Home ಸುದ್ದಿ ರಸ್ತೆ ಅಗಲೀಕರಣಕ್ಕೆ ಮಾರಾಮಾರಿ: ಎರಡು ಗುಂಪುಗಳ ನಡುವೆ ಸಂಘರ್ಷ, ಇಬ್ಬರು ಗಂಭೀರ ಸ್ಥಿತಿ.
ಸುದ್ದಿ

ರಸ್ತೆ ಅಗಲೀಕರಣಕ್ಕೆ ಮಾರಾಮಾರಿ: ಎರಡು ಗುಂಪುಗಳ ನಡುವೆ ಸಂಘರ್ಷ, ಇಬ್ಬರು ಗಂಭೀರ ಸ್ಥಿತಿ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಸಿಂಧನೂರು: ಮಸ್ಕಿ ಕ್ಷೇತ್ರದ ಗುಂಡ ಗ್ರಾಮದಲ್ಲಿ ರಸ್ತೆ ಅಗಲೀಕರಣದ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಭೀಕರ ಮಾರಾಮಾರಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೂನ್ 17 ರಂದು ನಡೆದಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯ ತಾರಕಕ್ಕೇರಿ ಎರಡು ಗುಂಪುಗಳು ಪರಸ್ಪರ ಹಲ್ಲೆ ನಡೆಸಿಕೊಂಡಿವೆ.

ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗುತ್ತಿದ್ದಂತೆ, ಒಂದು ಗುಂಪು ಈ ಕಾಮಗಾರಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರೆ, ಮತ್ತೊಂದು ಗುಂಪು ಯಾವುದೇ ಅಡ್ಡಿಯಿಲ್ಲದೆ ಕಾಮಗಾರಿ ಮುಂದುವರಿಸಬೇಕೆಂದು ಪಟ್ಟು ಹಿಡಿದಿತ್ತು. ಈ ವಿಚಾರವೇ ಎರಡು ಗುಂಪುಗಳ ನಡುವಿನ ಗಲಾಟೆಗೆ ಪ್ರಮುಖ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಮಲ್ಲನಗೌಡ ಮತ್ತು ಯಂಕನಗೌಡ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಂಕನಗೌಡರಿಗೆ ಹೆಚ್ಚಿನ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ಗಾಯಾಳು ಮಲ್ಲನಗೌಡ ಅವರನ್ನು ರಾಯಚೂರಿನ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸಿಂಧನೂರು ಡಿವೈಎಸ್‌ಪಿ ಚಂದ್ರಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಡಿ.ಆರ್. ಮತ್ತು ಸಿವಿಲ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸದ್ಯ ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವರದಿಯಾಗಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...