Home ಸುದ್ದಿ  ಮರ್ಚೆಡ್ ಡೇಸ್ ಕನ್ನಡ ದಿನಪತ್ರಿಕೆಯ ವರದಿಗೆ ಸ್ಪಂದಿಸಿದ ಬಳ್ಳಾರಿ ವಿವಿ: ವಿದ್ಯಾರ್ಥಿಗಳ ಪರೀಕ್ಷಾ ಗೊಂದಲ ಪರಿಹಾರ.
ಸುದ್ದಿ

 ಮರ್ಚೆಡ್ ಡೇಸ್ ಕನ್ನಡ ದಿನಪತ್ರಿಕೆಯ ವರದಿಗೆ ಸ್ಪಂದಿಸಿದ ಬಳ್ಳಾರಿ ವಿವಿ: ವಿದ್ಯಾರ್ಥಿಗಳ ಪರೀಕ್ಷಾ ಗೊಂದಲ ಪರಿಹಾರ.

Share
Share

 

ಮರ್ಚೆಡ್ ಡೇಸ್ ಸುದ್ದಿ|ಫಲ ಶ್ರುತಿ.

ಬಳ್ಳಾರಿ : 23-07-2026 ರಂದು ‘ಮರ್ಚೆಡ್ ಡೇಸ್’ ಕನ್ನಡ ದಿನಪತ್ರಿಕೆಯಲ್ಲಿ ಬಳ್ಳಾರಿ ವಿಶ್ವವಿದ್ಯಾನಿಲಯದ ಗೋಲ್ಡನ್ ಚಾನ್ಸ್ ಪರೀಕ್ಷಾ ವೇಳಾಪಟ್ಟಿಯಲ್ಲಿದ್ದ ಗೊಂದಲಗಳ ಕುರಿತು ವಿಶೇಷ ವರದಿ ಪ್ರಕಟವಾಗಿತ್ತು.

ಒಂದೇ ದಿನ ಮತ್ತು ಒಂದೇ ಸಮಯದಲ್ಲಿ ಎರಡು ಬೇರೆ ಬೇರೆ ಸಬ್ಜೆಕ್ಟ್ಸ್‌ಗಳ ಪರೀಕ್ಷೆಗಳನ್ನು ಬರೆಯಬೇಕಾದ ಅನಿವಾರ್ಯತೆ ಹಾಗೂ ಗೊಂದಲದಿಂದ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು.

ಮರ್ಚೆಡ್ ಡೇಸ್’ ಪತ್ರಿಕೆಯ ದಿಢೀರ್ ಹಾಗೂ ಪರಿಣಾಮಕಾರಿ ಸುದ್ದಿಗೆ ಸ್ಪಂದಿಸಿರುವ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ತಕ್ಷಣವೇ ಎಚ್ಚೆತ್ತುಕೊಂಡು ಪರಿಷ್ಕೃತ (Revised) ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, 27ನೇ ತಾರೀಕಿಗೆ ನಿಗದಿಯಾಗಿದ್ದ ಎರಡು ವಿಷಯಗಳಲ್ಲಿ ಒಂದು ಸಬ್ಜೆಕ್ಟ್ ಪರೀಕ್ಷೆಯನ್ನು 6ನೇ ತಾರೀಕಿಗೆ (06/08/2026) ಬದಲಾಯಿಸಿ, ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸರಾಗವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ.

ಬಡ ಹಾಗೂ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಧ್ವನಿಯಾಗಿ ನಿಂತ ‘ಮರ್ಚೆಡ್ ಡೇಸ್’ ದಿನಪತ್ರಿಕೆಯ ಕಾಳಜಿಗೆ ಹಾಗೂ ಇದಕ್ಕೆ ತಕ್ಷಣ ಸ್ಪಂದಿಸಿದ ಬಳ್ಳಾರಿ ವಿವಿ ಆಡಳಿತ ಮಂಡಳಿಗೆ ವಿದ್ಯಾರ್ಥಿ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...