Home ಸುದ್ದಿ ಶ್ರೀ ಕನಕಚಲ ಫೋಟೋಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ.
ಸುದ್ದಿ

ಶ್ರೀ ಕನಕಚಲ ಫೋಟೋಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ.

Share
Share

 

 

 

 

ಮರ್ಚೆಡ್ ಡೇಸ್ ಸುದ್ದಿ

ಕನಕಗಿರಿ: ತಾಲೂಕಿನ ಶ್ರೀ ಕನಕಚಲ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಸಂಘದ (ರಿ) ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸರ್ವಸದಸ್ಯರ ಒಮ್ಮತದೊಂದಿಗೆ ಯಶಸ್ವಿಯಾಗಿ ನೆರವೇರಿತು. ಈ ಮೂಲಕ ಸಂಘದ ಮುಂದಿನ ಚಟುವಟಿಕೆಗಳಿಗೆ ಹೊಸ ಆಡಳಿತ ಮಂಡಳಿಯು ಅಸ್ತಿತ್ವಕ್ಕೆ ಬಂದಿದೆ.

ಸಂಘದ ಸರ್ವ ಸದಸ್ಯರ ಒಪ್ಪಿಗೆಯ ಮೇರೆಗೆ ನೂತನ ಪದಾಧಿಕಾರಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಲಾಗಿದೆ: ಗೌರವಾಧ್ಯಕ್ಷರಾಗಿ ಗೋಪಿನಾಥ ಬಾಂಡೆ, ಅಧ್ಯಕ್ಷರಾಗಿ ನಾಗರಾಜ್ ಬಾಂಡೆ, ಉಪಾಧ್ಯಕ್ಷರಾಗಿ ಸೋಮನಾಥ್ ಮಲ್ಲಾಪುರ್, ಕಾರ್ಯದರ್ಶಿಯಾಗಿ ಗಂಗಾಧರ್ ತಿಪ್ಪನಾಳ, ಸಹ ಕಾರ್ಯದರ್ಶಿಯಾಗಿ ಸಿದ್ದು ಅಂಗಡಿ ಹಾಗೂ ಖಜಾಂಚಿಯಾಗಿ ರಾಜಶೇಖರ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸಭೆಯಲ್ಲಿ ಪ್ರೀತಮ್ ಕುಂಬಾರ್, ಪಾಮಾಜಿ ಬೋಂದಡೆ, ಹರೀಶ್ ಕೋರಿಶೆಟ್ಟರ್, ಸಂಗಮೇಶ್ ಹುಲಿಹೈದರ್ ಸೇರಿದಂತೆ ತಾಲೂಕಿನ ಸಮಸ್ತ ಛಾಯಾಗ್ರಾಹಕ ಮಿತ್ರರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ, ಸಂಘದ ಅಭಿವೃದ್ಧಿಗಾಗಿ ಶ್ರಮಿಸಿದ ಮಾಜಿ ಅಧ್ಯಕ್ಷ ಪ್ರೀತಮ್ ಕುಂಬಾರ್ ಹಾಗೂ ಮಾಜಿ ಉಪಾಧ್ಯಕ್ಷ ಪಾಮಾಜಿ ಬೋಂದಡೆ ಅವರನ್ನು ನೂತನ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...