Home ಸುದ್ದಿ ಗಂಗಾವತಿಯ ಶಿಕ್ಷಕ ಶರಣಬಸಪ್ಪಗೆ ಪಿಎಚ್.ಡಿ. ಪದವಿ: ಅರ್ಥಶಾಸ್ತ್ರದಲ್ಲಿ ಸಂಶೋಧನಾ ಸಾಧನೆ.
ಸುದ್ದಿ

ಗಂಗಾವತಿಯ ಶಿಕ್ಷಕ ಶರಣಬಸಪ್ಪಗೆ ಪಿಎಚ್.ಡಿ. ಪದವಿ: ಅರ್ಥಶಾಸ್ತ್ರದಲ್ಲಿ ಸಂಶೋಧನಾ ಸಾಧನೆ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ತಾಲೂಕಿನ ಕೇಸರಹಟ್ಟಿ ಕರ್ನಾಟಕ ಪಬ್ಲಿಕ್ ಶಾಲೆ/ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶರಣಬಸಪ್ಪ ಅವರು ಪ್ರತಿಷ್ಠಿತ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ. ಪದವಿ ಪಡೆದು ಸಾಧನೆಯ ಶಿಖರವೇರಿದ್ದಾರೆ.

ಶರಣಬಸಪ್ಪ ಅವರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನಾಯಕರ ಹೊನ್ನೂರಸ್ವಾಮಿ ಅವರ ಮಾರ್ಗದರ್ಶನದಲ್ಲಿ “ಆನ್ ಎಕನಾಮಿಕ್ ಅನಾಲಿಸ್ ಆಫ್ ಅಗ್ರೋ-ಬೇಸ್ಡ್ ಇಂಡಸ್ಟೀಸ್ ಇನ್ ಕೊಪ್ಪಳ ಡಿಸ್ಟ್ರಿಕ್ಟ್” (ಕೊಪ್ಪಳ ಜಿಲ್ಲೆಯ ಕೃಷಿ ಆಧಾರಿತ ಕೈಗಾರಿಕೆಗಳ ಆರ್ಥಿಕ ವಿಶ್ಲೇಷಣೆ) ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಈ ಮಹತ್ವದ ಸಂಶೋಧನಾ ಕಾರ್ಯಕ್ಕಾಗಿ ವಿಶ್ವವಿದ್ಯಾನಿಲಯವು ಅವರಿಗೆ ಪಿಎಚ್.ಡಿ. ಪದವಿಯನ್ನು ಪ್ರದಾನ ಮಾಡಿದೆ.

ವೃತ್ತಿಯಲ್ಲಿ ಶಿಕ್ಷಕರಾಗಿದ್ದರೂ, ನಿರಂತರ ಅಧ್ಯಯನ ಮತ್ತು ಸಂಶೋಧನೆಯಲ್ಲಿ ಆಸಕ್ತಿ ಹೊಂದಿದ್ದ ಶರಣಬಸಪ್ಪ ಅವರ ಈ ಸಾಧನೆಯು ಗಂಗಾವತಿ ತಾಲೂಕು, ಕೇಸರಹಟ್ಟಿ ಗ್ರಾಮ ಹಾಗೂ ಇಡೀ ಶಿಕ್ಷಣ ಕ್ಷೇತ್ರಕ್ಕೆ ಕೀರ್ತಿ ತಂದಿದೆ. ಬೋಧನಾ ವೃತ್ತಿಯೊಂದಿಗೆ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಅವರು ಇತರರಿಗೆ ಮಾದರಿಯಾಗಿದ್ದಾರೆ.

ಶರಣಬಸಪ್ಪ ಅವರ ಈ ಸಾಧನೆಗೆ ಕುಟುಂಬದ ಸದಸ್ಯರು, ಮಾರ್ಗದರ್ಶಕ ಡಾ. ನಾಯಕರ ಹೊನ್ನೂರಸ್ವಾಮಿ, ಸಹೋದ್ಯೋಗಿಗಳು, ಸಂಶೋಧನಾ ಮಿತ್ರರು ಹಾಗೂ ಹಿತೈಷಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಅವರ ಮುಂದಿನ ಶೈಕ್ಷಣಿಕ ಮತ್ತು ಸಂಶೋಧನಾ ಜೀವನದಲ್ಲಿ ಮತ್ತಷ್ಟು ಯಶಸ್ಸು ಲಭಿಸಲಿ ಎಂದು ಶುಭ ಹಾರೈಸಿದ್ದಾರೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...