಕ್ಷೆ ವೇಳಾಪಟ್ಟಿ ಪ್ರಕಟಣೆ.
ಸುದ್ದಿ

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ: ಅನುತ್ತೀರ್ಣ ವಿದ್ಯಾರ್ಥಿಗಳಿಗೆ ‘ಗೋಲ್ಡನ್ ಚಾನ್ಸ್’ ಪರೀಕ್ಷೆ ವೇಳಾಪಟ್ಟಿ ಪ್ರಕಟಣೆ.

Share
Share

 

ಮರ್ಚೆಡ್ ಡೇಸ್ ಸುದ್ದಿ .

ಬಳ್ಳಾರಿ : ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗೆ ಇದೀಗ ಸಂತಸದ ಸುದ್ದಿ ಲಭಿಸಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಸಬ್ಜೆಕ್ಟ್ ಗಳ ಪರೀಕ್ಷೆಗಳನ್ನು ಬರೆಯಲು ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗಾಗಿ ವಿಶ್ವವಿದ್ಯಾಲಯವು ಅಧಿಕೃತವಾಗಿ ‘ಗೋಲ್ಡನ್ ಚಾನ್ಸ್’ ಪರೀಕ್ಷಾ ಅವಕಾಶವನ್ನು ಕಲ್ಪಿಸಿದೆ. ಈ ಕುರಿತಾದ ವೇಳಾಪಟ್ಟಿ ಮತ್ತು ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗವು ಪ್ರಕಟಿಸಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿದೆ.

ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಪದವಿ ಕಾಲೇಜುಗಳಲ್ಲಿ ಶಿಕ್ಷಣ ಪಡೆದು, ವಿವಿಧ ಕಾರಣಗಳಿಂದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ವಿಶೇಷ ಅವಕಾಶ ಒದಗಿಸಲಾಗಿದೆ. ಈಗಾಗಲೇ ಪರೀಕ್ಷಾ ಶುಲ್ಕವನ್ನು ಪಾವತಿಸಿರುವ ವಿದ್ಯಾರ್ಥಿಗಳಿಗೆ,  ಪರೀಕ್ಷಾ ದಿನಾಂಕಗಳನ್ನು ಜುಲೈ 27.07.2026 ರಿಂದ 12 ಎಂಟು 2026 ರವರೆಗೆ ಇದರೊಳಗೆ ಹಾಲ್ ಟಿಕೆಟ್ ವಿತರಿಸಲಾಗುವ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತಿಳಿಸಿದೆ.

ಇನ್ನೂ ಪರೀಕ್ಷಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳು ತಡಮಾಡದೆ, ಕೂಡಲೇ ತಮ್ಮ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಬೇಕು. ಪ್ರಾಂಶುಪಾಲರ ಕಚೇರಿಗೆ ಭೇಟಿ ನೀಡಿ, ವಿಷಯವಾರು ನಿಗದಿತ ಶುಲ್ಕವನ್ನು ಪಾವತಿಸುವ ಮೂಲಕ ಗೋಲ್ಡನ್ ಚಾನ್ಸ್ ಪರೀಕ್ಷೆಗೆ ನೋಂದಾಯಿಸಿಕೊಳ್ಳಬೇಕು ಎಂದು ವಿಶ್ವವಿದ್ಯಾಲಯವು ಸೂಚನೆ ನೀಡಿದೆ. ಈ ಪ್ರಕ್ರಿಯೆಯು ಅಂತಿಮ ಗಡುವಿನೊಳಗೆ ಪೂರ್ಣಗೊಳ್ಳುವುದು ಅವಶ್ಯಕವಾಗಿದೆ.

2017 ರಿಂದ ಈವರೆಗೂ ಗೋಲ್ಡನ್ ಚಾನ್ಸ್ ಅವಕಾಶ ಇಲ್ಲದೆ ಅನೇಕ ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಲಾಗದೆ ಸಂಕಷ್ಟದಲ್ಲಿದ್ದರು. ಈ ಕುರಿತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಸಂಘವು ನಿರಂತರವಾಗಿ ರಾಜ್ಯ ಸರ್ಕಾರ, ಉನ್ನತ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿ ಸಲ್ಲಿಸಿತ್ತು. ಪ್ರಾಧ್ಯಾಪಕರ ಸಂಘದ ಈ ಹೋರಾಟದ ಫಲವಾಗಿ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಅವಕಾಶವನ್ನು ಒದಗಿಸಲಾಗಿದೆ.

ಈ ವಿಶೇಷ ಅವಕಾಶವನ್ನು ಕಲ್ಪಿಸಿರುವ ಕುಲಪತಿಗಳು ಹಾಗೂ ಪರೀಕ್ಷಾ ವಿಭಾಗದ ರಿಜಿಸ್ಟ್ರಾರ್‌ಗಳ ಕ್ರಮವನ್ನು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಡಾ. ಕರಿ ಗೂಳಿ ಅವರನ್ನು  ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳು

ಈ ಸುವರ್ಣಾವಕಾಶವನ್ನು ಸಮರ್ಥವಾಗಿ ಬಳಸಿಕೊಂಡು, ಕಠಿಣ ಪರಿಶ್ರಮದ ಮೂಲಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ತಮ್ಮ ಪದವಿಯನ್ನು ಪೂರ್ಣಗೊಳಿಸಿಕೊಳ್ಳಬೇಕೆಂದು ಕೋರಲಾಗಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...