Home ಸುದ್ದಿ ಗಂಗಾವತಿಯಲ್ಲಿ ಜೋರಾದ ಚದುರಂಗ ಕಣ: ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡ 350ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು.
ಸುದ್ದಿ

ಗಂಗಾವತಿಯಲ್ಲಿ ಜೋರಾದ ಚದುರಂಗ ಕಣ: ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡ 350ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು.

Share
Share

 

ಮರ್ಚೆಡ್ ಡೇಸ್ ಸುದ್ದಿ.|ಗಂಗಾವತಿ.

ಗಂಗಾವತಿ: ಅಖಂಡ ಗಂಗಾವತಿ ತಾಲೂಕಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ನಗರದ ಶ್ರೀಮತಿ ಹೆಚ್.ಆರ್. ಸರೋಜಮ್ಮ ಪ್ರೌಢಶಾಲೆಯ ಆವರಣದಲ್ಲಿ ತಾಲೂಕು ಮಟ್ಟದ ಚದುರಂಗ (ಚೆಸ್) ಸ್ಪರ್ಧೆಯು ಅತ್ಯಂತ ಸಂಭ್ರಮ ಹಾಗೂ ಉತ್ಸಾಹದಿಂದ ಜರುಗಿತು. ಬುದ್ಧಿಶಕ್ತಿ ಹಾಗೂ ಏಕಾಗ್ರತೆಗೆ ಸವಾಲೆನಿಸಿರುವ ಈ ಸ್ಪರ್ಧೆಯಲ್ಲಿ ತಾಲೂಕಿನ ನಾನಾ ಮೂಲೆಗಳಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸುಮಾರು 350ಕ್ಕೂ ಅಧಿಕ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಭಾಗವಹಿಸಿ ತಮ್ಮ ಚದುರಂಗ ಕೌಶಲವನ್ನು ಪ್ರದರ್ಶಿಸಿದರು.

ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಪರೀಕ್ಷಕರಾದ ಶ್ರೀಮತಿ ಸರಸ್ವತಿ ಜೋಡಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಮಾನಸಿಕ ದೃಢತೆ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತವೆ ಎಂದು ಅಭಿಪ್ರಾಯಪಟ್ಟರು. ಕ್ರೀಡಾ ಸ್ಫೂರ್ತಿಯೊಂದಿಗೆ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ನಾಗರಾಜ್, ತಾಲೂಕಾಧ್ಯಕ್ಷರಾದ ಯಂಕಪ್ಪ ತಳವಾರ್, ಹೆಚ್.ಆರ್. ಸರೋಜಮ್ಮ ಶಾಲೆಯ ಮುಖ್ಯೋಪಾಧ್ಯಾಯರಾದ ಯು.ಎಂ. ಬಸವರಾಜ್, ನಿವೃತ್ತ ದೈಹಿಕ ಶಿಕ್ಷಕರಾದ ಗವಿಸಿದ್ದಪ್ಪ ಹೊಸಬಾವಿ, ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಉಮಾ ಪಾಟೀಲ್ ಹಾಗೂ ಜಿಲ್ಲಾ ಖಜಾಂಚಿ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಮಹತ್ವದ ಕ್ರೀಡಾಕೂಟದಲ್ಲಿ ಕೊಟ್ಟೂರೇಶ್ವರ ಪ್ರೌಢಶಾಲೆಯ ಉಪ ಪ್ರಾಚಾರ್ಯರಾದ ರಾಮನಗೌಡ, ಗೌರವಾಧ್ಯಕ್ಷರಾದ. ಚಂದ್ರಶೇಖರ್ ಜಪಾಲ್, ಕೊಂಡಮಿ ಶಾಲೆಯ ದೈಹಿಕ ಶಿಕ್ಷಕರಾದ ಉಜ್ಜನಗೌಡ ಸೇರಿದಂತೆ ತಾಲೂಕಿನ ಸುಮಾರು 30ಕ್ಕೂ ಹೆಚ್ಚು ದೈಹಿಕ ಶಿಕ್ಷಣ ಶಿಕ್ಷಕರು ಸಕ್ರಿಯವಾಗಿ ಭಾಗವಹಿಸಿ, ಸ್ಪರ್ಧೆಯು ಯಶಸ್ವಿಯಾಗಿ ಹಾಗೂ ವ್ಯವಸ್ಥಿತವಾಗಿ ಜರುಗಲು ಶ್ರಮಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...