Home ಸುದ್ದಿ ಅರಳಹಳ್ಳಿಯಲ್ಲಿ ಇದೆ ಜುಲೈ 29 ರಂದು ಶ್ರೀ ಶರಣಬಸವಾರ್ಯ ತಾತನವರ 17ನೇ ವರ್ಷದ ಶರಣೋತ್ಸವ ಹಾಗೂ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಲಿದೆ.
ಸುದ್ದಿ

ಅರಳಹಳ್ಳಿಯಲ್ಲಿ ಇದೆ ಜುಲೈ 29 ರಂದು ಶ್ರೀ ಶರಣಬಸವಾರ್ಯ ತಾತನವರ 17ನೇ ವರ್ಷದ ಶರಣೋತ್ಸವ ಹಾಗೂ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಲಿದೆ.

Share
Share

 

ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿ : ತಾಲೂಕಿನ ಅರಳಹಳ್ಳಿಯಲ್ಲಿ ಬರುವ ಜುಲೈ 29ರ ಬುಧವಾರದಂದು ನಾಡಿನ ಹರ, ಗುರು, ಚರಮೂರ್ತಿಗಳ ದಿವ್ಯ ಸಾನಿಧ್ಯದಲ್ಲಿ, ದಾಸೋಹ ಮೂರ್ತಿ ಪರಮ ಪೂಜ್ಯಶ್ರೀ ಶರಣಬಸವಾರ್ಯ ತಾತನವರ 17ನೇ ವರ್ಷದ ಶರಣೋತ್ಸವ ಹಾಗೂ ಜಾತ್ರಾ ಮಹೋತ್ಸವವು ನಾಡಿನ ಅಸಂಖ್ಯಾತ ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ಮತ್ತು ಅದ್ದೂರಿಯಾಗಿ ಜರುಗಲಿದೆ.

ಜಾತ್ರಾ ಮಹೋತ್ಸವದ ಅಂಗವಾಗಿ ಜುಲೈ 17ರಿಂದ ಆರಂಭಗೊಂಡು ಜುಲೈ 29ರವರೆಗೆ ಪ್ರತಿದಿನ ಶರಣರ ಜೀವನ ದರ್ಶನ ಹಾಗೂ ಆಧ್ಯಾತ್ಮ ಪ್ರವಚನ ಕಾರ್ಯಕ್ರಮಗಳು ಭಕ್ತರಿಗೆ ಆಧ್ಯಾತ್ಮಿಕ ಚಿಂತನೆಗಳನ್ನು ನೀಡುತ್ತಾ ಸಾಗಿವೆ.

ಜುಲೈ 29ರಂದು ಜಾತ್ರಾ ಮಹೋತ್ಸವದ ಮುಖ್ಯ ದಿನದಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ವಿಧಿ-ವಿಧಾನಗಳು ನಿಗದಿತಯಂತೆ ಸಂಭ್ರಮದಿಂದ ನೆರವೇರಲಿವೆ.

ನಾಡಿನ ಸಮಸ್ತ ಭಕ್ತಾದಿಗಳು ಈ ಮಹತ್ವದ ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಶರಣಬಸವಾರ್ಯ ತಾತನವರ ಕೃಪೆಗೆ ಪಾತ್ರರಾಗಬೇಕಾಗಿ ಅರಳಹಳ್ಳಿ ಬೃಹನ್ಮಠದ ವೇದಮೂರ್ತಿ ಶ್ರೀ ಗವಿಸಿದ್ದೇಶ್ವರ ತಾತನವರು ಭಕ್ತರಲ್ಲಿ ವಿನಂತಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...