Home ಸುದ್ದಿ ರಾಯಚೂರು ಆರ್.ಎಸ್. ಅಂಚೆ ಕಚೇರಿ ಸ್ಥಳಾಂತರ.
ಸುದ್ದಿ

ರಾಯಚೂರು ಆರ್.ಎಸ್. ಅಂಚೆ ಕಚೇರಿ ಸ್ಥಳಾಂತರ.

Share
Share

 

ಮರ್ಚೆಡ್ ಡೇಸ್ ಸುದ್ದಿ|ರಾಯಚೂರು.

ರಾಯಚೂರು: ನಗರದ ರೈಲ್ವೇ ನಿಲ್ದಾಣದ ಸಮೀಪ ಕಾರ್ಯನಿರ್ವಹಿಸುತ್ತಿದ್ದ ರಾಯಚೂರು ಆರ್.ಎಸ್. ಅಂಚೆ ಕಚೇರಿಯನ್ನು, ಸಾರ್ವಜನಿಕರಿಗೆ ಇನ್ನಷ್ಟು ಸುಲಭ, ಗುಣಮಟ್ಟದ ಹಾಗೂ ಪರಿಣಾಮಕಾರಿ ಅಂಚೆ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಯಚೂರಿನ ನವೋದಯ ಮೆಡಿಕಲ್ ಕಾಲೇಜು ಆವರಣಕ್ಕೆ ಸ್ಥಳಾಂತರಿಸಲಾಗಿದೆ.

ನವೋದಯ ಮೆಡಿಕಲ್ ಕಾಲೇಜು ಆವರಣದಲ್ಲಿ ನೂತನವಾಗಿ ಆರಂಭಗೊಂಡಿರುವ ಈ ಅಂಚೆ ಕಚೇರಿಯಿಂದಾಗಿ, ಈ ಪ್ರದೇಶದ ಸಾರ್ವಜನಿಕರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಅಂಚೆ ಸೇವೆಗಳು ಮತ್ತಷ್ಟು ಸುಲಭವಾಗಿ ದೊರೆಯಲಿವೆ.

ಈ ಅಂಚೆ ಕಚೇರಿಯಲ್ಲಿ ಸ್ಪೀಡ್ ಪೋಸ್ಟ್, ನೋಂದಾಯಿತ ಅಂಚೆ, ಸಾಮಾನ್ಯ ಅಂಚೆ, ಪಾರ್ಸಲ್ ಸೇವೆ, ಅಂಚೆ ಜೀವ ವಿಮೆ, ಗ್ರಾಮೀಣ ಅಂಚೆ ಜೀವ ವಿಮೆ, ಅಂಚೆ ಉಳಿತಾಯ ಯೋಜನೆಗಳು, ಸುಕನ್ಯಾ ಸಮೃದ್ಧಿ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ ಹಾಗೂ ಕಿಸಾನ್ ವಿಕಾಸ್ ಪತ್ರ ಸೇರಿದಂತೆ ಇಲಾಖೆಯ ವಿವಿಧ ಸೇವೆಗಳು ಲಭ್ಯವಿರುತ್ತವೆ.

ರಾಯಚೂರು ಆರ್.ಎಸ್., ಎನ್.ಡಿ.ಎಸ್.ಒಯಲ್ಲಿ ನಿರ್ವಹಣೆಯಲ್ಲಿದ್ದ ಎಲ್ಲಾ ಅಂಚೆ ಉಳಿತಾಯ ಬ್ಯಾಂಕ್ ಖಾತೆಗಳು ಹಾಗೂ ಇತರೆ ಖಾತೆಗಳನ್ನು ರಾಯಚೂರು ಪ್ರಧಾನ ಅಂಚೆ ಕಚೇರಿಗೆ ವರ್ಗಾಯಿಸಲಾಗಿದ್ದು, ಸಂಬಂಧಿಸಿದ ಖಾತೆದಾರರು ತಮ್ಮ ಹಣಕಾಸು ವ್ಯವಹಾರಗಳು, ಪಾಸ್ ಬುಕ್ ನವೀಕರಣ, ಹಣ ಠೇವಣಿ, ಹಣ ಹಿಂಪಡೆಯುವಿಕೆ ಹಾಗೂ ಇತರೆ ಬ್ಯಾಂಕಿಂಗ್ ಸೇವೆಗಳಿಗಾಗಿ ರಾಯಚೂರು ಪ್ರಧಾನ ಅಂಚೆ ಕಚೇರಿಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಸಾರ್ವಜನಿಕರು ಹೊಸದಾಗಿ ಕಾರ್ಯಾರಂಭ ಮಾಡಿರುವ ನವೋದಯ ಎಜುಕೇಶನ್ ಟ್ರಸ್ಟ್ ಅಂಚೆ ಕಚೇರಿಯಲ್ಲಿ ಲಭ್ಯವಿರುವ ವಿವಿಧ ಅಂಚೆ ಹಾಗೂ ಹಣಕಾಸು ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರಾಯಚೂರು ಪ್ರಧಾನ ಅಂಚೆ ಕಚೇರಿ ಅಥವಾ ನವೋದಯ ಎಜುಕೇಶನ್ ಟ್ರಸ್ಟ್ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದೆಂದು ರಾಯಚೂರು ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...