Home ಸುದ್ದಿ ರೋಟರಿ ಕ್ಲಬ್ ಕಿಷ್ಕಿಂದ ಗಂಗಾವತಿ: ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಯಶಸ್ವಿ.
ಸುದ್ದಿ

ರೋಟರಿ ಕ್ಲಬ್ ಕಿಷ್ಕಿಂದ ಗಂಗಾವತಿ: ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಯಶಸ್ವಿ.

Share
Share

 

ಮರ್ಚೆಡ್ ಡೇಸ್ ಸುದ್ದಿ.|ಗಂಗಾವತಿ

ಗಂಗಾವತಿಯ :ಎಸ್.ಎಸ್.ಎಲ್.ಆರ್ ಫಂಕ್ಷನ್ ಹಾಲಿನಲ್ಲಿ ಜರುಗಿದ ರೋಟರಿ ಕ್ಲಬ್ ಕಿಷ್ಕಿಂದ ಗಂಗಾವತಿಯ 2026-27ನೇ ಸಾಲಿನ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅತ್ಯಂತ ಸಂಭ್ರಮದಿಂದ ನೆರವೇರಿತು. ಹಿರಿಯ ಹೃದಯರೋಗ ತಜ್ಞ ಡಾ. ಜಿ. ಚಂದ್ರಪ್ಪ ಅವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ರೋಟರಿ ಸಂಸ್ಥೆಯು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ ಅನನ್ಯವಾದದ್ದು ಎಂದು ಪ್ರಶಂಸಿಸಿದರು. ಜಾಗತಿಕ ಮಟ್ಟದಲ್ಲಿ ಪೋಲಿಯೋ ನಿರ್ಮೂಲನೆಗೆ ಸಂಸ್ಥೆ ನೀಡಿರುವ ಕೊಡುಗೆ ಸ್ಮರಣೀಯ ಎಂದರು.

ಮಾಜಿ ಶಾಸಕ ಪರಣ್ಣ ಮುನವಳ್ಳಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಶಿಕ್ಷಣ, ಆರೋಗ್ಯ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ರೋಟರಿ ಸಂಸ್ಥೆ ಮಾಡುತ್ತಿರುವ ಕಾರ್ಯಗಳು ಶ್ಲಾಘನೀಯ. ಮಾನವ ಸೇವೆಯೇ ನಿಜವಾದ ದೇವಸೇವೆ ಎಂದು ನಂಬಿ ಈ ಸಂಸ್ಥೆ ಮುನ್ನಡೆಯುತ್ತಿರುವುದು ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ಡಿಸ್ಟ್ರಿಕ್ಟ್ ಗೌರ್ನರ್ ಆರ್.ಐ.ಡಿ.ಆರ್.ಟಿ.ಎನ್.ಪಿ.ಎಚ್.ಎಫ್ ತ್ರಿವಿಕ್ರಮ ಜೋಶಿ ಅವರು ನೂತನ ಅಧ್ಯಕ್ಷರಾದ ಪ್ರಶಾಂತ್ ಪರಗಿ ಹಾಗೂ ಪ್ರಧಾನ ಕಾರ್ಯದರ್ಶಿ ಸತೀಶ್ ಬಯಾರಿ ಅವರಿಗೆ ಅಧಿಕಾರ ಮತ್ತು ಪ್ರಮಾಣವಚನ ಬೋಧಿಸಿದರು. ಈ ವೇಳೆ ಮಾತನಾಡಿದ ಅವರು, ಭತ್ತದ ನಾಡು ಗಂಗಾವತಿಯಲ್ಲಿ ಮೂರು ತಿಂಗಳ ಹಿಂದೆ ಅಸ್ತಿತ್ವಕ್ಕೆ ಬಂದ ರೋಟರಿ ಕ್ಲಬ್ ಕಿಷ್ಕಿಂದ ಯುವಕರ ತಂಡವು ಉತ್ತಮ ಸೇವಾ ಕಾರ್ಯಗಳಲ್ಲಿ ತೊಡಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಮಹಿಳೆಯರಿಗೆ ಕ್ಯಾನ್ಸರ್ ಲಸಿಕಾ ಅಭಿಯಾನ ಹಾಗೂ ಪರಿಸರ ಸ್ವಚ್ಛತೆಯಂತಹ ಹತ್ತು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯೋದ್ಯಮಿ ಅಶೋಕ್ ಸ್ವಾಮಿ ಹೆರೂರ್, ಸಂತೋಷ್ ಕೆಲೋಜಿ, ಕಮಲ ಗುಮಾಸ್ತೆ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಇದೇ ವೇಳೆ ನೂತನ ಪದಾಧಿಕಾರಿಗಳನ್ನು ಹಾಗೂ ಆಗಮಿಸಿದ ಅತಿಥಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಮಹೇಶ್ ಸಾಗರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಬಸವರಾಜ ಕುಂಬಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಸುರೇಶ್ ಗೌರಪ್ಪ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...