Home ಸುದ್ದಿ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಎಸ್‌ಎಫ್‌ಐ ನೇತೃತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ.
ಸುದ್ದಿ

ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಎಸ್‌ಎಫ್‌ಐ ನೇತೃತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ.

Share
Share

 

ಮರ್ಚೆಡ್ ಡೇಸ್ ಸುದ್ದಿ|ರಾಯಚೂರು.

ಹಟ್ಟಿ: ಚಿನ್ನದ ಗಣಿ ಪಟ್ಟಣದಲ್ಲಿ ಎಸ್‌ಎಫ್‌ಐ ನೇತೃತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯು ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ಈ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಧೋರಣೆಗಳನ್ನು ಖಂಡಿಸಿ ಕರಪತ್ರಗಳನ್ನು ಹಂಚಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮುಖಂಡರು, ಕೂಡಲೇ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಬೃಹತ್ ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...