Home ಸುದ್ದಿ ಅಂಗವಿಕಲರ ಪಿಂಚಣಿ ಬಿಡುಗಡೆಗೆ ಆಗ್ರಹಿಸಿ ಇಂದು ಕನಕಗಿರಿಯಲ್ಲಿ ಬೃಹತ್ ಪ್ರತಿಭಟನೆ..
ಸುದ್ದಿ

ಅಂಗವಿಕಲರ ಪಿಂಚಣಿ ಬಿಡುಗಡೆಗೆ ಆಗ್ರಹಿಸಿ ಇಂದು ಕನಕಗಿರಿಯಲ್ಲಿ ಬೃಹತ್ ಪ್ರತಿಭಟನೆ..

Share
Share

 

ಮರ್ಚೇಡ್  ಡೇಸ್,

ಕನಕಗಿರಿ, ಜು.  ಅಂಗವಿಕಲರ ಮಾಸಿಕ ಜೀವನ ನಿರ್ವಹಣೆ ಭತ್ಯೆ (ಪಿಂಚಣಿ) ನಿಲುಗಡೆ, ವಾರ್ಷಿಕ ಆದಾಯ ಮಿತಿ ರದ್ದು, ಮಾಸಾಶನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಕನಕಗಿರಿ ತಾಲೂಕು ಸಮಿತಿ ವತಿಯಿಂದ ಇಂದು (ಜುಲೈ 20) ಕನಕಗಿರಿ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಂಗವಿಕಲರು, ಪಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರವು ಅಂಗವಿಕಲರ ಪಿಂಚಣಿಗೆ ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು ಕೇವಲ ₹32 ಸಾವಿರಕ್ಕೆ ನಿಗದಿಪಡಿಸಿರುವುದರಿಂದ ಸಾವಿರಾರು ಅರ್ಹ ಅಂಗವಿಕಲರು ಮಾಸಾಶನದಿಂದ ವಂಚಿತರಾಗಿದ್ದಾರೆ ಎಂದು ತಾಲೂಕು ಅಧ್ಯಕ್ಷ ರಾಮಣ್ಣ ರಾಠೋಡ್ ಆರೋಪಿಸಿದ್ದಾರೆ. ಬಿಪಿಎಲ್ ಕಾರ್ಡ್‌ಗೆ ₹1.20 ಲಕ್ಷ ವಾರ್ಷಿಕ ಆದಾಯ ಮಿತಿ ಜಾರಿಯಲ್ಲಿರುವಾಗ ಅಂಗವಿಕಲರಿಗೆ ಮಾತ್ರ ₹32 ಸಾವಿರ ಮಿತಿ ನಿಗದಿಪಡಿಸಿರುವುದು ಅವೈಜ್ಞಾನಿಕ ಹಾಗೂ ಅನ್ಯಾಯಕರ ಕ್ರಮವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂಗವಿಕಲರಿಗೆ ನೀಡುವ ಮಾಸಾಶನವು ಕೇವಲ ಕಲ್ಯಾಣ ಯೋಜನೆಯಲ್ಲ, ಗೌರವಯುತ ಬದುಕು ನಡೆಸಲು ಅಗತ್ಯವಾದ ಸಾಮಾಜಿಕ ಭದ್ರತೆಯಾಗಿದೆ ಎಂದು ತಾಲೂಕು ಕಾರ್ಯದರ್ಶಿ ಶಿವಗಂಗಪ್ಪ ಗೌರಿಪುರ ತಿಳಿಸಿದ್ದಾರೆ. ಆದಾಯ ಮಿತಿಯಿಂದ ಪಿಂಚಣಿ ಸ್ಥಗಿತಗೊಂಡ ಪರಿಣಾಮ ಔಷಧೋಪಚಾರ, ಚಿಕಿತ್ಸೆ, ಪ್ರಯಾಣ ವೆಚ್ಚ ಹಾಗೂ ದೈನಂದಿನ ಜೀವನ ನಿರ್ವಹಣೆಯಲ್ಲಿ ತೀವ್ರ ಸಂಕಷ್ಟ ಎದುರಾಗಿದ್ದು, ಸರ್ಕಾರ ಕೂಡಲೇ ಈ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಅಂಗವಿಕಲರ ಪಿಂಚಣಿಗೆ ವಿಧಿಸಿರುವ ವಾರ್ಷಿಕ ಆದಾಯ ಮಿತಿಯನ್ನು ರದ್ದುಪಡಿಸುವುದು ಅಥವಾ ಕನಿಷ್ಠ ₹1.20 ಲಕ್ಷಕ್ಕೆ ಹೆಚ್ಚಿಸುವುದು, ಮಾಸಿಕ ಜೀವನ ನಿರ್ವಹಣೆ ಭತ್ಯೆಯನ್ನು ₹10,000ಕ್ಕೆ ಏರಿಸುವುದು, ಅಂಗವಿಕಲರಿಗೆ ಮೀಸಲಿರುವ ಶೇ.5ರಷ್ಟು ಅನುದಾನವನ್ನು ನೇರವಾಗಿ ಫಲಾನುಭವಿಗಳಿಗೆ ನೀಡುವುದು, ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವುದು ಹಾಗೂ ಅರ್ಹ ಅಂಗವಿಕಲರಿಗೆ ಉಚಿತ ನಿವೇಶನ ಮಂಜೂರು ಮಾಡುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...