Home ಸುದ್ದಿ ವಿಧಾನ ಪರಿಷತ್ (ಎಂಎಲ್ಸಿ) ಸ್ಥಾನಕ್ಕೆ ಅನಿಲ್ ಕುಮಾರ್ ಜಾಧವ್ ನಾಮನಿರ್ದೇಶನಕ್ಕೆ ಮನವಿ.
ಸುದ್ದಿ

ವಿಧಾನ ಪರಿಷತ್ (ಎಂಎಲ್ಸಿ) ಸ್ಥಾನಕ್ಕೆ ಅನಿಲ್ ಕುಮಾರ್ ಜಾಧವ್ ನಾಮನಿರ್ದೇಶನಕ್ಕೆ ಮನವಿ.

Share
Share

 

ಮರ್ಚೇಡ್ ಡೇಸ್ ಸುದ್ದಿ|ರಾಯಚೂರು.

ರಾಯಚೂರು: ಅನಿಲ್ ಕುಮಾರ್ ಜಾಧವ್ ಅವರಿಗೆ ವಿಧಾನ ಪರಿಷತ್. ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಮಾಡುವಂತೆ ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಶಿಫಾರಸು ಮಾಡಲು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಅವರ ಮುಖಾಂತರ ಮನವಿ ಪತ್ರ ಸಲ್ಲಿಸಲಾಗಿದೆ. ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಅನಿಲ್ ಜಾಧವ್ ಅವರು ಲೋಕಸಭೆ, ವಿಧಾನಸಭೆ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ವೋಟ್ ಚೋರಿ ಅಭಿಯಾನದಲ್ಲಿ ಮಹತ್ವದ ಪಾತ್ರ ವಹಿಸಿರುವುದು ಅಲ್ಲದೆ ಕ್ರೈಸ್ತ ನಿಗಮ ಮಂಡಳಿಗಾಗಿ ಅನೇಕ ಹೋರಾಟ ನಡೆಸಿದ್ದಾರೆ. ಪಕ್ಷ ಸಂಘಟನೆ ಮತ್ತು ವಿವಿಧ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡು ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ಅವರು ನಿರತರಾಗಿದ್ದಾರೆ.

ಹೈದರಾಬಾದ್ ಕರ್ನಾಟಕ ಭಾಗದಲ್ಲಿ 5 ವಿಧಾನ ಪರಿಷತ್ ಸದಸ್ಯ ಸ್ಥಾನಗಳು ಖಾಲಿ ಇದ್ದು, ಅದರಲ್ಲಿ ಒಂದು ಸ್ಥಾನ ಕ್ರೈಸ್ತ ಕೋಟಾದಲ್ಲಿ ಅನಿಲ್ ಜಾಧವ್ ಅವರಿಗೆ ನಾಮಿನೇಟ್ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕ್ರೈಸ್ತ ಹಕ್ಕು ಗಳ ಸಮಿತಿ ವತಿಯಿಂದ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿಕೊಳ್ಳಲಾಗಿದೆ. ಕ್ರೈಸ್ತ ಸಮುದಾಯದ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ সংখ্যালಮತರ ಅಭಿವೃದ್ಧಿಗಾಗಿ ಅನಿಲ್ ಜಾಧವ್ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ, ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ತಿಳಿಸಲಾಗಿದೆ.

ಈ ಭಾಗದಲ್ಲಿ 60 ವರ್ಷದಿಂದ ಕಾಂಗ್ರೆಸ್‌ಗೋಸ್ಕರ ಮತಗಳನ್ನು ನೀಡುತ್ತಾ ಇದ್ದಾರೆ ಆದರೆ ಅದರಲ್ಲಿ ಒಂದು ಎಂ.ಪಿ, ಎಂ.ಎಲ್.ಎ, ಎಂ.ಎಲ್.ಸಿ, ಮತ್ತು ಒಂದು ಜೆ.ಪಿ ಟಿಕೆಟ್ ಸಹ ನೀಡಿಲ್ಲ. ಅದಕ್ಕೋಸ್ಕರ ಈ ಸಲ 5 ಎಂ.ಎಲ್.ಸಿ ನಾಮಿನೇಟ್ ನಲ್ಲಿ ಒಂದು ಸ್ಥಾನ ಕ್ರೈಸ್ತ ಕೋಟಾದಲ್ಲಿ ನಾಮನಿರ್ದೇಶನ ಮಾಡುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಅವರನ್ನು ಭೇಟಿಯಾಗಿ ಎಂ.ಎಲ್.ಸಿ ನಾಮನಿರ್ದೇಶನ ಮಾಡಲು ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಶಿಫಾರಸು ಮಾಡಲು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಸಮುದಾಯದ ಕ್ರೈಸ್ತ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷರಾದ ಶಾಂತಕುಮಾರ್ ಬಿ. ಯದ್ಲಾಪೂರು, ಹಾಗೂ ಮುಖಂಡರು ರಾಜೇಶ್ ತಲಮಾರಿ, ಹಂಪಯ್ಯ, ಆಲ್ಬರ್ಟ್, ರವರು ಕಾಂಗ್ರೆಸ್ ಹೈಕಮಾಂಡ್‌ಗೆ ಶಿಫಾರಸು ಮಾಡಲು ಮನವಿ ಮಾಡಿಕೊಂಡರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...